ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಾಡ ಕನಕದಾಸರ ಅರಮನೆಯಲ್ಲಿ ಧ್ವನಿ-ಬೆಳಕು ಪ್ರದರ್ಶನಕ್ಕೆ ವ್ಯವಸ್ಥೆ

|
Google Oneindia Kannada News

ಬೆಂಗಳೂರು, ಜುಲೈ 7- ಸಂತ ಕನಕದಾಸರ ಜನ್ಮಸ್ಥಳ ಬಾಡದಲ್ಲಿ ನಿರ್ಮಿಸಲಾಗಿರುವ ಕನಕದಾಸರ ಅರಮನೆಯಲ್ಲಿ ಧ್ವನಿ-ಬೆಳಕು ಪ್ರದರ್ಶನ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.

ಅವರು ಇಂದು ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. "ಕನಕದಾಸರ ಅರಮನೆಯು ಸಾವಿರಾರು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಇದನ್ನು ಇನ್ನಷ್ಟು ಉತ್ತಮ ಪಡಿಸುವ ನಿಟ್ಟಿನಲ್ಲಿ ಧ್ವನಿ-ಬೆಳಕು ಪ್ರದರ್ಶನ ಪ್ರಾರಂಭಿಸಲು ಸೂಚಿಸಿದರು. ಇದಕ್ಕೆ ಅತ್ಯುತ್ತಮ ಸಂಸ್ಥೆಗಳ ಮೂಲಕ, ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಬೇಕು," ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಅಂತೆಯೇ ಅರಮನೆಯಲ್ಲಿ ಕನಕದಾಸರ ಜೀವನ ಕುರಿತು ಅನಿಮೇಷನ್ ಚಿತ್ರವನ್ನು ಪ್ರದರ್ಶಿಸಲಾಗುತ್ತಿದೆ. ಈ ತಂತ್ರಜ್ಞಾನವನ್ನು ಉನ್ನತೀಕರಿಸಿ, 3ಡಿ ಚಿತ್ರ ನಿರ್ಮಾಣ ಮಾಡಲು ಮುಖ್ಯಮಂತ್ರಿಗಳು ಸೂಕ್ತ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

Sound & light show at Kanakadasa birth palace in Bada: CM Basavaraj Bommai

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಆಡಳಿತ ವ್ಯಾಪ್ತಿಗೆ ಒಳಪಡಿಸುವ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ವರದಿ ಸಲ್ಲಿಸಲು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದರು.

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ:

ಬೆಳಗಾವಿ ಜಿಲ್ಲೆಯ ಸೈನಿಕ ಶಾಲೆಯ ಕಾಮಗಾರಿಯು ಆಗಸ್ಟ್ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದ್ದು, ಈ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ಮೂಲಸೌಕರ್ಯಗಳನ್ನು ಒದಗಿಸುವಂತೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಮುಖ್ಯಮಂತ್ರಿ ಸೂಚಿಸಿದರು.

Sound & light show at Kanakadasa birth palace in Bada: CM Basavaraj Bommai

ಕೇಂದ್ರ ರಕ್ಷಣಾ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 2022-23ನೇ ಸಾಲಿಗೆ 6 ನೇ ತರಗತಿಯಿಂದ ಶಾಲೆಯನ್ನು ಪ್ರಾರಂಭಿಸಲು ಅನುಮತಿ ದೊರೆತಿದ್ದು, ಪ್ರಸ್ತುತ 82 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಲಾಗಿದೆ. ಸೆಪ್ಟೆಂಬರ್ ನಲ್ಲಿ ಶಾಲೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

ಈ ವಸತಿ ಶಾಲೆಗೆ ಹುದ್ದೆಗಳ ಸೃಜನೆಗೆ ಸರ್ಕಾರ ಅನುಮೋದನೆ ನೀಡಿದ್ದು, ಪ್ರಸ್ತುತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಿಬ್ಬಂದಿಯನ್ನು ನಿಯೋಜನೆ ಮೇರೆಗೆ ನೇಮಕ ಮಾಡಲಾಗಿದೆ. ವೃಂದ ಮತ್ತು ನೇಮಕಾತಿ ನಿಯಮಗಳನ್ನೂ ಸಿದ್ಧಪಡಿಸಲಾಗಿದ್ದು, ಇದಕ್ಕೆ ಸರ್ಕಾರದ ಅನುಮೋದನೆ ದೊರಕಿದ ಕೂಡಲೇ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

Sound & light show at Kanakadasa birth palace in Bada: CM Basavaraj Bommai

ಸಭೆಯಲ್ಲಿ ಸಚಿವರಾದ ಶಿವರಾಮ ಹೆಬ್ಬಾರ, ಬಿ.ಸಿ. ಪಾಟೀಲ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ. ಎನ್. ಮಂಜುಳಾ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Recommended Video

ನಟ ವಿಕ್ರಂ ಗೆ ಹೃದಯಘಾತ! ತಕ್ಷಣವೇ ಆಸ್ಪತ್ರೆಗೆ ದಾಖಲು. ಹೇಗಿದೆ ವಿಕ್ರಂ ಆರೋಗ್ಯ ಸ್ಥಿತಿ? | OneIndia Kannada

English summary
Chief Minister Basavaraj Bommai has instructed the officials to make arrangements for sound and light show at the palace built in saint Kanakadasa's birthplace Bada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X