Soujanya Case: ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ, ಸಂಪೂರ್ಣ ವಿವರ ಇಲ್ಲಿದೆ

Soujanya Case: ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ಇದೀಗ ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದೆ. ಈ ಪ್ರಕರಣವನ್ನು ಮರು ತನಿಖೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ಅಲ್ಲದೆ ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆ ಮಾಡಿ ವರದಿ ಸಲ್ಲಿಸುವಂತೆ ಮೂರು ತಿಂಗಳ ಗಡುವು ನೀಡಲಾಗಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದೆ. ಕಳೆದ ವರ್ಷವು ಧರ್ಮಸ್ಥಳದ ಸೌಜನ್ಯ ಪ್ರಕರಣವು ಹಲವು ಕಾರಣಗಳಿಗೆ ಚರ್ಚೆಯ ಮುನ್ನೆಲೆಗೆ ಬಂದಿದ್ದು. ಇದೀಗ ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

Soujanya Case Supreme Court Orders Re-Investigation into Dharmasthala Rape and Murder Case


ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಸೌಜನ್ಯ ಅವರ ತಾಯಿ ಕುಸುಮಾವತಿ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಕಳೆದ ವರ್ಷ ಅಂದರೆ 2025ನೇ ನವೆಂಬರ್ 19ರಂದು ಸುಪ್ರೀಂ ಕೋರ್ಟ್‌ನಲ್ಲಿ ಸೌಜನ್ಯ ಅವರ ತಾಯಿ ಕುಸುಮಾವತಿ ಅವರು ಅರ್ಜಿ ಸಲ್ಲಿಸಿದ್ದರು. ಇದೀಗ ಈ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಮಾಡಿದೆ. ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ತರಾಟೆ

ಇನ್ನು ಈ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ (CBI) ನಡೆಸಿತ್ತು. ಅಲ್ಲದೆ ಪ್ರಕರಣದಲ್ಲಿ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಹೀಗಾಗಿ, ಸೌಜನ್ಯಾ ತಾಯಿ ಕುಸುಮಾವತಿ ಗೌಡ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಮರುತನಿಖೆಗೆ ಮನವಿ ಮಾಡಿದ್ದ ಅವರ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು. ಇದಾದ ನಂತರ ಅವರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈನಲ್ಲಿ ನಡೆಸಿದ್ದು, ಕಳಪೆ ಮತ್ತು ಸ್ವತಂತ್ರವಲ್ಲದ ಪರಾವಲಂಬಿ ತನಿಖೆ ನಡೆಸಲಾಗಿದೆ ಎಂದು ಸಿಬಿಐಗೆ ತರಾಟೆ ತೆಗೆದುಕೊಂಡಿತ್ತು. ಅಲ್ಲದೆ ತೀರ್ಪನ್ನು ಕಾಯ್ದಿರಿಸಲಾಗಿತ್ತು. ವಾಸ್ತವದಲ್ಲಿ ಸಿಬಿಐನ ತನಿಖಾ ಅಧಿಕಾರಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿದ್ದಾರೆ. ಹಿಂದೆ ಸಂಗ್ರಹಿಸಿದ ಸಾಕ್ಷ್ಯಗಳನ್ನು ಪರಿಶೀಲಿಸಿ ಅವರು ತಮ್ಮ ವರದಿ ಸಲ್ಲಿಸಿದ್ದಾರೆ. ಆದರೆ ಸಿಬಿಐ ಅಧಿಕಾರಿಗಳು ಯಾವುದೇ ಸ್ವತಂತ್ರ ತನಿಖೆ ನಡೆಸಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಹಾಗೂ ಸಂಜೀವ್‌ ಸಚ್‌ದೇವ್‌ ಅವರಿದ್ದ ಪೀಠ ಹೇಳಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಆದೇಶ ಮಾಡಲಾಗಿದೆ.

ಸೌಜನ್ಯ ಕೊಲೆ ಪ್ರಕರಣದ ಹಿನ್ನೆಲೆ ಏನು

ಇನ್ನು ಸೌಜನ್ಯ ಕೊಲೆ ಪ್ರಕರಣವು ಕಳೆದ ಒಂದು ದಶಕಕ್ಕೂ ಹೆಚ್ಚು ಸಮಯದಿಂದ ಚರ್ಚೆಯಲ್ಲಿದೆ. ಈ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ಅಕ್ಟೋಬರ್ 11, 2012ರಂದು ಸಂತೋಷ್ ರಾವ್ ಬಂಧಿಸಿದ್ದರು. ಸೌಜನ್ಯ ಪರ ಹೋರಾಟಗಳು ಹೆಚ್ಚಾದ ಮೇಲೆ ಅಂದಿನ ಕರ್ನಾಟಕ ಸರ್ಕಾರವು ಈ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು.

ಸಿಐಡಿ 2013ರಲ್ಲಿ ಸಂತೋಷ್ ರಾವ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು. ಇದಾದ ನಂತರ ಸಾರ್ವಜನಿಕರ ಒತ್ತಾಯ ಹಾಗೂ ಆಗ್ರಹದ ಹಿನ್ನೆಲೆಯಲ್ಲಿ ಸರ್ಕಾರವು ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ (CBI)ಗೆ ವರ್ಗಾಹಿಸಿತ್ತು.

ಸಿಬಿಐ ಸಹ ಸಂತೋಷ್ ರಾವ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿತ್ತು. ಆದರೆ 2023ರ ಜುಲೈನಲ್ಲಿ ಸಿಬಿಐ ನ್ಯಾಯಾಲಯ ಸಂತೋಷ್ ರಾವ್ ವಿರುದ್ದ ಆರೋಪ ಸಾಬೀತಾಗದ ಹಿನ್ನೆಲೆ ಬಿಡುಗಡೆ ಮಾಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+