ರಾಜ್ಯದಲ್ಲಿ ಜುಲೈ 23ರವರೆಗೂ ಭಾರಿ ಮಳೆ, 7 ಜಿಲ್ಲೆಗಳಿಗೆ ರೆಡ್ ಅಲರ್ಟ್
ಬೆಂಗಳೂರು, ಜುಲೈ 19: ರಾಜ್ಯದಲ್ಲಿ ಜುಲೈ 23ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
Recommended Video
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಚಾಮರಾಜಗರ, ಚಿತ್ರದುರ್ಗ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಳೆದ ಒಂದು ದಿನದಲ್ಲಿ ಎಲ್ಲೆಲ್ಲಿ ಮಳೆಯಾಗಿದೆ?
ಭಟ್ಕಳದಲ್ಲಿ 21 ಸೆಂ.ಮೀ ಮಳೆಯಾಗಿದೆ, ಉಚ್ಚಂಗಿದುರ್ಗದಲ್ಲಿ 20 ಸೆಂ.ಮೀ ಮಳೆಯಾಗಿದೆ. ಶಿರಾಲಿ, ಆಗುಂಬೆ, ಕೋಟಾ, ಕುಂದಾಪುರ, ಥೊಂಡೆಬಾವಿ, ದಾವಣಗೆರೆ, ಸುಬ್ರಹ್ಮಣ್ಯ, ಮಾಣಿ, ಪಣಂಬೂರಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ಸಾಧಾರಣ ಮಳೆ?
ಮಂಗಳೂರು, ಉಡುಪಿ, ಸಿದ್ದಾಪುರ, ಕಾರ್ಕಳ, ಸಿದ್ದಾಪುರ, ಮೂಡುಬಿದಿರೆ, ಪುತ್ತೂರು, ಬೆಳ್ತಂಗಡಿ, ಬಂಗಾರಪೇಟೆ, ಚಿಕ್ಕಬಳ್ಳಾಪುರ, ಉಪ್ಪಿನಂಗಡಿ, ಸುಳ್ಯ, ಮುಲ್ಕಿ, ಧರ್ಮಸ್ಥಳ, ಜಗಳೂರು, ಶೃಂಗೇರಿ, ಬೇವೂರು, ಸಂತೆಬೆನ್ನೂರು, ಶಿಡ್ಲಘಟ್ಟ, ನಾಯಕನಹಟ್ಟಿ, ಹೊಳಲ್ಕೆರೆ, ದೇವನಹಳ್ಳಿ, ಗುಬ್ಬಿ, ಬೆಂಗಳೂರು ಕೆಐಎಎಲ್, ಮಡಿಕೇರಿ, ಬೆಳ್ಳೂರು, ಹೊಸಕೋಟೆ, ಬೀದರ್, ಹೊನ್ನಾವರ, ಮಳವಳ್ಳಿ, ಬಾಳೆಹೊನ್ನೂರು, ಕೊಪ್ಪ, ಜಯಪುರ, ರಾಮಗಿರಿ, ಹೊಸದುರ್ಗ, ಕೊಳ್ಳೇಗಾಲ, ಹೊನ್ನಾಳಿ, ತುಮಕೂರು, ಗೋಕರ್ಣ, ತೀರ್ಥಹಳ್ಳಿ, ಶಿಕಾರಿಪುರ, ಮಾಲೂರು, ಹರಿಹರ, ಬಾಗಲಕೋಟೆ, ನೆಲಮಂಗಲ, ಹಾಸನ, ಚಳ್ಳಕೆರೆ, ಹಿರಿಯೂರು, ವಿಜಯಪುರ, ಗದಗ, ಸಿದ್ದಾಪುರ, ಮುಂಡಗೋಡು, ಕಡೂರು, ಕುಣಿಗಲ್, ಆಲೂರು, ಮಂಡ್ಯ, ಟಿ ನರಸೀಪುರ, ಗುಡಿಬಂಡೆ, ವಿರಾಜಪೇಟೆ, ಹಾರಂಗಿ, ಬಂಡೀಪುರದಲ್ಲಿ ಮಳೆಯಾಗಿದೆ.

ಬೆಂಗಳೂರು ಹವಾಮಾನ ವರದಿ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್‌ಎಎಲ್‌ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್‌ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ?
ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಚಾಮರಾಜಗರ, ಚಿತ್ರದುರ್ಗ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.











Click it and Unblock the Notifications