ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಮತ್ತೆ ಮಹಾಮಳೆ ಆತಂಕ
ಬೆಂಗಳೂರು, ಸೆಪ್ಟೆಂಬರ್ 27: ರಾಜ್ಯದಲ್ಲಿ ಮಳೆ ಇನ್ನೂ ಕಡಿಮೆಯಾಗಿಲ್ಲ, ಒಂದು ಅಥವಾ ಅರ್ಧದಿನ ಬಿಡುವು ಪಡೆದು ಮತ್ತೆ ಮಳೆ ಅಬ್ಬರಿಸುತ್ತಿದೆ.
ಮತ್ತೆ ಮಹಾಮಳೆ ಆತಂಕ ಎದುರಾಗಿದೆ. ಈಗಾಗಲೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕರ್ನಾಟಕದ ಜನತೆ ಮಳೆಯಿಂದಾಗಿ ಕಂಗಾಲಾಗಿದ್ದಾರೆ.
ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದ ವಿವಿಧೆಡೆ ಕಳೆದ ಎರಡ್ಮೂರು ದಿನಗಳಿಂದ ಅಬ್ಬರಿಸುತ್ತಿರುವ ಗುರುವಾರವೂ ಮುಂದುವರೆದಿತ್ತು, ಈ ವಾರದ ಅಂತ್ಯದಲ್ಲಿ ಎರಡು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
Recommended Video
ರಾಯಚೂರು , ಯಾದಗಿರಿ ಜಿಲ್ಲೆಯಲ್ಲೂ ಮಳೆ ಆರ್ಭಟ ಮುಂದುವರೆದಿದ್ದು, ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಒಂದು ಲಕ್ಷ ಕ್ಯುಸೆಕ್ ನೀರು ಹರಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಮತ್ತೆ ಮಳೆರಾಯನ ಅಬ್ಬರ
ಬಳ್ಳಾರಿ ಜಿಲ್ಲೆಯ ಸಿರುಗುಪ್ಪದಲ್ಲಿ ಬಾಲಕಿಯೊಬ್ಬಳು ಚರಂಡಿಗೆ ಬಿದ್ದು ಸಾವನ್ನಪ್ಪಿದ್ದಾಳೆ. ಮಹಾರಾಷ್ಟ್ರದ ಜಲಘಟ್ಟ ಪ್ರದೇಶದಲ್ಲಿ ಮತ್ತೆ ಮಳೆ ಆರಂಭವಾಗಿರುವುದು, ಈಗಾಗಲೇ ಪ್ರವಾಹದಿಂದ ನಲುಗಿಹೋಗಿರುವ ಬೆಳಗಾವಿ, ಬಾಗಲಕೋಟೆ , ಯಾದಗಿರಿ, ರಾಯಚೂರು ಭಾಗದಲ್ಲಿ ಪುನಃ ಆತಂಕ ಸೃಷ್ಟಿಯಾಗಿದೆ.

ಇಂದು ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆ ಸಾಧ್ಯತೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ದುರ್ಬಲವಾಗಿರುವ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಮಳೆಯ ಅಬ್ಬರ ಕ್ಷೀಣಿಸಲಿದ್ದು, ಕೆಲವು ಜಿಲ್ಲೆಗಳಲ್ಲಿ ಮಾತ್ರ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದಲ್ಲಿ ಉಟಾಗಿದ್ದ ಮೇಲ್ಮೈ ಸುಳಿಗಾಳಿ ಮತ್ತು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ದುರ್ಬಲವಾಗುತ್ತಿದೆ.

ಶುಕ್ರವಾರ ಎಲ್ಲೆಲ್ಲಿ ಮಳೆ ಸಾಧ್ಯತೆ
ಮುಂದಿನ 24 ಗಂಟೆಗಳಲ್ಲಿ ಮಳೆ ತಗ್ಗಲಿದೆ , ಕರಾವಳಿಯ ಮೂರು ಜಿಲ್ಲೆಗಳು , ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದ ಎಂಟು ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಮಾತ್ರ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಿದ್ದಾರೆ.

ಬೆಳಗಾವಿಯಲ್ಲಿ ಆತಂಕ ತಂದ ಮಳೆ
ಮಹಾರಾಷ್ಟ್ರದ ಜಲಘಟ್ಟ ಪ್ರದೇಶ ಹಾಗೂ ಗಡಿ ಭಾಗದಲ್ಲಿ ಮತ್ತೆ ಮಳೆ ಆರಂಭವಾಗಿದ್ದರಿಂದ ಕೃಷ್ಣಾ ನದಿ ನೀರಿನಲ್ಲಿ ದಿಢೀರನೆ ಏರಿಕೆಯಾಗಿದೆ. ಇದರಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಸೇತುವೆಗಳು ಮುಳುಗಡೆಯಾಗಿವೆ. ವಿಜಯಪುರ ಜಿಲ್ಲೆಯ ವಿವಿಧೆಡೆ ಭಾರಿ ಮಳೆಗೆ ಡೋಣಿ ನದಿ ಮೈದುಂಬಿ ಹರಿಯುತ್ತಿದೆ.ಬಾಗಲಕೋಟೆ ಜಿಲ್ಲೆ ತಾಳಿಕೋಟೆಯ ಮಹಲ್‌ಗಲ್ಲಿ ಬಡಾವಣೆಗಳಲ್ಲಿ ಆರು ಮನೆ ಛಾವಣಿ ಕುಸಿದಿದೆ.












Click it and Unblock the Notifications