ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 04: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗಲಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Recommended Video

Sanjjanaa Galrani ಮಾಧ್ಯಮದವರ ಮೇಲೆ ಗರಂ ಆಗಿದ್ದೇಕೆ ?| Oneindia Kannada Kannada

ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 5-6 ರಂದು ಮಳೆ ಕೊಂಚ ಬಿಡುವುದು ಪಡೆಯಲಿದೆ. ಆದರೆ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮುಂಗಾರು ಚುರುಕು:4 ದಿನ ಭಾರಿ ಮಳೆ ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮುಂಗಾರು ಚುರುಕು:4 ದಿನ ಭಾರಿ ಮಳೆ

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಬೆಂಗಳೂರಿನ ಉತ್ತರ ಭಾಗದಲ್ಲಿ ಮಳೆ

ಬೆಂಗಳೂರಿನ ಉತ್ತರ ಭಾಗದಲ್ಲಿ ಮಳೆ

ಬೆಂಗಳೂರಿನ ಉತ್ತರ ಭಾಗದಲ್ಲಿ ಬುಧವಾರ ಹೆಚ್ಚು ಮಳೆಯಾಗಿದ್ದು, ಹೊರಮಾವು ಹಾಗೂ ಕಣ್ಣೂರಿನಲ್ಲಿ ತಲಾ 45 ಮಿ.ಮೀನಷ್ಟು ಮಳೆ ದಾಖಲಾಗಿದೆ. ಮಧ್ಯಾಹ್ನ ಹಾಗೂ ಸಂಜೆ ಹಲವು ಭಾಗಗಳಲ್ಲಿ ಮಳೆಯಾಗಿದೆ. ಅದರಲ್ಲೂ ನಗರದ ಉತ್ತರ, ಪೂರ್ವ ಹಾಗೂ ಪಶ್ಚಿಮ ಪ್ರದೇಶಗಳಲ್ಲಿ ಹೆಚ್ಚು ಮಳೆ ಸುರಿದಿದೆ.

ಅತಿ ಹೆಚ್ಚು ಮಳೆಯಾಗಿರುವ ಪ್ರದೇಶಗಳು

ಅತಿ ಹೆಚ್ಚು ಮಳೆಯಾಗಿರುವ ಪ್ರದೇಶಗಳು

ಉತ್ತರ ಕನ್ನಡದ ಜಗಲ್‌ಪೇಟೆಯಲ್ಲಿ ಅತಿ ಹೆಚ್ಚು ಅಂದರೆ 14 ಸೆಂ.ಮೀ ಮಳೆಯಾಗಿದೆ. ಕಡೂರು, ಕೊಲ್ಲೂರು, ಸಿದ್ದಾಪುರ, ಮುಂಡರಗಿ, ಬಾದಾಮಿಯಲ್ಲೂ ಅತಿ ಹೆಚ್ಚು ಮಳೆಯಾಗಿದೆ.

ಈ ಜಿಲ್ಲೆಗಳಲ್ಲೂ ಮಳೆ

ಈ ಜಿಲ್ಲೆಗಳಲ್ಲೂ ಮಳೆ

ಪಣಂಬೂರು, ಧರ್ಮಸ್ಥಳ, ಸರ್ಗೂರು, ಶಿರಾಲಿ, ಗುಬ್ಬಿ, ಶ್ರವಣಬೆಳಗೊಳ, ಮೊಳಕಾಲ್ಮೂರು, ವಿರಾಜಪೇಟೆ, ಪಂಚನಹಳ್ಳಿ, ಪಾವಗಢ, ತೀರ್ಥಹಳ್ಳಿ, ತ್ಯಾಗರ್ತಿ, ಲೋಕಾಪುರ, ತಿಪಟೂರು, ಹೊಸನಗರ, ಮುಂಡಗೋಡು, ತರೀಕೆರೆ, ಮುದ್ದೇಬಿಹಾಳ, ಅಜ್ಜಂಪುರ, ಲೋಂಡಾ, ರಾಮದುರ್ಗಾ, ಲಿಂಗದಹಳ್ಳಿ, ಜಯಪುರ, ಚನ್ನಪಟ್ಟಣ, ಬನವಾಸಿ, ಮದ್ದೂರು, ಶಿರಾ, ಕೊಟ್ಟೂರು, ಬೆಂಗಳೂರು, ಕೋಟಾ, ತಾಳಿಕೋಟೆ, ಬೆಳಗಾವಿ, ಇಳಕಲ್, ಸಂಕೇಶ್ವರ, ಉಚ್ಚಂಗಿದುರ್ಗದಲ್ಲಿ ಮಳೆಯಾಗಿದೆ.

ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಹೆಚ್ಚು ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರಿನಲ್ಲಿ ಮಳೆಯಾಗಲಿದೆ.

English summary
Southwest monsoon was Vigorous over South Interior Karnataka and active over Coastal Karnataka and North Interior Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X