ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮುಂಗಾರು ಚುರುಕು:4 ದಿನ ಭಾರಿ ಮಳೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 3: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Recommended Video

PUBG ban ! ಮತ್ತೆ ಬರುತ್ತಾ? | Oneindia Kannada

ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿಯೂ ಸಾಕಷ್ಟು ಕಡೆ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು,ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಂಭವ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಂಭವ

ಬೆಂಗಳೂರಿನಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಳೆಯಾದ ಪ್ರದೇಶಗಳು

ಮಳೆಯಾದ ಪ್ರದೇಶಗಳು

ಬೇಲೂರು, ಹಾಸನ, ತೀರ್ಥಹಳ್ಳಿ, ಆಲೂರು, ಮಾದಾಪುರ, ಪಾಂಡವಪುರ, ಶ್ರೀರಂಗಪಟ್ಟಣ, ಸುಳ್ಯ, ರಾಮನಗರ,ಚಾಮರಾಜನಗರ, ಸೋಮವಾರಪೇಟೆ, ಕಮ್ಮರಡಿ, ಭದ್ರಾವತಿ, ದೇವನಹಳ್ಳಿ, ಧರ್ಮಸ್ಥಳ, ವಿರಾಜಪೇಟೆ, ಹಾರಂಗಿ, ಮೈಸೂರು, ಪೆರಿಯಪಟ್ಟಣ, ಸಕಲೇಶಪುರ, ಬಂಡೀಪುರ, ಕಾರ್ಕಳ, ಜಯಪುರ, ಲಿಂಗದಹಳ್ಳಿ, ಬೆಂಗಳೂರು, ಹೊಳಲ್ಕೆರೆ, ಜಮಖಂಡಿ, ಕುಶಾಲನಗರ, ತಿಪಟೂರು, ಮಲವಳ್ಳಿಯಲ್ಲಿ ಮಳೆಯಾಗಿದೆ.

ನಾಲ್ಕು ದಿನ ಮಲೆನಾಡು ಭಾಗಗಳಲ್ಲಿ ಭಾರಿ ಮಳೆ

ನಾಲ್ಕು ದಿನ ಮಲೆನಾಡು ಭಾಗಗಳಲ್ಲಿ ಭಾರಿ ಮಳೆ

ಮುಂದಿನ ನಾಲ್ಕು ದಿನಗಳ ಕಾಲ ಮಲೆನಾಡು ಭಾಗದಲ್ಲಿ ಭಾರೀ ಮಳೆ ಆಗಲಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರಗೆ ಭಾರೀ ಮಳೆ ನಿರೀಕ್ಷೆ ಇದ್ದು ಆರೆಂಜ್​ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ 3 ದಿನ ಹೆಚ್ಚಿನ ಮಳೆ ನಿರೀಕ್ಷೆ ಇದ್ದು ಎಲ್ಲೋ ಅಲರ್ಟ್ ನೀಡಲಾಗಿದೆ.

ಈ ಬಾರಿಯ ಮಾನ್ಸೂನ್​ ಅಂದುಕೊಂಡ ಮಟ್ಟಿಗೆ ಮಳೆ ನೀಡಿಲ್ಲ. ಜೂನ್​-ಜುಲೈನಲ್ಲಿ ಕೊಂಚ ತಗ್ಗಿದ್ದ ಮಳೆ ಆಗಸ್ಟ್​ನಲ್ಲಿ ಉತ್ತಮವಾಗಿ ಸುರಿದಿತ್ತು. ಈಗ ಸೆಪ್ಟೆಂಬರ್​ ಆರಂಭದಲ್ಲಿ ಮತ್ತೆ ವರುಣ ಅಬ್ಬರಿಸುತ್ತಿದ್ದಾನೆ. ಮುಂದಿನ ನಾಲ್ಕು ದಿನಗಳಕಾಲ ಮಲೆನಾಡು ಭಾಗದಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ. ಈ ಭಾಗದಲ್ಲಿ ಆರೆಂಜ್​ ಅಲರ್ಟ್​ ಘೋಷಣೆ ಮಾಡಿದೆ.

ಉತ್ತರ ಒಳನಾಡಿನಲ್ಲೂ ಮಳೆ

ಉತ್ತರ ಒಳನಾಡಿನಲ್ಲೂ ಮಳೆ

ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಮುಂದಿನ ದಿನಗಳಲ್ಲಿ ಏರಿಕೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 5ರವರಗೆ ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನಲ್ಲಿ ನಿತ್ಯ ರಾತ್ರಿ ಮಳೆ ಆಗುತ್ತಲೇ ಇದೆ. ಮುಂದಿನ ಎರಡು ದಿನಗಳವರಗೆ ಬೆಂಗಳೂರಿನಲ್ಲೂ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ಹೇಳಿದ್ದಾರೆ.

ಕರಾವಳಿ ಭಾಗದಲ್ಲಿ ಮಳೆ ಆರಂಭ

ಕರಾವಳಿ ಭಾಗದಲ್ಲಿ ಮಳೆ ಆರಂಭ

ಕರಾವಳಿ ಭಾಗದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಶಿರಾಡಿ, ಕುಮಟಾ, ಅಂಕೋಲಾ ತಲಾ ಎಂಟು ಸೆಂ.ಮೀ ಮಳೆಯಾಗಿದ್ದು, ಗೋಕರ್ಣ, ಕದರಾದಲ್ಲಿ ತಲಾ ಏಳು ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.

English summary
Southwest monsoon was active over South Interior Karnataka and weak over Some places of Coastal Karnataka and North Interior Karnataka .
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X