Holi Special Trains: ಕರ್ನಾಟಕದಲ್ಲಿ ವಿಶೇಷ ರೈಲುಗಳ ಸಂಚಾರ, ಎಲ್ಲಿಂದ ಎಲ್ಲಿಗೆ? ವೇಳಾಪಟ್ಟಿ ಗಮನಿಸಿ
ಬೆಂಗಳೂರು, ಮಾರ್ಚ್ 15: ಹೋಳಿ ಹಬ್ಬದ ಪ್ರಯುಕ್ತ ಸೆಂಟ್ರಲ್ ರೈಲ್ವೆ, 112 ರೈಲುಗಳು, ಪಶ್ಚಿಮ ವಲಯದ 15 ರೈಲುಗಳು ವಿಶೇಷ ಸೇವೆ ನೀಡಲು ಸಜ್ಜಾಗಿವೆ. ಈ ಮಧ್ಯೆ ಕರ್ನಾಟಕದಲ್ಲಿ ಹೋಳಿ ಹಬ್ಬಕ್ಕೆ ನೈಋತ್ಯ ರೈಲ್ವೆ (SWR) ವ್ಯಾಪ್ತಿಯಲ್ಲಿ ಸಹ ಹಲವು ವಿಶೇಷ ರೈಲುಗಳು ಕಾರ್ಯಾಚರಣೆ ನಡೆಸಲಿವೆ.
ರಾಜ್ಯದಲ್ಲಿ ಹೋಳಿ ಹಬ್ಬದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ನೈಋತ್ಯ ರೈಲ್ವೆಯು ವಿಶೇಷ ರೈಲುಗಳನ್ನ ಓಡಿಸಲು ತೀರ್ಮಾನಿಸಿದೆ ಎಂದು ಹುಬ್ಬಳ್ಳಿ ರೈಲ್ವೆ ಜಂಕ್ಷನ್ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಂಜುನಾಥ ಕನಮಡಿ ಮಾಹಿತಿ ನೀಡಿದರು.

SWR ನಿಂದ 03 ವಿಶೇಷ ಎಕ್ಸ್‌ಪ್ರೆಸ್ ರೈಲುಗಳು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ನಿಂದ -ಕೊಚುವೇಲಿ ನಿಲ್ದಾಣಗಳ ನಡುವೆ ಎರಡು ಟ್ರಿಪ್, ಎಸ್ಎಂವಿಟಿ ಬೆಂಗಳೂರು-/ಕಣ್ಣೂರು ನಿಲ್ದಾಣಗಳ ನಡುವೆ ಎರಡು ಟ್ರಿಪ್, ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಅಹಮದಾಬಾದ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ಸೇವೆ ನೀಡಲಿದೆ.
ವಿಶೇಷ ರೈಲುಗಳು ಸಂಚಾರ, ಸಂಖ್ಯೆ, ಬುಕ್ಕಿಂಗ್ ವಿವರ
* ಬೆಂಗಳೂರು-ಕಣ್ಣೂರು ವಿಶೇಷ ರೈಲು
ಎಸ್ಎಂವಿಟಿ ಬೆಂಗಳೂರು-ಕಣ್ಣೂರು ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (ಸಂಖ್ಯೆ 06557/06558) ಕಾರ್ಯಾಚರಣೆ ನಡೆಸಲಿದೆ.
