ಸಮೀಕ್ಷೆ: ಪ್ರಜಾಧ್ವನಿ, ವಿಜಯ ಸಂಕಲ್ಪ, ಪಂಚರತ್ನ ಯಾತ್ರೆಗಳಲ್ಲಿ ಜನರನ್ನು ತಲುಪಿದ್ದು ಇದು ಮಾತ್ರ!
ಬೆಂಗಳೂರು, ಏಪ್ರಿಲ್ 14: ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗುವ ಮೊದಲೇ ರಾಜಕೀಯ ಪಕ್ಷಗಳು ತಮ್ಮ ಪ್ರಚಾರ ಆರಂಭಿಸಿದ್ದವು. ಅದು ಯಾತ್ರೆಗಳ ಮೂಲಕ. ರಾಜ್ಯಾದ್ಯಂತ ಚುನಾವಣಾ ಪ್ರಚಾರದ ಯಾತ್ರೆಗಳನ್ನು ಮೂರು ಪಕ್ಷಗಳು ಆರಂಭಿಸಿದ್ದವು. ಆದರೆ, ಈ ಮೂರು ಪಕ್ಷಗಳ ಯಾತ್ರೆಗಳಲ್ಲಿ ಜನರನ್ನು ತಲುಪಿರುವುದು ಮತ್ತು ಜನರಲ್ಲಿ ಕೊಂಡ ಮಟ್ಟಿಗೆ ಗಮನ ಸೆಳೆಯಲು ಸಾಧ್ಯವಾಗಿರುವುದು ಯಾರಿಗೆ ಎಂಬುದೇ ಕೌತುಕ.
ಚುನಾವಣೆಗೂ ಮುನ್ನ ರಾಜಕೀಯ ಪಕ್ಷಗಳಿಗೆ ಜನರ ನಾಡಿಮಿಡಿತ ಅರಿಯುವುದು ತುಂಬಾ ಮುಖ್ಯ. ಈ ಕಾರಣದಿಂದಲೇ ರಾಜ್ಯದ ಮೂರು ಪಕ್ಷಗಳು ಚುನಾವಣಾ ಅಖಾಡಕ್ಕೆ ಧುಮುಕಿದ್ದವು. ಆಡಳಿತರೂಢ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಆರಂಭಿಸಿದರೇ, ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಆರಂಭಿಸಿತ್ತು. ಇವರೆಡಕ್ಕೂ ಟಕ್ಕರ್ ಕೊಡಲು ಜಾತ್ಯಾತೀತ ಜನತಾದಳ ಐದು ಯೋಜನೆಗಳನ್ನು ಮುಂದಿಟ್ಟುಕೊಂಡು ಪಂಚರತ್ನ ರಥಯಾತ್ರೆಯನ್ನು ನಡೆಸಿತ್ತು.

ಈ ಯಾತ್ರೆಗಳ ಬಗ್ಗೆ ಸೌತ್ ಫಸ್ಟ್ ಕರ್ನಾಟಕ ಚುನಾವಣಾ ಸಮೀಕ್ಷೆಯಲ್ಲಿ ಪ್ರಮುಖ ಅವಲೋಕನಗಳು ಹೊರಬಂದಿವೆ. ಎಲ್ಲಾ ಮೂರು ಪಕ್ಷಗಳಲ್ಲಿ, ಜೆಡಿಎಸ್‌ನ ಪಂಚರತ್ನ ಯಾತ್ರೆಯ ಪ್ರಚಾರವು ಮತದಾರರಲ್ಲಿ ಪ್ರಭಾವ ಬೀರುವಲ್ಲಿ ಅತ್ಯಂತ ಯಶಸ್ವಿಯಾಗಿದೆ ಎಂದು ಸಮೀಕ್ಷೆ ತೋರಿಸಿದೆ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಾಗಲಿ, ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆಯಾಗಲಿ ಮತದಾರರ ಮನ ಸೆಳೆಯಲು ಸಾಧ್ಯವಾಗಿಲ್ಲ. ಆದರೆ ಬಿಜೆಪಿಯ ಬೂತ್ ಸಂಕಲ್ಪ ಅಭಿಯಾನ ಯಶಸ್ವಿಯಾಗಿದೆ ಎಂದು ತಿಳಿಸಿದೆ.
ಈ ವರ್ಷದ ಜನವರಿಯಲ್ಲಿ ನಡೆದ ಸೌತ್ ಫಸ್ಟ್ ಟ್ರ್ಯಾಕರ್ ಸಮೀಕ್ಷೆಯಲ್ಲಿ 101 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದ್ದ ಕಾಂಗ್ರೆಸ್, ಮಾರ್ಚ್ 25 ರಿಂದ ಏಪ್ರಿಲ್ 10 ರವರೆಗೆ ನಡೆದ ಮತ್ತೊಂದು ಸಮೀಕ್ಷೆಯಲ್ಲಿ ತನ್ನ ಮತಬ್ಯಾಂಕ್‌ನಲ್ಲಿ ಕುಸಿತ ಕಂಡಿದೆ. ಆದರೂ, ಪಕ್ಷವೂ ಆರಂಭದಲ್ಲಿ ಊಹಿಸಿದ್ದಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಅದಕ್ಕೆ ಮುಸ್ಲಿಂ ಸಮುದಾಯವನ್ನು ತನ್ನೆಡೆಗೆ ಸೆಳೆದುಕೊಂಡಿರುವುದು ಕಾರಣವಾಗಿದೆ.

