ಕರ್ನಾಟಕದ 7 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು, ಜುಲೈ 09: ರಾಜ್ಯದ 7 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯಕ್ಕೆ ನೈರುತ್ಯ ಮುಂಗಾರು ಜುಲೈ 10 ರಂದು ಭಾರೀ ಮಳೆ ತರಲಿದೆ. ನಂತರದ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈ ಹಿಂದೆಯೇ ಸೂಚನೆ ನೀಡಿತ್ತು.
ಅದರಂತೆಯೇ ಗುರುವಾರ ರಾತ್ರಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಅಲ್ಲದೆ, ಮುಂದಿನ ನಾಲ್ಕು-ಐದು ದಿನ ಭಾರೀ ಮಳೆಯ ನಿರೀಕ್ಷೆ ಇದೆ. ಪಶ್ಚಿಮ ಘಟ್ಟ - ಮಲೆನಾಡನ್ನು ಹೊರತುಪಡಿಸಿ ಉಳಿದೆಡೆ ಸಾಧಾರಣ ಮಳೆಯಾಗಿದೆ.
ಮುಂಗಾರು ರಾಜ್ಯಕ್ಕೆ ಪ್ರವೇಶ ಪಡೆದು ಒಂದು ತಿಂಗಳಾಗಿದ್ದರೂ ಸಹ ಈ ವರೆಗೆ ಹೇಳಿಕೊಳ್ಳುವಂತಹ ಉತ್ತಮ ಮಳೆಯಾಗಿರಲಿಲ್ಲ. ಮುಂದಿನ ಮುರ್ನಾಲ್ಕು ದಿನ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆ ನಿರೀಕ್ಷಿಸಲಾಗಿದೆ.

ಆರೆಂಜ್ ಅಲರ್ಟ್ ಘೋಷಣೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ಚಾಮರಾನಗರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಎಲ್ಲೆಲ್ಲಿ ಮಳೆಯಾಗಿದೆ?
ಮುಲ್ಕಿ, ಸೇಡಂ, ಭಟ್ಕಳ, ಪಣಂಬೂರು, ಮೂಡುಬಿದಿರೆ, ಉಪ್ಪಿನಂಗಡಿ, ಮಂಕಿ, ಕಾರ್ಕಳ, ಶಿರಾಲಿ, ಸಿದ್ದಾಪುರ, ಔರಾದ್, ಎಂಎಂ ಹಿಲ್ಸ್, ಬಂಟ್ವಾಳ, ಕುಂದಾಪುರ, ತಾಳಿಕೋಟೆ, ಶಿಡ್ಲಘಟ್ಟ, ಚಳ್ಳಕೆರೆ, ಕದ್ರ, ಪುತ್ತೂರು, ಕೋಟ, ಬೀದರ್, ಬಾದಾಮಿ, ರಾಯಚೂರು, ಜೇವರಗಿ, ಚಿಂತಾಮಣಿ, ತಿಪಟೂರು, ಭರಮಸಾಗರ, ಹೊಸಪೇಟೆ, ಸಾಗರದಲ್ಲಿ ಮಳೆಯಾಗಿದೆ.

ಬೆಂಗಳೂರು ಹವಾಮಾನ ಹೇಗಿದೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.
ಎಚ್‌ಎಎಲ್‌ನಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.Recommended Video

ರಾಜ್ಯದ ವಾತಾವರಣ ಹೇಗಿದೆ?
ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications