Get Updates
Get notified of breaking news, exclusive insights, and must-see stories!

ನನ್ನ ತೆರಿಗೆ ನನ್ನ ಹಕ್ಕು: ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಂಗ್ರೆಸ್ ಧರಣಿ

ಬೆಂಗಳೂರು, ಫೆಬ್ರವರಿ 07: ರಾಜ್ಯದ ವಿರುದ್ಧ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಕಾಂಗ್ರೆಸ್ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಸಜ್ಜಾಗಿದೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಕೇಂದ್ರ ಸಚಿವರು, ಸಂಸದರು ಮತ್ತು ರಾಜ್ಯಸಭಾ ಸದಸ್ಯರಿಗೆ ಪತ್ರ ಬರೆದಿದ್ದಾರೆ.

ದೆಹಲಿಯ ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಕಾಂಗ್ರೆಸ್ ಧರಣಿ ನಡೆಸಲಿದೆ. "ಕೇಂದ್ರ ಸರ್ಕಾರದಿಂದ ಕರ್ನಾಟಕದ ಮೇಲೆ ನಡೆಯುತ್ತಿರುವ ಆರ್ಥಿಕ ದೌರ್ಜನ್ಯದ ವಿರುದ್ಧ ಧ್ವನಿಯೆತ್ತೋಣ. ನಾಳೆ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುವ ಧರಣಿ ಸತ್ಯಾಗ್ರಹದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ನಮ್ಮ‌ ಹಕ್ಕಿಗಾಗಿ ಪ್ರತಿಭಟಿಸೋಣ" ಮೆಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

South Tax Movement: Karnataka Congress is all set to stage protest in Delhis Jantar Mantar

ಪ್ರತಿಭಟನೆಗೆ ಬೆಂಬಲಿಸುವಂತೆ ಪತ್ರ ಬರೆದ ಸಿಎಂ

ಕರ್ನಾಟಕ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ 'ನನ್ನ ತೆರಿಗೆ ನನ್ನ ಹಕ್ಕು' ಮತ್ತು ' South Tax Movement' ಹ್ಯಾಶ್‌ಟ್ಯಾಗ್‌ಗ ಮೂಲಕ ಬೃಹತ್ ಪ್ರತಿಭಟನೆಗಳಲ್ಲಿ ಭಾಗವಹಿಸಲು ಜನರಿಗೆ ಕರೆ ನೀಡಿದೆ. ಇತ್ತ, ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಕೇಂದ್ರ ಸಚಿವರು, ಸಂಸದರು ಮತ್ತು ರಾಜ್ಯಸಭಾ ಸದಸ್ಯರಿಗೆ ಪತ್ರ ಬರೆದಿದ್ದು, ಇದು ಯಾವುದೇ ಪಕ್ಷದ ವಿರುದ್ಧದ ಹೋರಾಟವಲ್ಲ ಎಂದು ಹೇಳಿದ್ದಾರೆ.

"ಇದು ಯಾವುದೇ ಪಕ್ಷದ ವಿರುದ್ಧದ ಹೋರಾಟವಲ್ಲ, ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದಿಂದ ನಾಡಿಗೆ ಆಗುತ್ತಿರುವ ಅನ್ಯಾಯ, ತೆರಿಗೆ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿನ ತಾರತಮ್ಯದ ವಿರುದ್ಧದ ಹೋರಾಟ. ಕರ್ನಾಟಕದ ಭವಿಷ್ಯಕ್ಕಾಗಿ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ನಾಳೆ ಬೆಳಿಗ್ಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ದೆಹಲಿ ಸರ್ಕಾರಕ್ಕೆ ತಲುಪಿಸಿ, ನ್ಯಾಯ ಕೇಳುವುದು ನಮ್ಮೆಲ್ಲರ ಕರ್ತವ್ಯ. ತಾವೆಲ್ಲರೂ ಪಕ್ಷಬೇಧ ಮರೆತು ಕರ್ನಾಟಕದ ಹಿತಕ್ಕಾಗಿ ನಮ್ಮ ಧ್ವನಿಗೆ ಧ್ವನಿಗೂಡಿಸುತ್ತೀರ ಎಂದು ನಂಬಿದ್ದೇನೆ" ಎಂದಿದ್ದಾರೆ.

ಇಂದಿನ ಪ್ರತಿಭಟನೆಯು ಕರ್ನಾಟಕ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ 'South Tax Movement' ಎಂದಬ ಹ್ಯಾಶ್‌ಟ್ಯಾಗ್‌ ಅನ್ನು ಟ್ರೆಂಡ್ ಮಾಡುತ್ತಿದ್ದೆ. ಈಗಾಗಲೇ ಈ ಪ್ರತಿಭಟನೆಗೆ ದಕ್ಷಿಣ ರಾಜ್ಯಗಖು ಕೂಡ ದನಿ ಸೇರಿಸಿವೆ. South Tax Movement ಮತ್ತು ನನ್ನ ತೆರಿಗೆ ನನ್ನ ಹಕ್ಕು ಹ್ಯಾಶ್‌ಟ್ಯಾಗ್‌ನೊಂದಿಗೆ ಹಲವಾರು ಟ್ವೀಟ್‌ಗಳನ್ನು ಸಿದ್ದರಾಮಯ್ಯ ಮತ್ತು ಇತರ ಸಚಿವರು ಟ್ವಿಟರ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

South Tax Movement: Karnataka Congress is all set to stage protest in Delhis Jantar Mantar

ಇನ್ನು, ಕೇಂದ್ರದ ತೆರಿಗೆ ಹಂಚಿಕೆ ಪ್ರಮಾಣ ಕಡಿಮೆಯಾಗಿದೆ ಎಂಬ ಸಿದ್ದರಾಮಯ್ಯ ಅವರ ಆರೋಪವನ್ನು ಆಧಾರರಹಿತ ಎಂದು ಆರೋಪಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಿದ್ದರಾಮಯ್ಯ ಅವರು ಕೊಳಕು ರಾಜಕಾರಣ ಮಾಡುತ್ತಿದ್ದಾರೆ ಮತ್ತು ಅವರ ಹೇಳಿಕೆಗಳಿಗೆ ಯಾವುದೇ ಆಧಾರವಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+