ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ 2 ದಿನ ಭಾರಿ ಮಳೆ

|
Google Oneindia Kannada News

ಬೆಂಗಳೂರು, ಆಗಸ್ಟ್ 24: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಅವರು ಬಂಗಾಳಕೊಲ್ಲಿಯ ಉಪಸಾಗರದಲ್ಲಿ ಬದಲಾವಣೆಯಾಗಿದ್ದು, ಮುಂದಿನ ಎರಡು ದಿನಗಳ ಕಾಲ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆ ನಿರೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ.

ಮುಂದಿನ 4 ದಿನ ಅಧಿಕ ಮಳೆಗೆ ಸಾಕ್ಷಿಯಾಗಲಿವೆ ಈ ರಾಜ್ಯಗಳುಮುಂದಿನ 4 ದಿನ ಅಧಿಕ ಮಳೆಗೆ ಸಾಕ್ಷಿಯಾಗಲಿವೆ ಈ ರಾಜ್ಯಗಳು

ಪ್ರಮುಖ ಜಲಾಶಯಗಳ ಜಲಾನಯನ ಭಾಗಗಳಲ್ಲಿ ಅಧಿಕ ಪ್ರಮಾಣದ ಮಳೆಯಾಗುತ್ತಿಲ್ಲ. ಇದರಿಂದ ಜಲಾಶಯಗಳ ಒಳ ಹರಿವಿನ ಪ್ರಮಾಣ ಕಡಿಮೆ ಇದೆ. ಜುಲೈನಲ್ಲಿ ಭಾರೀ ಮಳೆಯಿಂದಾಗಿ ಗಣನೀಯ ಪ್ರಮಾಣದಲ್ಲಿ ಜಲಾಶಯಗಳಿಗೆ ನೀರು ಹರಿದು ಬಂದಿತ್ತು. ಇದರಿಂದ ಬಹುತೇಕ ಜಲಾಶಯಗಳು ಭರ್ತಿಯಾಗುವ ಹಂತ ತಲುಪಿದ್ದವು.

ಕಲಬುರಗಿ, ಕೊಳ್ಳೇಗಾಲ, ಆಗುಂಬೆ, ಕೃಷ್ಣರಾಜಪೇಟೆ, ಚಿಂಚೋಳಿ, ಮೈಸೂರು, ಬಸವರಾಯನದುರ್ಗ, ಶ್ರೀರಂಗಪಟ್ಟಣ, ಸುಳ್ಯ, ಹೊಸಕೋಟೆ, ಚಾಮರಾಜನಗರ, ಮಂಚಿಕೆರೆ, ಮುನೀರಾಬಾದ್, ಮಂಡ್ಯ, ಕುಷ್ಟಗಿ, ಥೊಂಡೆಭಾವಿಯಲ್ಲಿ ಮಳೆಯಗಾಗಿದೆ.

ನೈಋತ್ಯ ಮುಂಗಾರು ಚೇತರಿಕೆ ಕಂಡಿದ್ದು, ರಾಜ್ಯದ ಬಹುತೇಕ ಕಡೆ ಹಗುರದಿಂದ ಸಾಧಾರಣ ಮಳೆಯಾದ ವರದಿಯಾಗಿದೆ. ಬಾಗಲಕೋಟೆ, ಗದಗ, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಿದೆ. ಕೆಲವೆಡೆ ಉತ್ತಮ ಮಳೆಯಾಗಿದ್ದರೆ, ಕೆಲವೆಡೆ ಸಾಧಾರಣ ಮಳೆಯಾದ ವರದಿಯಾಗಿದೆ.

ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಆಗಸ್ಟ್ 26ರ ವರೆಗೆ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದ್ದಾರೆ.ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಕೂಡ ಚುರುಕುಗೊಂಡಿವೆ. ವಿವಿಧ ಬೆಳೆಗಳ ಬಿತ್ತನೆ, ಭತ್ತ, ರಾಗಿ, ನಾಟಿ ಕಾರ್ಯವು ಚುರುಕುಗೊಂಡಿದೆ.

 ಕರಾವಳಿ ಜಿಲ್ಲೆಗಳಲ್ಲಿ ಮಳೆ

ಕರಾವಳಿ ಜಿಲ್ಲೆಗಳಲ್ಲಿ ಮಳೆ

ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಗಳಿವೆ. ಅರಬ್ಬಿ ಸಮುದ್ರದ ಪೂರ್ವಭಾಗದಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶ ನಿರ್ಮಾಣವಾಗಿದ್ದು, ಕರಾವಳಿ ಭಾಗದ ಎಲ್ಲ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಉತ್ತರ ಒಳನಾಡಿನಲ್ಲಿ ಇನ್ನೆರಡು ದಿನ ಚದುರಿದಂತೆ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಆ.25 ಮತ್ತು 26ರಂದು ಆ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದಿನಿಂದ ಆಗಸ್ಟ್ 26ರವರೆಗೆ ಕರಾವಳಿ ಭಾಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದ್ದು, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ. ಆ.25 ಮತ್ತು 26ರಂದು ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ಮುನ್ಸೂಚನೆಗಳಿವೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಸಾಧಾರಣ ಮಳೆ ಮುಂದುವರಿಯಲಿದೆ.

 ಮಲೆನಾಡಿನಲ್ಲೂ ಮಳೆ

ಮಲೆನಾಡಿನಲ್ಲೂ ಮಳೆ

ಕರ್ನಾಟಕದ ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ವರುಣನ ಅಬ್ಬರ ಮುಂದುವರೆದಿದೆ. ಕೆಲವೆಡೆ ಜಿಟಿ ಜಿಟಿ ಮಳೆಯಾದರೆ, ಇನ್ನೂ ಕೆಲವೆಡೆ ಧಾರಾಕಾರ ಮಳೆ ಸುರಿದಿದೆ. ಸಕಾಲಕ್ಕೆ ಸುರಿಯುತ್ತಿರುವ ಮಳೆಯಿಂದಾಗಿ ಬಿತ್ತನೆ ಕಾರ್ಯ ಮಾಡಿದ್ದ ರೈತರ ಮೊಗದಲ್ಲಿ ಹರ್ಷ ಮೂಡಿದೆ. ಇನ್ನೂ ಕೆಲವೆಡೆ ಮಳೆಗಾಗಿ ಕಾಯುತ್ತಿದ್ದ ರೈತರು ಬಿತ್ತನೆ ಕಾರ್ಯ ಮಾಡಲು ಮುಂದಾಗಿದ್ದಾರೆ.

ಪ್ರಮುಖವಾಗಿ ರಾಜ್ಯದ 9 ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಇನ್ನೂ 3 ದಿನ ಅಧಿಕ ಮಳೆಯಾಗಲಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ. ಆಗಸ್ಟ್​ 26ವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇಂದಿನಿಂದ 3 ದಿನ ಮಳೆಯಾಗಲಿದೆ.

 ಶ್ರೀಲಂಕಾ ಕರಾವಳಿ ಭಾಗದಲ್ಲಿ ಸಮುದ್ರದ ಮೇಲ್ಮೈ ಸುಳಿಗಾಳಿ ತೀವ್ರ

ಶ್ರೀಲಂಕಾ ಕರಾವಳಿ ಭಾಗದಲ್ಲಿ ಸಮುದ್ರದ ಮೇಲ್ಮೈ ಸುಳಿಗಾಳಿ ತೀವ್ರ

ಶ್ರೀಲಂಕಾದ ಕರಾವಳಿ ಭಾಗದಲ್ಲಿ ಸಮುದ್ರದ ಮೇಲ್ಮೈನಲ್ಲಿ ಸುಳಿಗಾಳಿ ತೀವ್ರಗೊಂಡಿದೆ. ಈ ಕಾರಣದಿಂದ ರಾಜ್ಯದಲ್ಲಿ ಸದ್ಯ ಸುರಿಯುತ್ತಿರುವ ಗುಡುಗು ಸಹಿತ ಮಳೆ ಆ.26ರವರೆಗೆ ಮುಂದುವರಿಯಲಿದೆ. ಕಳೆದ 2-3ದಿನಗಳಿಂದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಸಾಕಷ್ಟು ಕಡೆಗಳಲ್ಲಿ ಸುರಿಯುತ್ತಿರುವ ಮಳೆ ಇನ್ನಷ್ಟುದಿನ ಮುಂದುವರೆಯಲಿದೆ.

Recommended Video

ಇವತ್ತಿಗೂ ನನಗೆ ನೆಹರೂ,ಇಂದಿರಾ ಗಾಂಧಿ ಅಂದ್ರೆ ಇಷ್ಟ | Prathap Simha Part 2 | Oneindia Kannada
 ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ ಸೇರಿದಂತೆ ಉತ್ತರ ಒಳನಾಡು ಹಾಗೂ ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆ ಆಗಲಿದೆ.

ಆಗಾಗ ಬಿಸಿಲಿನ ವಾತಾವರಣ ಉಂಟಾದರೂ ಕೂಡ ಅಲ್ಲಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಆ.22ರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಯಲ್ಲಿ ಕಲಬುರಗಿ 10ಸೆಂ.ಮೀ, ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ 9ಸೆಂ.ಮೀ, ಕಲಬುರಗಿಯ ಚಿಂಚೊಳ್ಳಿಯಲ್ಲಿ 5 ಸೆಂ.ಮೀ ಮಳೆ ದಾಖಲಾಗಿದೆ ಎಂದು ಇಲಾಖೆ ವರದಿ ತಿಳಿಸಿದೆ.

English summary
Rainfall occurred at most places over Interior Karnataka and at many places over Coastal Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X