ಅಕ್ಟೋಬರ್ 31ರಿಂದ 3 ದಿನ ಕರ್ನಾಟಕದ ವಿವಿಧೆಡೆ ಭಾರಿ ಮಳೆ

ಬೆಂಗಳೂರು, ಅಕ್ಟೋಬರ್ 28: ಕರ್ನಾಟಕದ ವಿವಿಧೆಡೆ ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಕನ್ನಡ, ಚಿಕ್ಕಮಗಳೂರು,ಕೊಡಗು, ಶಿವಮೊಗ್ಗದಲ್ಲಿ ಅಕ್ಟೋಬರ್ 31ರಂದು ಮಳೆಯಾಗಲಿದೆ.ರಾಜ್ಯದಲ್ಲಿ ತಿಂಗಳಾಂತ್ಯಕ್ಕೆ ಮತ್ತೆ ಮಳೆ ಮರಳಲಿದೆ. ಉತ್ತರ ಕರ್ನಾಟಕದಲ್ಲಿ ಅನಾಹುತ ಉಂಟು ಮಾಡಿದ್ದ ಚಿತ್ತಾ ಮಳೆ ದಕ್ಷಿಣಕ್ಕೆ ಚಿತ್ತೈಸಿಸಿ ಭಾರಿ ವರ್ಷಧಾರೆಗೆ ದಾರಿ ಮಾಡಿಕೊಟ್ಟಿತ್ತು.

ಈ ಬಾರಿ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ತಮಿಳುನಾಡು ಹಾಗೂ ಕೇರಳದತ್ತ ಸಾಗಲಿದೆ. ಇದರಿಂದಾಗಿ ಈ ಎರಡೂ ರಾಜ್ಯಗಳ ಗಡಿಗಳಿಗೆ ಹೊಂದಿಕೊಂಡಿರುವ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Southwest Monsoon Was Weak Over Karnataka

ಮುಂಬರುವ ಶುಕ್ರವಾರ ಹಾಗೂ ಶನಿವಾರ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ,ಗ್ರಾಮಾಂತರ ಜಿಲ್ಲೆಗಳ ಕೆಲವೆಡೆ ಮಳೆಯಾಗಲಿದೆ

ಅ.30ರಿಂದ ನಿರೀಕ್ಷಿಸಲಾಗಿರುವ ಮಳೆಯು ಕರಾವಳಿ ಹಾಗೂ ಮಲೆನಾಡು ಒಳಗೊಂಡಿರುವ ದಕ್ಷಿಣ ಒಳನಾಡಿಗೆ ಸೀಮಿತವಾಗಲಿದೆ. ಆದರೆ, ಹಿಂದಿನಷ್ಟು ಬಿರುಸು ಮಳೆ ಬಾರದಿದ್ದರೂ, ಸಾಧಾರಣ ಪ್ರಮಾಣದ ವರ್ಷಧಾರೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಿಗೆ ಮಳೆ ಕಾಟ ಇರದು. ಆ ಜಿಲ್ಲೆಗಳ ಸೀಮಿತ ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಮಳೆ ಮಾತ್ರ ಆಗಲಿದ್ದು, ಒಣ ಹವೆ ಮುಂದುವರಿಯಲಿದೆ.

ಕಲಬುರಗಿಯಲ್ಲಿ ಅತಿ ಹೆಚ್ಚು ಅಂದರೆ 33.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೀದರ್‌ನಲ್ಲಿ ಕನಿಷ್ಠ 14.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ನವೆಂಬರ್‌ 1 ರಿಂದ 2ರವರೆಗೆ ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ.

Recommended Video

      Munirathna : ನಮ್ ಅಮ್ಮ ಸತ್ತು 25 ವರುಷ ಆಗಿದೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+