ವಿಶೇಷ ರೈಲು (06557) ಮಾರ್ಚ್ 19 ಮತ್ತು 26 ರಂದು ಬೆಂಗಳೂರಿನ ಎಸ್‌ಎಂವಿಟಿ ನಿಂದ ರಾತ್ರಿ 11.55 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 2.00 ಗಂಟೆಗೆ ಕಣ್ಣೂರು ನಿಲ್ದಾಣ ತಲುಪಲಿದೆ. ಮರಳಿ ಕಣ್ಣೂರಿನಿಂದ ವಿಶೇಷ ರೈಲು (06558) ಮಾರ್ಚ್ 20 ಮತ್ತು 27ರಂದು ರಾತ್ರಿ 8 ಗಂಟೆಗೆ ಪ್ರಯಾಣ ಬೆಳೆಸಿ ಮರುದಿನ ಮಧ್ಯಾಹ್ನ 1 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಬರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಕೃಷ್ಣರಾಜಪುರಂ, ಬಂಗಾರಪೇಟೆ ಜಂಕ್ಷನ್, ಕೋಝಿಕ್ಕೋಡ್, ಸೇಲಂ ಜಂ, ಈರೋಡ್ ಜಂಕ್ಷನ್, ಕೊಯಮತ್ತೂರು ಜಂ, ಪಾಲಕ್ಕಾಡ್ ಜಂ, ಶೋರನೂರ್ ಜಂಕ್ಷನ್, ತಿರೂರ್, ವಡಕರ ಮತ್ತು ಥಲಶೇರಿ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
ಬೆಂಗಳೂರು- ಕೊಚುವೇಲಿಗೆ ವಿಶೇಷ ರೈಲು
ಎಸ್ಎಂವಿಟಿ ಬೆಂಗಳೂರಿನಿಂದ ಕೊಚುವೇಲಿ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು (ಸಂಖ್ಯೆ 06555/06556) ಸಂಚರಿಸಲಿದೆ. ಈ ರೈಲು (06555) ಮಾರ್ಚ್ 23 ಮತ್ತು 30 ರಂದು ಬೆಂಗಳೂರಿನ ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 11.55ಕ್ಕೆ ಹೊರಟು, ಮರುದಿನ ಸಂಜೆ 7.10 ಗಂಟೆಗೆ ಕೊಚುವೇಲಿ ನಿಲ್ದಾಣ ತಲುಪಲಿದೆ.
ಮಾರ್ಚ್ 24 ಮತ್ತು 31 ರಂದು ವಿಶೇಷ ರೈಲು (06556) ಕೊಚುವೇಲಿ ನಿಲ್ದಾಣದಿಂದ ರಾತ್ರಿ 10.00 ಗಂಟೆಗೆ ಹೊರಟು, ಮರುದಿನ ಸಂಜೆ 4.30 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಬರಲಿದೆ. ಈ ರೈಲು ವೈಟ್ ಫೀಲ್ಡ್, ಬಂಗಾರಪೇಟೆ, ಕುಪ್ಪಂ, ಸೇಲಂ ಜಂಕ್ಷನ್, ಈರೋಡ್ ಜಂಕ್ಷನ್, ತಿರುಪ್ಪೂರು, ಕೊಯಮತ್ತೂರು, ಪಾಲಕ್ಕಾಡ್ ಜಂ, ಕೊಟ್ಟಾಯಂ, ಒಟ್ಟಪ್ಪಲಂ, ತ್ರಿಶೂರ್, ಎರ್ನಾಕುಲಂ ಟೌನ್, ತಿರುವಲ್ಲಾ, ಚೆಂಗಣ್ಣೂರ್, ಕಾಯಂಕುಲಂ, ಅಲುವಾ ಮತ್ತು ಕೊಲ್ಲಂ ನಿಲ್ದಾಣಗಳಲ್ಲಿ ನಿಲ್ಲಲಿದೆ.
ಈ ಮೇಲಿನ ಬೆಂಗಳೂರಿನಿಂದ ಕೊಚುವೇಲಿ ರೈಲಿನಲ್ಲಿ (06557/58 ಮತ್ತು 06555/56) ಎಸಿ -ಟು ಟೈಯರ್ (1), ಎಸಿ -ತ್ರಿ ಟೈಯರ್ (6), ಸ್ಲೀಪರ್ ಕ್ಲಾಸ್ (8), ಸಾಮಾನ್ಯ ದ್ವಿತೀಯ ದರ್ಜೆ (3) ಮತ್ತು ಎಸ್ಎಲ್ಆರ್ ಡಿ (2) ಸೇರಿದಂತೆ ಒಟ್ಟು 20 ಬೋಗಿ ಒಳಗೊಂಡಿದೆ. ಪ್ರಯಾಣಿಕರು IRTC ಮೂಲಕ ಕಾಯ್ದಿರಿಸಬಹುದು.
