ಚುನಾವಣಾ ಪೂರ್ವ ಸಮೀಕ್ಷೆ: ಬೆಲೆ ಏರಿಕೆ, ಭ್ರಷ್ಟಾಚಾರ ಮತದಾರರ ಪ್ರಮುಖ 'ಸಮಸ್ಯೆಗಳು'
ಬೆಂಗಳೂರು, ಏಪ್ರಿಲ್ 14: ರಾಜ್ಯ ವಿಧಾನಸಭಾ ಚುನಾವಣೆಯು ಮೇ 10 ರಂದು ನಡೆಯಲಿದ್ದು, ಮತದಾನಕ್ಕೆ ಕೆಲವು ದಿನಗಳು ಉಳಿದಿವೆ. ಈಗಾಗಲೇ ರಾಜಕೀಯ ಪಕ್ಷಗಳು ಚುನಾವಣೆಗೆ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕೆಲವು ಕ್ಷೇತ್ರಗಳನ್ನಷ್ಟೇ ಉಳಿಸಿಕೊಂಡಿವೆ. ಇದರ ನಡುವೆ ಹಲವು ಸಂಸ್ಥೆಗಳು, ಮಾಧ್ಯಮಗಳು ಚುನಾವಣಾ ಪೂರ್ವ ಸಮೀಕ್ಷೆ ನಡೆಸುತ್ತಿವೆ. ಇದರಲ್ಲಿ ಮತದಾರನ ಅಭಿಪ್ರಾಯ ತಿಳಿಯಬಹುದಾಗಿದೆ.
ಸೌತ್ ಫಸ್ಟ್-ಪೀಪಲ್ಸ್ ಪಲ್ಸ್ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು ಹಲವು ವಿಷಯಗಳನ್ನು ಬಹಿರಂಗಪಡಿಸಿದೆ. ಮತದಾರರನ ಪ್ರಮುಖ ಸಮಸ್ಯೆಗಳ ಬಗ್ಗೆ ಸಮೀಕ್ಷೆ ಬೆಳಕು ಚೆಲ್ಲಿದೆ. ಬೆಲೆ ಏರಿಕೆ ಮತ್ತು ಭ್ರಷ್ಟಾಚಾರ ಕರ್ನಾಟಕದ ಮತದಾರರು ಬೊಟ್ಟು ಮಾಡಿದ ಎರಡು ಪ್ರಮುಖ "ಸಮಸ್ಯೆಗಳು" ಎಂದು ಸೌತ್ ಫಸ್ಟ್-ಪೀಪಲ್ಸ್ ಪಲ್ಸ್ ಚುನಾವಣಾ ಪೂರ್ವ ಸಮೀಕ್ಷೆ ತೋರಿಸುತ್ತದೆ.

