• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ

|

ಬೆಂಗಳೂರು, ಜುಲೈ 1: ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಮತ್ತೆ ಮುಂಗಾರು ಚರುಕುಗೊಂಡಿದ್ದು, ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಏಳುತ್ತಿರುವುದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಐದು ದಿನಗಳವರೆಗೆ ಭಾರಿ ಮಳೆಎಯಾಗುವ ಸಾಧ್ಯತೆ ಇದೆ.

2 ದಿನ ಭಾರಿ ಮಳೆ; 15 ಜಿಲ್ಲೆಗಳಿಗೆ Yellow ಅಲರ್ಟ್

ಕರಾವಳಿಯಲ್ಲಿ ಮಂಗಳವಾರ ಹೆಚ್ಚು ಮಳೆಯಾಗಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಹೆಚ್ಚು ಮಳೆಯಾಗಿದೆ. ಜು.3ರವರೆಗೂ ಹೆಚ್ಚು ಮಳೆಯಾಗಲಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ಹಾಗೂ ಶಿಕಾರಿಪುರ ತಾಲೂಕುಗಳಲ್ಲೂ ಕೆಲವೆಡೆ ಸಾಧಾರಣ ಮಳೆಯಾಗಿದೆ. ದಾವಣಗೆರೆ ಜಿಲ್ಲೆಯ ಮಲೇಬೆನ್ನೂರು ಹಾಗೂ ತ್ಯಾವಣಿಯಲ್ಲಿ ತುಂತುರು ಮಳೆಯಾಗಿದೆ.

ಮಂಗಳೂರು, ಬ್ರಹ್ಮಾವರ,ತಿಪಟೂರು,ಕಾರ್ಕಳ, ಭಾಗಮಂಡಲದಲ್ಲಿ ವಿಪರೀತ ಮಳೆಸುರಿದಿದೆ.ಮೂಡಬಿದಿರೆ, ಚಿಕ್ಕಮಗಳೂರು, ಧರ್ಮಸ್ಥಳ, ಬೆಳ್ಳೂರು,ಥೊಂಡೇಬಾವಿ, ಜಯಪುರ, ಚಿಕ್ಕನಾಯಕನಹಳ್ಳಿ, ಶೃಂಗೇರಿ, ಗೋಕರ್ಣ, ಕದ್ರ, ಕೊಟ್ಟಿಗೆಹಾರ, ಕೊಲ್ಲೂರು, ಚನ್ನಗಿರಿ, ಸಿರಾ, ಮಹಾಲಿಂಗಪುರ, ಜಯಪುರ, ಸಿದ್ದಾಪುರ, ಮಡಿಕೇರಿ, ಹೊನ್ನಾವರ, ಲೋಕಾಪುರದಲ್ಲಿ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಚಿಕ್ಕಬಳ್ಳಾಪುರ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಇನ್ನುಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು,ದಾವಣಗೆರೆ,ಚಿತ್ರದುರ್ಗ,ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ.ಬೆಂಗಳೂರಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

English summary
Southwest monsoon was active over South Interior Karnataka. Rainfall occurred at most places over Coastal Karnataka and at a few places over North Interior Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more