ಹುಬ್ಬಳ್ಳಿ-ಅಹಮದಾಬಾದ್ ವಿಶೇಷ ರೈಲು
ಎಸ್ಎಸ್ಎಸ್ ಹುಬ್ಬಳ್ಳಿ-ಅಹಮದಾಬಾದ್ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು (ಸಂಖ್ಯೆ 07311/07312) ಒಂದು ಟ್ರಿಪ್ ಹೊಡೆಯಲಿದೆ. ಮಾರ್ಚ್ 24 ರಂದು ರೈಲು (07311) ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಸಂಜೆ 7.30 ಕ್ಕೆ ಪ್ರಯಾಣ ಆರಂಭಿಸಿ, ಮರುದಿನ ಸಂಜೆ 7.20 ಗಂಟೆಗೆ ಅಹಮದಾಬಾದ್ ನಿಲ್ದಾಣ ತಲುಪಲಿದೆ.
ಮರುದಿನ ಮಾರ್ಚ್ 25 ವಿಶೇಷ ರೈಲು (07312) ಅಹಮದಾಬಾದ್ ನಿಲ್ದಾಣದಿಂದ ರಾತ್ರಿ 9.25 ಗಂಟೆಗೆ ಹೊರಟು, ಮರುದಿನ ಸಂಜೆ 7.45 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಬರಲಿದೆ.
ಈ ನಿಲ್ದಾಣಗಳಲ್ಲಿ ನಿಲುಗಡೆ
ಈ ರೈಲು ಎರಡೂ ದಿಕ್ಕಿನಲ್ಲಿ ಧಾರವಾಡ, ಲೋಂಡಾ ಜಂಕ್ಷನ್ ಮೂಲಕ ಬೆಳಗಾವಿ, ಘಟಪ್ರಭಾ, ಮಿರಜ್, ಸಾಂಗ್ಲಿ, ಸತಾರಾ, ಪುಣೆ ಜಂ, ಲೋನಾವಲ, ಕಲ್ಯಾಣ್, ವಸಾಯಿ ರೋಡ್, ಬೋಯಿಸರ್, ವಾಪಿ, ಸೂರತ್, ವಡೋದರಾ ಮತ್ತು ಆನಂದ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.
ಈ ರೈಲಿನಲ್ಲಿ ಎಸಿ-ಟು ಟೈಯರ್ (1), ಎಸಿ-ತ್ರಿ ಟೈಯರ್ (2), ಸ್ಲೀಪರ್ ಕ್ಲಾಸ್ (8), ಸಾಮಾನ್ಯ ದ್ವಿತೀಯ ದರ್ಜೆ (5) ಮತ್ತು ಎಸ್ಎಲ್ಆರ್ ಡಿ (2) ಸೇರಿದಂತೆ ಒಟ್ಟು 19 ಬೋಗಿಗಳನ್ನು ನೀವು ಕಾಯ್ದಿರಿಸಬಹುದಾಗಿದೆ.
ಪ್ರಯಾಣಿಕರು ಹೆಚ್ಚಿನ ಮಾಹಿತಿಗೆ ಭಾರತೀಯ ರೈಲ್ವೆ ವೆಬ್ ಸೈಟ್ (https://enquiry.indianrail.gov.in) ಗೆ ಭೇಟಿ ನೀಡಿ ಅಥವಾ 139 ನಂಬರ್ ಸಂಪರ್ಕಿಸಿ ಮಾಹಿತಿ ಪಡೆಯಬಹದು ಎಂದು ಹುಬ್ಬಳ್ಳಿಯ ಅಧಿಕಾರಿಗಳು ತಿಳಿಸಿದ್ದಾರೆ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ












Click it and Unblock the Notifications