ಕರಾವಳಿ, ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ: 3 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು, ಜುಲೈ 23: ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಕೆಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ, ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ಮುಂಗಾರು ಆರಂಭವಾಗಿ ಹಲವು ದಿನಗಳು ಕಳೆದಿದ್ದು, ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಈಗಾಗಲೇ ಹಲವೆಡೆ ಭೂಕುಸಿತ ಉಂಟಾಗಿದ್ದು, ಪ್ರವಾಹ ಪರಿಸ್ಥಿತಿಗಳೂ ಎದುರಾಗಿವೆ.

ಜುಲೈ 23ರಂದು ವಾಯವ್ಯ ಬಂಗಾಳಕೊಲ್ಲಿಯಲ್ಲಿ ಒತ್ತಡ ರೂಪುಗೊಳ್ಳುವ ಸಾಧ್ಯತೆಯಿದೆ. ಈ ಪ್ರಭಾವದಿಂದ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಜುಲೈ 26 ರವರೆಗೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಈ ನಡುವೆ ಬೆಂಗಳೂರಿನಲ್ಲಿ ನಿನ್ನೆ(ಜು.22) ಸಂಜೆ 5.30ರವರೆಗೆ 1.7 ಎಂಎಂ ಮಳೆಯಾಗಿದ್ದು, ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1 ಎಂಎಂ, ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ 0.7 ಎಂಎಂ ಮಳೆಯಾಗಿದೆ ಎಂದು ತಿಳಿದುಬಂದಿದೆ

ಕರಾವಳಿ ಜಿಲ್ಲೆಗಳಲ್ಲಿ ಗಾಳಿಯಿಂದ ಕೂಡಿದ ಮಳೆಯಾಗುತ್ತಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜುಲೈ 23-24ರಂದು ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ.

ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಮಹಾ ಮಳೆಗೆ ನದಿಗಳು ಉಕ್ಕಿ ಹರಿಯುತ್ತಿವೆ. ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣಕ್ಕೆ ನದಿ ನೀರು ನುಗ್ಗಿದೆ. ಹಿರಣ್ಯಕೇಶಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಸಂಕೇಶ್ವರ ಪಟ್ಟಣದ ತಗ್ಗು ಪ್ರದೇಶಗಳಿಗೆ ಹಿರಣ್ಯಕೇಶಿ ನದಿ ನೀರು ನುಗ್ಗಿದೆ. ಪಟ್ಟಣದ ಲಕ್ಷ್ಮೀ ದೇವಸ್ಥಾನ ಹಾಗೂ ಶಂಕರಲಿಂಗ ದೇವಸ್ಥಾನಗಳಿಗೂ ನದಿ ನೀರು ನುಗ್ಗಿದೆ

ಶಿರಸಿ, ಸಿದ್ದಾಪುರದಲ್ಲೂ ಭಾರೀ ಮಳೆಯಾಗುತ್ತಿದ್ದು, ಸಣ್ಣ-ಪುಟ್ಟ ನದಿಗಳು ಉಕ್ಕಿ ಹರಿಯುತ್ತಿವೆ. ತಗ್ಗು ಪ್ರದೇಶ ಜಲಾವೃತವಾಗಿದ್ದು, ಜನರು ಕಂಗಾಲಾಗಿದ್ದಾರೆ. ಇನ್ನು, ಕದ್ರಾ ಜಲಾಶಯ ತುಂಬಿದ್ದು, ನಿರಂತರವಾಗಿ ಕಾಳಿ ನದಿಗೆ ನೀರನ್ನು ಹೊರಬಿಡಲಾಗುತ್ತಿದೆ. ಹೀಗಾಗೊ ಕಾಳಿ ನದಿ ಪಾತ್ರದ ಗ್ರಾಮಗಳು ಜಲಾವೃತವಾಗುವ ಭಯ ಕಾಡುತ್ತಿದೆ. ಈಗಾಗಲೆ ಸಣ್ಣ ಪುಟ್ಟ ಬಡಾವಣೆಗಳಿಗೆ ನೀರು ನುಗ್ಗಿದೆ.

 ಉತ್ತರ ಒಳನಾಡಿನಲ್ಲಿ ಮಳೆ

ಉತ್ತರ ಒಳನಾಡಿನಲ್ಲಿ ಮಳೆ

ಇನ್ನು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 ದಕ್ಷಿಣ ಒಳನಾಡಿನಲ್ಲಿ ಮಳೆ

ದಕ್ಷಿಣ ಒಳನಾಡಿನಲ್ಲಿ ಮಳೆ

ಬೆಂಗಳೂರು,ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಹಲವೆಡೆ ಶೀತಗಾಳಿ ಮುಂದುವರೆದಿದೆ.

 ಬೆಂಗಳೂರು ಹವಾಮಾನ ವರದಿ

ಬೆಂಗಳೂರು ಹವಾಮಾನ ವರದಿ

ಬೆಂಗಳೂರಿನಲ್ಲಿ ಹಲವೆಡೆ ಮಳೆಯಾಗಿದೆ, 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 25.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 26.2 ಡಿಗ್ರಿ ಸೆಲ್ಸಿಯಸ್, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recommended Video

    BJP ಜಾತಿ ರಾಜಕೀಯಕ್ಕೆ ಮಣೆ ಹಾಕುತ್ತಿರುವ ಬಿಜೆಪಿ ಹೈ ಕಮಾಂಡ್! | Oneindia Kannada
     ರಾಜ್ಯದ ಯಾವ್ಯಾವ ಭಾಗಗಳಲ್ಲಿ ಅತಿಯಾದ ಮಳೆಯಾಗಿದೆ?

    ರಾಜ್ಯದ ಯಾವ್ಯಾವ ಭಾಗಗಳಲ್ಲಿ ಅತಿಯಾದ ಮಳೆಯಾಗಿದೆ?

    ಸೋಮವಾರಪೇಟೆ, ಭಾಗಮಂಡಲ, ಸಕಲೇಶಪುರ, ಆಗುಂಬೆ, ನಿಪ್ಪಾಣಿ, ಕೊಪ್ಪ, ಶೃಂಗೇರಿ, ತೀರ್ಥಹಳ್ಳಿ, ಕೊಟ್ಟಿಗೆಹಾರ, ತಾಳಗುಪ್ಪ, ಅಗ್ರಹಾರ ಕೋಣಂದೂರು, ಮಂಚಿಕೆರೆ, ಯಲ್ಲಾಪುರ, ಕಾರ್ಕಳ, ಸಂಕೇಶ್ವರ, ಚಿಕ್ಕೋಡಿ, ಅಜ್ಜಂಪುರ, ಧರ್ಮಸ್ಥಳ, ಮೂರ್ನಾಡು, ಹೊನ್ನಾವರ, ಮಂಡಗದ್ದೆ, ಬೆಳ್ತಂಗಡಿ, ಭಟ್ಕಳ, ಕಿರವತ್ತಿ, ಹಳಿಯಾಳ, ಜಯಪುರ, ಬಾಳೆಹೊನ್ನೂರು, ತ್ಯಾಗರ್ತಿ, ಮುಂಡಗೋಡು, ನಿಟ್ಟೂರು, ಬೆಳಗಾವಿ, ಬಂಡೀಪುರ, ಉಪ್ಪಿನಂಗಡಿ, ರಾಯಚೂರು, ಕಲಬುರಗಿ, ನರಗುಂದ, ಆನವಟ್ಟಿ, ಕುಷ್ಟಗಿ, ಮಸ್ಕಿ, ರಾಮಗಿರಿಯಲ್ಲಿ ಮಳೆಯಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+