ಸೌತ್ ಫಸ್ಟ್ ಚುನಾವಣಾ ಪೂರ್ವ ಸಮೀಕ್ಷೆಯು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಕಾಂಗ್ರೆಸ್ ಉತ್ತಮ ಸ್ಥಿತಿಯಲ್ಲಿದೆ ಎಂದು ತೋರಿಸಿದೆ. ಯಾತ್ರೆಯ ಸಂದರ್ಭದಲ್ಲಿ ಬಹುಪಾಲು ಸರ್ಕಾರವನ್ನು ರಚಿಸುವ ಸಾಧ್ಯತೆಯಿತ್ತು ಎಂದು ಸಾಮಾನ್ಯ ಜನರು ಭಾವಿಸಿದ್ದರು. ಆದರೆ, ಜನರ ನಂಬಿಕೆಯನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಪಕ್ಷ ವಿಫಲವಾಗಿದೆ ಎಂದು ಸಮೀಕ್ಷೆ ತಿಳಿಸಿದೆ.
ಬಿಜೆಪಿಗೆ ಹೋಲಿಸಿದರೆ, ಮಾದರಿ ನೀತಿ ಸಂಹಿತೆ ಜಾರಿಯಾಗುವ ಮೊದಲು ಕಾಂಗ್ರೆಸ್ ಪ್ರಚಾರ ಹೆಚ್ಚಾಗಿರಲಿಲ್ಲ. ಆದರೆ, ಬಿಜೆಪಿಯ ವಿಷಯದಲ್ಲಿ ಹಾಗಿಲ್ಲ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಹಲವಾರು ಬಾರಿ ಭೇಟಿ ನೀಡಿದ್ದಾರೆ. ಆದರೆ ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಕೇವಲ ಒಂದು ಅಥವಾ ಎರಡು ಬಾರಿ ಭೇಟಿ ನೀಡಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಅಷ್ಟಾಗಿ ತೊಡಗಿಸಿಕೊಂಡಿಲ್ಲ.

ಕಾಂಗ್ರೆಸ್ ತನ್ನ ಚುನಾವಣಾ ಗ್ಯಾರಂಟಿಗಳಾದ ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಅನ್ನ ಭಾಗ್ಯ ಮತ್ತು ಯುವ ನಿಧಿ ಯೋಜನೆಗಳಿಗೆ ಹೆಚ್ಚು ಪ್ರಚಾರ ನೀಡುವ ಮೂಲಕ ಜನಪ್ರಿಯಗೊಳಿಸುತ್ತಿದೆ. ಜೊತೆಗೆ ಎಲ್ಲಾ ಭಾಗಗಳಲ್ಲೂ ನೋಂದಣಿ ಅಭಿಯಾನವನ್ನು ನಡೆಸುತ್ತಿದೆ. ಆದರೆ ಬಹುತೇಕ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಗ್ಯಾರಂಟಿ ಕಾರ್ಡ್‌ಗಳನ್ನು ಸರಿಯಾಗಿ ವಿತರಿಸಲಾಗಿಲ್ಲ ಎಂಬ ಅಸಮಾಧಾನವಿದೆ.
ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಬಗ್ಗೆ ಗ್ರಾಮೀಣ ಪ್ರದೇಶಗಳಿಗೆ ತಲುಪಿಲ್ಲ. ಇನ್ನು, ಆಡಳಿತಾರೂಢ ಬಿಜೆಪಿ ವಿರುದ್ಧದ "40% ಭ್ರಷ್ಟಾಚಾರ" ಆರೋಪ ಮತ್ತು ಕಾಂಗ್ರೆಸ್ ಕನ್ನಡಾಭಿಮಾನದದ ಬಗ್ಗೆ ಜನರಲ್ಲಿ ಉತ್ತಮ ಅಭಿಪ್ರಾಯಗಳಿವೆ ಎಂಬುದು ಸಮೀಕ್ಷೆಯಲ್ಲಿ ತಿಳಿದು ಬಂದಿದೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications