ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಾದ್ಯಂತ ಮತ್ತೆ ವರುಣನ ಆರ್ಭಟ

|
Google Oneindia Kannada News

ಬೆಂಗಳೂರು, ಆಗಸ್ಟ್ 30: ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಾದ್ಯಂತ ಮತ್ತೆ ವರುಣನ ಆರ್ಭಟ ಜೋರಾಗಿದೆ.

ಶುಕ್ರವಾರ ಬೆಳಗಿನ ಜಾವದಿಂದಲೇ ಮಳೆ ಆರಂಭವಾಗಿದ್ದು, ಸಾಗರ, ಹೊನ್ನಾವರ, ಸಿದ್ದಾಪುರ ಸೇರಿದಂತೆ ಹಲವೆಡೆ ಮಳೆ ಸುರಿಯುತ್ತಿದೆ. ಕೆಲವು ದಿನಗಳ ಹಿಂದೆ ಕಾಳಿ ನದಿಯ ಪ್ರವಾಹದಿಂದ ಹಾನೀಗೀಡಾಗಿರುವ ಕಾರವಾರ ತಾಲೂಕಿನ ಕದ್ರಾ, ಮಲ್ಲಾಪುರ ಭಾಗದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪರಿಶೀಲನೆ ಕೈಗೊಳ್ಳಲಿದ್ದಾರೆ.

Recommended Video

ಮಲೆನಾಡಿಗೂ ಎದುರಾಯ್ತು ನೀರಿನ ಕಂಟಕ..!

ಕರ್ನಾಟಕ : ಬರಪೀಡಿತ ಮೂರು ಜಿಲ್ಲೆಗಳಲ್ಲಿ ಮೋಡ ಬಿತ್ತನೆಕರ್ನಾಟಕ : ಬರಪೀಡಿತ ಮೂರು ಜಿಲ್ಲೆಗಳಲ್ಲಿ ಮೋಡ ಬಿತ್ತನೆ

ಇನ್ನು ಬೆಂಗಳೂರಿನಲ್ಲಿ ಹಗಲು ಹೊತ್ತು ವಿಪರೀತ ಸೆಕೆ ರಾತ್ರಿಯಾದರೆ ಸಾಕು ಮಳೆ ಶುರುವಾಗುತ್ತಿದೆ. ಇನ್ನು ಗುಜರಾತ್, ಗೋವಾದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Southwest Monsoon Has Been Active Over Uttarakannada And Shivamogga

ಬೆಂಗಳೂರಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.6 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 30.7 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.1 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 20.6ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಉತ್ತರ ಕನ್ನಡದ ಮಂಕಿಯಲ್ಲಿ ಅತಿ ಹೆಚ್ಚು ಅಂದರೆ 13 ಸೆಂ.ಮೀ ಮಳೆಯಾಗಿದೆ. ಸುಬ್ರಹ್ಮಣ್ಯ, ಕುಮದಾಪುರ, ಉಡುಪಿ, ಗೋಕರ್ಣ, ಮಂಗಳೂರು, ಹೆಸರಘಟ್ಟ, ಭಟ್ಕಳ, ಶಿರಾಲಿಯಲ್ಲಿ ಮಳೆಯಾಗಿದೆ.

English summary
Southwest monsoon has been active over Coastal Karnataka Uttarakannada And Shivamogga, Rainfall occurred at a few places over North Interior Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X