ರಾಜ್ಯಾದ್ಯಂತ ನೈಋತ್ಯ ಮುಂಗಾರು ದುರ್ಬಲ, ಕೆಲವೆಡೆ ಸಾಧಾರಣ ಮಳೆ
ಬೆಂಗಳೂರು, ಸೆಪ್ಟೆಂಬರ್ 18: ರಾಜ್ಯಾದ್ಯಂತ ಇಂದಿನಿಂದ ಮುಂಗಾರು ದುರ್ಬಲವಾಗಿದ್ದು, ಕೆಲವೇ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು,ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ.
ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆಯಲ್ಲಿ ಒಣಹವೆ ಇರಲಿದೆ. ಮುಂಗಾರು ಬಿಕಾನೇರ್, ಜೈಪುರ್ ಹಾಗೂ ಕಡಿಮೆ ಒತ್ತಡದ ಪ್ರದೇಶವಾದ ಪೆಂಡ್ರಾ ರಸ್ತೆ, ಭುವನೇಶ್ವರ ಮೂಲಕ ಪೂರ್ವ ಮಧ್ಯ ಬಂಗಾಳ ಕೊಲ್ಲಿಗೆ ಹಾದು ಹೋಗುತ್ತಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಹೆಚ್ಚಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ, ಗುಜರಾತ್ ಮತ್ತು ರಾಜಸ್ಥಾನದಲ್ಲಿ ಮೂರು ದಿನ ಮಳೆಯ ಪ್ರಮಾಣ ಹೆಚ್ಚಿರಲಿದೆ ಎಂದು ಆಭರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ, ಪೂರ್ವ ಉತ್ತರ ಪ್ರದೇಶ, ಅರುಣಾಚಲ ಪ್ರದೇಶ, ಮೇಘಾಲಯ, ನಾಗಾಲ್ಯಾಂಡ್, ಮತ್ತು ಅಸ್ಸಾಮಿನ ಪೂರ್ವ ಭಾಗಗಳು ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿ ಕರ್ನಾಟಕ, ಕೇರಳ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಒಡಿಶಾದ ಕೆಲವು ಭಾಗಗಳು, ಕೊಂಕಣ ಮತ್ತು ಗೋವಾ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನ ವಿವಿಧ ಭಾಗಗಳಲ್ಲಿ ಮೂರು ದಿನಗಳ ಕಾಲ ಬಿರುಸಿನ ಮಳೆಯಾಗಬಹುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ, ಉತ್ತರ ಪ್ರದೇಶ, ಉತ್ತರ ಮತ್ತು ಪಶ್ಚಿಮ ಮಧ್ಯಪ್ರದೇಶದ ಕೆಲವು ಭಾಗಗಳು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಗುಜರಾತ್, ದಕ್ಷಿಣ ಕರಾವಳಿ ಆಂಧ್ರ ಪ್ರದೇಶ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.
ಕರಾವಳಿ ಕರ್ನಾಟಕ, ಈಶಾನ್ಯ ರಾಜಸ್ಥಾನ, ಕೊಂಕಣ ಮತ್ತು ಗೋವಾ, ಲಕ್ಷದ್ವೀಪ, ಕರಾವಳಿ ಆಂಧ್ರಪ್ರದೇಶ, ಮತ್ತು ತೆಲಂಗಾಣದಲ್ಲಿ ಕೂಡ ಸಾಧಾರಣ ಮಳೆಗಿಂತ ಸ್ವಲ್ಪ ಹೆಚ್ಚಿನ ಮಳೆಯಾಗಿದೆ.

ಮಳೆಯಾಗಿರುವ ಪ್ರದೇಶಗಳು
ನೈಋತ್ಯ ಮುಂಗಾರು ರಾಜ್ಯಾದ್ಯಂತ ದುರ್ಬಲವಾಗಿದೆ. ಕರಾವಳಿಯ ಹಲವು ಕಡೆ ಮತ್ತು ಒಳನಾಡಿನ ಒಂದೆರೆಡು ಸ್ಥಳಗಳಲ್ಲಿ ಮಳೆಯಾಗಿದೆ. ಕ್ಯಾಸಲ್ ರಾಕ್, ಮಂಕಿಯಲ್ಲಿ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಹಲವು ಸ್ಥಳಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ವಾತಾವರಣ ಹೇಗಿದೆ?
ಬೆಂಗಳೂರಲ್ಲಿ ಶುಭ್ರ ಆಕಾಶ ಗೋಚರಿಸುತ್ತಿದೆ, ಸೆ.18ರಂದು ಸಂಪೂರ್ಣ ದಿನವೂ ಮಳೆಯ ಬರುವ ಯಾವುದೇ ಸೂಚನೆಗಳು ಗೋಚರಿಸುತ್ತಿಲ್ಲ. 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಲ್ಲಿ ಮಳೆಯಾಗಬಹುದು?
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು,ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ.
ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆಯಲ್ಲಿ ಒಣಹವೆ ಇರಲಿದೆ.Recommended Video

ಇನ್ನೂ ಮೂರು ದಿನ ಮಳೆ
ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ನಿನ್ನೆ ಹೆಚ್ಚಿನ ಮಳೆಯಾಗಿಲ್ಲ. ಆದರೆ ಇಲಾಖೆಯ ವರದಿ ಪ್ರಕಾರ ಇನ್ನೂ ಮೂರು ದಿನ ಬಿರುಸಿನ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, , ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ.












Click it and Unblock the Notifications