ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ ಸಾಧ್ಯತೆ

ಬೆಂಗಳೂರು, ಅಕ್ಟೋಬರ್ 13: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 15ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಮುಂದುವರೆಯಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ,ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಮತ್ತೆ ಪ್ರವಾಹದಂತಹ ಪರಿಸ್ಥಿತಿ ತಲೆದೂರಿದೆ. ಡೋಣಿ, ಘಟಪ್ರಭಾ, ಮಲಪ್ರಭಾ, ಕಾಗಿಣಾ ನದಿಗಳು, ಬೆಣ್ಣಿಹಳ್ಳ, ಹಿರೇಹಳ್ಳಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಿಗೆ ನೀಡು ನುಗ್ಗಿದೆ.

ಬೆಳಗಾವಿ, ಕಲಬುರಗಿ, ಕೊಪ್ಪಳದಲ್ಲಿ ಭಾರಿ ಮಳೆ

ಬೆಳಗಾವಿ, ಕಲಬುರಗಿ, ಕೊಪ್ಪಳದಲ್ಲಿ ಭಾರಿ ಮಳೆ

ಕಲಬುರಗಿ ಹಾಗೂ ಕೊಪ್ಪಳದಲ್ಲಿ ಭಾರಿ ಮಳೆಯಾಗಿದೆ. ಆಳಂದ, ಥೊಂಡೆಬಾವಿ, ಶಿರಾಲಿ, ಕಮಲಾಪುರ, ಬರಗೂರು, ಕಂಪ್ಲಿ, ಹೊಸಪೇಟೆ, ಧರ್ಮಸ್ಥಳ, ಮಂಗಳೂರು, ಮಹಾಲಿಂಗಪುರ, ಹೊನ್ನಾವರ, ಬನವಾಸಿ, ಮಸ್ಕಿ, ಗೋಕರ್ಣ, ಗುಡಿಬಂಡೆ, ನರಗುಂದ, ಬಾದಾಮಿ, ಬಸವನ ಬಾಗೇವಾಡಿ, ಮುದ್ದೇಬಿಹಾಳ, ಚನ್ನಗಿರಿ, ವಿಜಯಪುರ, ನಾಪೊಕ್ಲು, ವಿರಾಜಪೇಟೆಯಲ್ಲಿ ಮಳೆಯಾಗಿದೆ.

ಮುಂದಿನ ಮೂರು ದಿನ ಭಾರಿ ಮಳೆ

ಮುಂದಿನ ಮೂರು ದಿನ ಭಾರಿ ಮಳೆ

ರಾಜ್ಯದಲ್ಲಿ ಕಳೆದ ಮೂರು ದಿನದಿಂದ ಸುರಿಯುತ್ತಿರುವ ಅಬ್ಬರದ ಮಳೆ ಇನ್ನೂ ಮೂರು ದಿನ ಮುಂದುವರೆಯಲಿದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಗುಡುಗು ಸಹಿತ ಭಾರಿ ಮಳೆ ನಿರೀಕ್ಷೆ ಇರುವ ಕಾರಣ ಅ.13,14ರಂದು ಕರಾವಳಿ ಜಿಲ್ಲೆಗಳಿಗೆ ಹಾಗೂ ಉತ್ತರ ಒಳನಾಡಿನ ಬೀದರ್, ಧಾರವಾಡ, ಬಾಗಲಕೋಟೆ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರಿನಲ್ಲಿ ಕಳೆದ ಮೂರು ದಿನದಿಂದ ಅಬ್ಬರಿಸಿದ್ದ ವರುಣನ ಆರ್ಭಟ ತುಸು ತಗ್ಗಿದ್ದು, ಸೋಮವಾರ ನಗರದ ಬಹುತೇಕ ಕಡೆ ತುಂತುರು ಮಳೆಯಾಗಿದೆ.
ಬೆಳಗ್ಗೆಯಿಂದಲೂ ಮೋಡಕವಿದ ವಾತಾವರಣ ಕಂಡುಬಂತು, ಹಲವು ಬಡಾವಣೆಗಳಲ್ಲಿ ಆಗಾಗ ತುಂತುರು ಮಳೆ ಸುರಿದಿದ್ದು ಬಿಟ್ಟರೆ ದೊಡ್ಡ ಪ್ರಮಾಣದಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ.

ಹೆಚ್ಚಾದ ಚಳಿ

ಹೆಚ್ಚಾದ ಚಳಿ

ಅ.9ರಿಂದ ಸೋಮವಾರದವರೆಗೆ ಉಷ್ಣಾಂಶ ಹಂತ ಹಂತವಾಗಿ ಕಡಿಮೆಯಾಗಿದ್ದು,ಚಳಿ ವಾತಾವರಣ ಹೆಚ್ಚಾಗಿದೆ. ನಗರದಲ್ಲಿ ಶುಕ್ರವಾರ 32-20.4, ಶನಿವಾರ 31-18, ಭಾನುವಾರ 29.5-19.9, ಸೋಮವಾರ 25.1-19.0 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+