ಮುಂಗಾರು ದುರ್ಬಲ, ರಾಜ್ಯಾದ್ಯಂತ ತಗ್ಗಿದ ಮಳೆ
ಬೆಂಗಳೂರು, ಜೂನ್ 23: ರಾಜ್ಯಾದ್ಯಂತ ಮುಂಗಾರು ದುರ್ಬಲಗೊಂಡಿದ್ದು, ಮಳೆ ಕಡಿಮೆಯಾಗಿ ಬಿಸಿಲು ಶುರುವಾಗಿದೆ.
ಜೂನ್ ಮೊದಲ ವಾರದಲ್ಲಿ ಆರಂಭವಾಗಿದ್ದ ಮುಂಗಾರು ಹಲವು ದಿನಗಳ ಕಾಲ ಬಿಡುವು ಕೊಡದೆ ಮಳೆ ಸುರಿದಿತ್ತು. ಈಗ ಕಳೆದ ಎರಡು ದಿನಗಳಿಂದ ದಿನಕ್ಕೆ ಒಂದೆರೆಡು ಬಾರಿ ಸಣ್ಣ ಪ್ರಮಾಣದ ಮಳೆಯಾಗುತ್ತಿದೆ.
ಮುಂದಿನ ಎರಡು ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಎಲ್ಲೆಲ್ಲಿ ಮಳೆಯಾಗಿದೆ
ಬೆಳ್ತಂಗಡಿ, ಪಣಂಬೂರು, ಮಂಗಳೂರು, ಸುಬ್ರಹ್ಮಣ್ಯ, ಧರ್ಮಸ್ಥಳ, ಉಪ್ಪಿನಂಗಡಿ, ಮುಲ್ಕಿ, ಕಾರವಾರ, ಭಟ್ಕಳ, ಕದ್ರ, ಕೆಂಭಾವಿ, ಭಾಗಮಂಡಲ, ರಾಮಗಿರಿ, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ.

ಒಂದೆರೆಡು ದಿನ ಈ ಜಿಲ್ಲೆಗಳಲ್ಲಿ ಮಳೆ
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಬೆಳಗಾವಿ, ಕಲಬುರಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಬೆಂಗಳೂರು ಹವಾಮಾನ ಹೇಗಿದೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆಯ ಸಮಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೆಐಎಎಲ್‌ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲೂ ನಿಂತ ಮಳೆ
ಬೆಳಗಾವಿ ಹಾಗೂ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿಮಳೆ ನಿಂತಿದೆ, ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 85,750 ಕ್ಯೂಸೆಕ್ ಹಾಗೂ ದೂಧ್‌ಗಂಗಾ ನದಿಯಿಂದ 28,828 ಕ್ಯೂಸೆಕ್ ಸೇರಿ ಒಟ್ಟು 1,12,578 ಕ್ಯೂಸೆಕ್ ನೀರು ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸೇರುತ್ತಿದೆ.











Click it and Unblock the Notifications