ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ಕರಾವಳಿ, ಉತ್ತರ ಒಳನಾಡಿನಲ್ಲಿ 2 ದಿನ ಭಾರಿ ಮಳೆ ಸಾಧ್ಯತೆ

|
Google Oneindia Kannada News

ಬೆಂಗಳೂರು, ಜುಲೈ 20: ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಕೊಂಚ ದುರ್ಬಲಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದಲ್ಲಿ ಜುಲೈ 23ರವರೆಗೂ ಭಾರಿ ಮಳೆ, 7 ಜಿಲ್ಲೆಗಳಿಗೆ ರೆಡ್ ಅಲರ್ಟ್ರಾಜ್ಯದಲ್ಲಿ ಜುಲೈ 23ರವರೆಗೂ ಭಾರಿ ಮಳೆ, 7 ಜಿಲ್ಲೆಗಳಿಗೆ ರೆಡ್ ಅಲರ್ಟ್

ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ.

 ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ

ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ

ಮುಲ್ಕಿ, ಭಟ್ಕಳ, ಆಗುಂಬೆ, ಹುಂಚದಕಟ್ಟೆ, ಅರಸಳು, ಕೊಲ್ಲೂರು, ವಿಜಯಪುರ, ಶಿರಾಲಿ, ಕೋಟಾದಲ್ಲಿ ಹೆಚ್ಚು ಮಳೆಯಾಗಿದೆ. ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ.

 ಯಾವ್ಯಾವ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ?

ಯಾವ್ಯಾವ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ?

ಮಂಕಿ, ಹೊನ್ನಾವರ, ಭೀಮರಾಯನಗುಂಡಿ, ಸೇಡಂ, ತೀರ್ಥಹಳ್ಳಿ, ಭಾಗಮಂಡಲ, ಹರಪನಹಳ್ಳಿ, ಸುಳ್ಯ, ಉಪ್ಪಿನಂಗಡಿ, ಮೂಡುಬಿದಿರೆ, ಬೆಳ್ತಂಗಡಿ, ಕಾರವಾರ, ಪಣಂಬೂರು, ಕದ್ರ, ಹೊಳೆ ಹೊನ್ನೂರು, ಲಿಂಗನಮಕ್ಕಿ, ಶಿವಮೊಗ್ಗ, ಲಿಂಗನಮಕ್ಕಿ, ಜಯಪುರದಲ್ಲಿ ಮಳೆಯಾಗಿದೆ.

ಪುತ್ತೂರು, ನರಗುಂದ, ತಾಳಿಕೋಟೆ, ಸಿದ್ದಾಪುರ, ಯಲ್ಲಾಪುರ, ಗೋಕರ್ಣ, ಕುಂದಾಪುರ, ಹರಿಹರ, ಕಳಸ, ಹುಮ್ನಾಬಾದ್, ತರಿಕೆರೆ, ಕೊಟ್ಟೂರು, ಮಂಡಗದ್ದೆ, ಬಸವನ ಬಾಗೇವಾಡಿ, ಕಳಸ, ಹಾರಂಗಿ, ಸಾಗರ, ಬೀದರ್, ಮೊಳಕಾಲ್ಮೂರು, ಮಂಚಿಕೆರೆ, ಚನ್ನಗಿರಿ, ಸೋಮವಾರಪೇಟೆ, ಸಂತೆಬೆನ್ನೂರು, ಹಳಿಯಾಳ, ಸಕಲೇಶಪುರ, ರಾಮಗಿರಿ, ಆನವಟ್ಟಿ, ಶಿರಾಳಕೊಪ್ಪ, ಜಾಲಹಳ್ಳಿ, ಹಿರೆಕೆರೂರು, ಜಾಲಹಳ್ಳಿ, ರಾಯಚೂರಿನಲ್ಲಿ ಮಳೆಯಾಗಿದೆ.

 ಮುಂದಿನ ಎರಡು ದಿನ ಎಲ್ಲೆಲ್ಲಿ ಮಳೆ

ಮುಂದಿನ ಎರಡು ದಿನ ಎಲ್ಲೆಲ್ಲಿ ಮಳೆ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ.

Recommended Video

ಖುಷಿಯಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸುತ್ತಿರುವ ವಿದ್ಯಾರ್ಥಿಗಳು | Oneindia Kannada
 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಲಿದೆ. 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್‌ಎಎಲ್‌ನಲ್ಲಿ 25.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 23.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

English summary
Southwest monsoon was vigorous over North Interior Karnataka, active over South Interior Karnataka and normal over Coastal Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X