ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು, ಜುಲೈ 07: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 7 ರಿಂದ ಜುಲೈ 11ರವರೆಗೂ ಈ ಜಿಲ್ಲೆಗಳಲ್ಲಿ ವಿಪರೀತ ಮಳೆ ಸುರಿಯಲಿದೆ ಎಂದು ಹೇಳಲಾಗಿದೆ.
ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಿದೆ
ಕಾರವಾರ, ಲಕ್ಷ್ಮೇಶ್ವರ, ಗೋಪಾಲನಗರ, ಗೋಕರ್ಣ, ಭಟ್ಕಳ, ಹೊನ್ನಾವರ, ಪಾಂಡವಪುರ, ನಂಜನಗೂಡು, ಮಂಕಿ, ಚಿಂಚೋಳಿ, ಸೇಡಂ, ಹುನಗುಂದ, ಶ್ರೀರಂಗಪಟ್ಟಣ, ಕನಕಪುರ, ದಾವಣಗೆರೆ, ಸಿದ್ದಾಪುರ, ಕಲಬುರಗಿ, ಹಿರಿಹರ, ಕೋಟ, ಬಂಡೀಪುರ, ಚಾಮರಾಜನಗರ, ಕೆಆರ್ ನಗರ, ರಾಮನಗರದಲ್ಲಿ ಮಳೆಯಾಗಿದೆ.

13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು
ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಕಳೆದ ನಾಲ್ಕು ದಿನಗಳಿಂದ ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ನಿನ್ನೆ ಮಲೆನಾಡು ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದಲ್ಲೂ ಉತ್ತಮ ಮಳೆಯಾಗಿದೆ ಎಂದು ತಿಳಿದುಬಂದಿದೆ.
ಅಲ್ಲದೆ, ಈ ಮಳೆ ಬುಧವಾರವೂ ಮುಂದುವರೆಯಲಿದ್ದು, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕಟ್ಟೆಚ್ಚರ ನೀಡಿದೆ. ಅಲ್ಲದೆ ಉತ್ತರ ಒಳನಾಡಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಜೆಯ ವೇಳೆಗೆ ಮಳೆಯಾಗಲಿದ್ದು, ರಾತ್ರಿ ಇಡೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Recommended Video

ಬೆಂಗಳೂರು ಹವಾಮಾನ ವರದಿ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications