ಇಂದು ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ
ಬೆಂಗಳೂರು, ಅಕ್ಟೋಬರ್ 02: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನೆಲ್ಲೆಡೆ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ಮತ್ತು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ವರುಣನ ಆರ್ಭಟ ಮುಂದುವರೆಯಲಿದ್ದು, ಮುಂದಿನ 48 ಗಂಟೆಗಳ ಕಾಲ ಬಿಬಿಎಂಪಿ ವ್ಯಾಪ್ತಿಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ದಕ್ಷಿಣ ಒಳನಾಡಿನಲ್ಲಿ ಕೆಲವೇ ಕೆಲವು ಕಡೆ ಮಳೆಯಾಗಲಿದೆ. ಕೊಪ್ಪಳ, ಗದಗ, ಬಾಗಲಕೋಟೆ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಬುಧವಾರ ರಾತ್ರಿ ಹಾಗೂ ಗುರುವಾರ ಮುಂಜಾನೆ ಭಾರಿ ಮಳೆ ಸುರಿದಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.

ಮಳೆಯಾಗಿರುವ ಪ್ರದೇಶಗಳು
ಹಡಗಲಿ, ಮುನಿರಾಬಾದ್, ಹೊಸಪೇಟೆ, ಕುಷ್ಟಗಿ, ಹನುಮಸಾಗರ, ಇಳಕಲ್, ಬೈಲಹೊಂಗಲ, ಹುನಗುಂದ, ಬಸವನಬಾಗೇವಾಡಿ, ಲಿಂಗಸುಗೂರು, ಬಾದಾಮಿ, ಗುಡಿಬಂಡೆ, ಕೊಪ್ಪಳ, ಯಲಬುರ್ಗ, ಶಿಡ್ಲಘಟ್ಟ, ಕೂಡ್ಲಿಗಿ, ಮೊಳಕಾಲ್ಮೂರು, ಪಾಂಡವಪುರ, ಗದಗ, ಸುಳ್ಯ, ಕಾರವಾರ, ಅಥಣಿ, ಗೌರಿಬಿದನೂರು, ರಾಮನಗರ, ನಾಗಮಂಗಲ, ಹುಲಿಯೂರುದುರ್ಗಾ, ಪಾವಗಢ, ಸಿರಾ, ಮಧುಗಿರಿ, ಚಿಂತಾಮಣಿಯಲ್ಲಿ ಮಳೆಯಾಗಿದೆ.

ಬೆಂಗಳೂರಲ್ಲಿ ಹವಾಮಾನ ಹೇಗಿದೆ?
ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. 29 ಡಿಗ್ರಿ ಗರಿಷ್ಠ ಉಷ್ಣಾಂಶ, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇದೆ.

ಎಲ್ಲೆಲ್ಲಿ ಮಳೆಯಾಗಬಹುದು
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆ ಕಡಿಮೆ
ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆ ಕಡಿಮೆಯಾಗಿದ್ದು, ಒಣಹವೆ ಮುಂದುವರೆಯಲಿದೆ. ಅಕ್ಟೋಬರ್ 5 ರಿಂದ 7ರಷ್ಟೊತ್ತಿಗೆ ಬಹುತೇಕ ಎಲ್ಲಾ ಕಡೆ ಮಳೆ ಕಡಿಮೆಯಾಗಲಿದೆ.












Click it and Unblock the Notifications