ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯ ಸಾಧ್ಯತೆ

|
Google Oneindia Kannada News

ಬೆಂಗಳೂರು, ಜೂನ್ 17: ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Recommended Video

Weather forecast ಧಾರಾಕಾರ ಮಳೆ ಜನ ಜೀವನ ಅಸ್ತವ್ಯಸ್ತ !! | Oneindia Kannada

ರಾಜ್ಯದಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು, ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಮುಂಗಾರು: ರಾಜ್ಯದ ವಿವಿಧೆಡೆ ಇಂದು ಭಾರಿ ಮಳೆಯ ಎಚ್ಚರಿಕೆಮುಂಗಾರು: ರಾಜ್ಯದ ವಿವಿಧೆಡೆ ಇಂದು ಭಾರಿ ಮಳೆಯ ಎಚ್ಚರಿಕೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಿನ್ನೆಯಿಂದ ಎಡಬಿಡದೆ ಮಳೆ ಸುರಿಯುತ್ತಿದೆ, ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್‌ಆರ್‌ಪುರ ತಾಲೂಕಿನಲ್ಲಿ ಭರ್ಜರಿ ಮಳೆಯಾಗಿದೆ.

 ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಸೇರಿದಂತೆ ಹಲವು ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

 ಎಲ್ಲಿ ಅತಿ ಹೆಚ್ಚು ಮಳೆ

ಎಲ್ಲಿ ಅತಿ ಹೆಚ್ಚು ಮಳೆ

ಆಗುಂಬೆ, ಕೊಲ್ಲೂರು, ಕದ್ರ, ಕೊಟ್ಟಿಗೆಹಾರ, ಭಾಗಮಂಡಲ, ಕಾರವಾರ, ಬೆಳ್ತಂಗಡಿ, ಉಪ್ಪಿನಂಗಡಿ, ಗೋಕರ್ಣ, ಕಳಸ, ತಾಳಗುಪ್ಪ, ಸಿದ್ದಾಪುರ, ಶೃಂಗೇರಿ, ಯಲ್ಲಾಪುರ, ಜಯಪುರ, ಹುಂಚದಕಟ್ಟೆ, ವಿರಾಜಪೇಟೆಯಲ್ಲಿ ಅಧಿಕ ಮಳೆಯಾಗಿದೆ.

 ಸಾಧಾರಣ ಮಳೆ ಎಲ್ಲೆಲ್ಲಿ

ಸಾಧಾರಣ ಮಳೆ ಎಲ್ಲೆಲ್ಲಿ

ಮಡಿಕೇರಿ, ಹಳಿಯಾಳ, ಮಂಚಿಕೆರೆ, ಕಾರ್ಕಳ, ಬೆಳಗಾವಿ, ಮಾಣಿ, ಧರ್ಮಸ್ಥಳ, ಸಿದ್ದಾಪುರ, ಹಿಡ್ಕಲ್, ಶಿರಾಲಿ, ಧಾರವಾಡ, ಮಂಕಿ, ಉಡುಪಿ, ಆನವಟ್ಟಿ, ಸಂಕೇಶ್ವರ, ಮುಂಡಗೋಡು, ವಿಟ್ಲ, ಚಿಕ್ಕೋಡಿ, ಬೈಲಹೊಂಗಲ, ಮಾದಾಪುರ, ತ್ಯಾಗರ್ತಿ, ಬಾಳೇಹೊನ್ನೂರು, ಕಲಬುರಗಿ, ಬಂಡೀಪುರ, ತ್ಯಾಗರ್ತಿ, ಹಾಸನ, ಶಿವಮೊಗ್ಗ, ಅಥಣಿ, ದಾವಣಗೆರೆ, ಸಂತೆಬೆನ್ನೂರಿನಲ್ಲಿ ಮಳೆಯಾಗಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಿದೆ. 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 26.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

English summary
Southwest Monsoon Active Over Karnataka, Meteorological department issued Orange Alert Issued For 6 Districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X