ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ದುರ್ಬಲ
ಬೆಂಗಳೂರು, ಜೂನ್ 20: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ದುರ್ಬಲಗೊಂಡಿದೆ.
Recommended Video
ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮುಂಗಾರು ದುರ್ಬಲಗೊಂಡಿದೆ. ಇಲ್ಲಿನ ಕೆಲ ಪ್ರದೇಶಗಳಲ್ಲಿ ಜೂನ್ 22 ರಿಂದ ಜೂನ್ 24ರ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಕರ್ನಾಟಕದ ಕರಾವಳಿ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜೂನ್ 20 ರಿಂದ 24ರವರೆಗೂ ಭಾರಿ ಮಳೆಯಾಗಲಿದೆ.

ಅಂಕೋಲಾ, ಗೋಕರ್ಣ, ಕದ್ರ, ಕಾರವಾರದಲ್ಲಿ ಹೆಚ್ಚು ಮಳೆಯಾಗಿದೆ. ಕೋಟಾ, ಶಿರಾಲಿ, ಮಂಗಳೂರು, ಧರ್ಮಸ್ಥಳ, ಪಣಂಬೂರು, ತೀರ್ಥಹಳ್ಳಿ, ಕುಂದಾಪುರ, ಮಂಚಿಕೆರೆ, ಪುತ್ತೂರು, ಕಿರವತ್ತಿ, ತ್ಯಾಗರ್ತಿ, ಹುಮ್ನಾಬಾದ್, ಹುಂಚದಕಟ್ಟೆ, ಹಾಸನ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಯಲ್ಲಾಪುರ, ಕೊಟ್ಟಿಗೆಹಾರ, ಭಾಗಮಂಡಲ, ಮೂಡಬಿದಿರೆ, ಯಲ್ಲಾಪುರ, ಕುಂದಾಪುರ, ಹಾಸನ, ಹುಂಚದಕಟ್ಟೆಯಲ್ಲಿ ಸಾಧಾರಣ ಮಳೆಯಾಗಿದೆ.
ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇದೆ. ಈ ಬಾರಿ ಬೆಳಗಾವಿಯಲ್ಲಿ ಪ್ರವಾಹದ ಭೀತಿ ಇರುವುದಾಗಿ ಎಚ್ಚರಿಕೆ ನೀಡಲಾಗಿದೆ.
ಬೆಳಗಾವಿ ಜಿಲ್ಲೆಯ ನೆರೆಯ ದಕ್ಷಿಣ ಮಹಾರಾಷ್ಟ್ರದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿರುವುದರಿಂದ ಕೃಷ್ಣಾ ಹಾಗೂ ಉಪನದಿಗಳ ಒಳಹರಿವಿನಲ್ಲಿ ಏರಿಕೆಯಾಗಿದ್ದು, ಪ್ರವಾಹ ಭೀತಿ ಆವರಿಸಿದೆ.












Click it and Unblock the Notifications