ಮುಂಗಾರು ಚುರುಕು: ಜುಲೈ 10ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ
ಬೆಂಗಳೂರು, ಜುಲೈ 06: ರಾಜ್ಯದಲ್ಲಿ ಇಂದಿನಿಂದ ಮುಂಗಾರು ಚುರುಕಾಗಲಿದ್ದು, ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಳಗಾವಿ, ಧಾರವಾಡ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೊಡಗು, ಬೀದರ್, ಮಂಡ್ಯ, ರಾಮನಗರ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಜುಲೈ 10ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡಿನ ಕೆಲವೆಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.

ಎಲ್ಲೆಲ್ಲಿ ಹೆಚ್ಚು ಮಳೆ ಸುರಿದಿದೆ
ಕೊಳ್ಳೇಗಾಲ, ಪಾವಗಡ, ಆನೇಕಲ್, ಥೊಂಡೆಭಾವಿ, ಬೆಂಗಳೂರು ನಗರ, ಕೃಷ್ಣರಾಜಪೇಟೆ, ನೆಲಮಂಗಲ, ಶ್ರೀರಂಗಪಟ್ಟಣ, ಕುಣಿಗಲ್, ಮಾಗಡಿ, ಬರಗೂರು, ಗುಬ್ಬಿ, ಗೌರಿಬಿದನೂರು, ಮಂಡ್ಯ, ಮೊಳಕಾಲ್ಮೂರು, ಹಿರಿಯೂರು, ಮೈಸೂರು, ಚಿಂತಾಮಣಿ, ಕೆಆರ್ ನಗರ, ನಂಜನಗೂಡು, ಸಿರಾ, ಬೆಳ್ಳೂರು, ಮಲವಳ್ಳಿ, ಹಡಗಲಿ, ಚಿತ್ರದುರ್ಗ, ಭಟ್ಕಳ, ಕೋಟ, ಹೊನ್ನಾವರ, ರಾಯಚೂರಿನಲ್ಲಿ ಮಳೆಯಾಗಿದೆ.

ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಳಗಾವಿ, ಧಾರವಾಡ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೊಡಗು, ಬೀದರ್, ಮಂಡ್ಯ, ರಾಮನಗರ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಜುಲೈ 10ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಹವಾಮಾನ ಹೇಗಿದೆ?
ಬೆಂಗಳೂರಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಭಾನುವಾರ ಭಾರಿ ಮಳೆ ಸುರಿದಿತ್ತು, 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್‌ಎಎಲ್‌ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Recommended Video

ವಾಯುಭಾರ ಕುಸಿತ
ಶ್ರೀಲಂಕಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮ, ಜುಲೈ 10ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಇದೆ. ರಾಜ್ಯಾದ್ಯಂತ ಜುಲೈ 6ರಿಂದ ಮಳೆಯ ಪ್ರಮಾಣ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ.












Click it and Unblock the Notifications