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದೆ. ಮಾರ್ಚ್ 25 ರಿಂದ ಏಪ್ರಿಲ್ 10 ರವರೆಗೆ ನಡೆಸಲಾದ ಕರ್ನಾಟಕ ಚುನಾವಣಾ ಅಭಿಪ್ರಾಯ ಸಂಗ್ರಹವು ರಾಜ್ಯವು ಅತಂತ್ರ ಜನಾದೇಶದತ್ತ ಸಾಗುತ್ತಿದೆ ಎಂದು ಭವಿಷ್ಯ ನುಡಿದಿದೆ. 98 ಸ್ಥಾನಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ನಿರೀಕ್ಷೆಯಿದೆ. ಪ್ರಸ್ತುತ ಬಿಜೆಪಿ 92 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ, ಹಾಗೆಯೇ ಜೆಡಿಎಸ್ 27 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ.
ಸೌತ್ ಫಸ್ಟ್ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬೆಲೆ ಏರಿಕೆಯು ರಾಜ್ಯದ ಮತದಾರರಿಗೆ ದೊಡ್ಡ ಚಿಂತೆಯಾಗಿದೆ ಎಂದು ತೋರಿಸಿದೆ. ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಕಾಲು ಭಾಗದಷ್ಟು ಜನರು ಇದನ್ನೇ ಮುಖ್ಯ ಸಮಸ್ಯೆ ಎಂದು ಹೇಳಿದ್ದಾರೆ. ಸಮಸ್ಯೆಗಳ ಪಟ್ಟಿಯಲ್ಲಿ ನಿರುದ್ಯೋಗವು ಎರಡನೇ ಸ್ಥಾನದಲ್ಲಿದೆ. ಪ್ರತಿಕ್ರಿಯಿಸಿದವರಲ್ಲಿ 20 ಪ್ರತಿಶತದಷ್ಟು ಜನರು ನಿರುದ್ಯೋಗವು ಪ್ರಮುಖ ಚುನಾವಣಾ ವಿಷಯವೆಂದು ಉಲ್ಲೇಖಿಸಿದ್ದಾರೆ.
*ಭ್ರಷ್ಟಾಚಾರದ ತಾಂಡವ..!*
ರಾಜ್ಯದಲ್ಲಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪಗಳು ಕೂಡ ಈ ಚುನಾವಣೆಯಲ್ಲಿ ಪ್ರಮುಖ ನಾಲ್ಕು ವಿಷಯಗಳಲ್ಲಿ ಕಾಣಿಸಿಕೊಂಡಿವೆ. ಶೇಕಡಾ 16 ರಷ್ಟು ಜನರು ಭ್ರಷ್ಟಾಚಾರವು ರಾಜ್ಯದಲ್ಲಿ ಒಂದು ಪ್ರಮುಖ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ. ಪ್ರತಿಕ್ರಿಯಿಸಿದವರಲ್ಲಿ ಶೇಕಡಾ 20 ರಷ್ಟು ಜನರು ಕನಿಷ್ಟ ಬೆಂಬಲ ಬೆಲೆ (MSP) ಮತ್ತು ರೈತ-ಸಂಬಂಧಿತ ಸಮಸ್ಯೆಗಳನ್ನು ಈ ಸಮೀಕ್ಷೆಯಲ್ಲಿ ಪ್ರಮುಖ ಕಾಳಜಿಯ ವಿಷಯಗಳಾಗಿ ಪರಿಗಣಿಸಿದ್ದಾರೆ.

ಇವುಗಳ ಜೊತೆಗೆ ಆರೋಗ್ಯವು ಸಹ ಒಂದು ಸಮಸ್ಯೆಯಾಗಿ ಕಂಡುಬಂದಿದೆ. ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಎಂಟು ಪ್ರತಿಶತದಷ್ಟು ಜನರು ಆರೋಗ್ಯದ ಸಮಸ್ಯೆಗಳ ಬಗ್ಗೆ ಹೇಳಿದ್ದು, ಶೇಕಡಾ 6 ರಷ್ಟು ಜನರು ಹಳೆಯ ಪಿಂಚಣಿ ಯೋಜನೆಯು ಅವರಿಗೆ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ. ಎಲ್ಲಾ ಹೇಳಿಕೆಗಳು ಮತ್ತು ನಿರೂಪಣೆಗಳ ಹೊರತಾಗಿಯೂ, ವಿಶೇಷವಾಗಿ ಕೋಮು ವಿಷಯಗಳ ಬಗ್ಗೆ ಪ್ರತಿಕ್ರಿಯಿಸಿದವರಲ್ಲಿ ಕೇವಲ ಒಂದು ಪ್ರತಿಶತದಷ್ಟು ಜನರು ಮಾತ್ರ ಕೋಮುವಾದವು ಕರ್ನಾಟಕದಲ್ಲಿ ಒಂದು ಸಮಸ್ಯೆ ಎಂದು ಭಾವಿಸಿದ್ದಾರೆ.
ಸೌತ್ ಫಸ್ಟ್ ಮತ್ತು ಪೀಪಲ್ಸ್ ಪಲ್ಸ್ ಕರ್ನಾಟಕ ಚುನಾವಣೆ 2023 ರ ಸಮೀಕ್ಷೆಯಲ್ಲಿ 38 ಪ್ರತಿಶತದಷ್ಟು ಜನರು ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರವು ಹಾಲಿ ಸರ್ಕಾರಕ್ಕೆ ಹೋಲಿಸಿದರೆ ಉತ್ತಮವೆಂದು ಭಾವಿಸಿದ್ದಾರೆ. 35% ಜನರು ಪ್ರಸ್ತುತ ಬಿಜೆಪಿ ಸರ್ಕಾರ ಉತ್ತಮವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು











Click it and Unblock the Notifications