ಕರ್ನಾಟಕ: 2 ದಿನ ಉತ್ತರ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು, ಅಕ್ಟೋಬರ್ 22: ಮುಂದಿನ 2 ದಿನ ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕದಲ್ಲಿ ಜನಜೀವನ ಅಸ್ತವ್ಯಸ್ತಗೊಳಿಸಿರುವ ಮಳೆಯ ಆರ್ಭಟ ಶುಕ್ರವಾರದಿಂದ ತುಸು ತಗ್ಗಲಿದೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಸುರಿಯಲಿದೆ. ದಕ್ಷಿಣ ಒಳನಾಡು ಪ್ರದೇಶಗಳು ಸೇರಿ ಒಟ್ಟು 12 ಜಿಲ್ಲೆಗಳಲ್ಲಿ ಯೆಲ್ಲೊಅಲರ್ಟ್‌ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಬೆಳ್ತಂಗಡಿಯಲ್ಲಿ ಭಾರಿ ಮಳೆ

ಬೆಳ್ತಂಗಡಿಯಲ್ಲಿ ಭಾರಿ ಮಳೆ

ಬುಧವಾರ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹೋಬಳಿ ವ್ಯಾಪ್ತಿಯಲ್ಲಿ ಬುಧವಾರ 209 ಮಿ.ಮೀ.ನಷ್ಟು ದಾಖಲೆ ಪ್ರಮಾಣದ ಮಳೆಯಾಗಿದೆ. ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಕೆಲವೆಡೆ 100 ಮಿ.ಮೀ.ಗೂ ಅಧಿಕ ಮಳೆಯಾಗಿದೆ.

ರಾಜ್ಯದಲ್ಲಿ 2-3 ದಿನಗಳಿಂದ ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಸುರಿಸಿದ್ದ ಚಿತ್ತಾ ಮಳೆ, ಈಗ ದಕ್ಷಿಣ ಒಳನಾಡಿಗೆ ಚಿತ್ತೈಸಿದೆ. ಬುಧವಾರದಿಂದಲೇ ಮಳೆ ಆರ್ಭಟ ಆರಂಭವಾಗಿದ್ದು, ಶುಕ್ರವಾರದವರೆಗೆ ಮುಂದುವರಿಯುವ ಸಾಧ್ಯತೆ ಇದೆ.

ಅತಿ ಹೆಚ್ಚು ಮಳೆಯಾದ ಪ್ರದೇಶಗಳು

ಅತಿ ಹೆಚ್ಚು ಮಳೆಯಾದ ಪ್ರದೇಶಗಳು

ಬೇವೂರು, ಹಾವೇರಿ, ಧಾರವಾಡ, ದಾವಣಗೆರೆ,ಹಾವೇರಿ, ಶಿರಹಟ್ಟಿ, ಹೆಸರಘಟ್ಟ, ಹೊಸಕೋಟೆ, ಬೆಂಗಳೂರು ನಗರದಲ್ಲಿ ಭಾರಿ ಮಳೆ ಸುರಿದಿದೆ.

ಸಾಧಾರಣ ಮಳೆಯಾದ ಪ್ರದೇಶಗಳು

ಸಾಧಾರಣ ಮಳೆಯಾದ ಪ್ರದೇಶಗಳು

ಸಂತೆಬೆನ್ನೂರು, ಚಿತ್ರದುರ್ಗ,ನೆಲಮಂಗಲ, ಸುಬ್ರಹ್ಮಣ್ಯ,ಶ್ರೀರಾಂಪುರ, ಮಹಾಲಿಂಗಪುರ, ಯಲಬುರ್ಗಾ, ರಾಮನಗರ, ಪಾವಗಡ, ದೊಡ್ಡಬಳ್ಳಾಪುರ, ತುರುವೇಕೆರೆ,ಉಚ್ಚಂಗಿದುರ್ಗ,ಪಣಂಬೂರು,ಕುಣಿಗಲ್, ಮೊಳಕಾಲ್ಮೂರು, ಮಾಣಿ,ಕುಣಿಗಲ್, ಜಗಲ್‌ಪೇಟೆ,ಚಿಂಚೋಳಿ,ಅಥಣಿ,ಶ್ರವಣಬೆಳಗೊಳ,ಮುನಿರಾಬಾದ್,ಬಸವಕಲ್ಯಾಣ,ಲೋಕಾಪುರ,ಹೊಸಹಳ್ಳಿ,ಅಜ್ಜಂಪುರ, ತಿಪಟೂರು,ಮಂಡ್ಯ,ಬಾಂಗಾರಪೇಟೆ, ವಿಟ್ಲದಲ್ಲಿ ಮಳೆಯಾಗಿದೆ.

ಬೆಂಗಳೂರು ಹವಾಮಾನ ವರದಿ

ಬೆಂಗಳೂರು ಹವಾಮಾನ ವರದಿ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವದೆ. 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಶಿರಾಲಿಯಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬೀದರ್‌ನಲ್ಲಿ 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+