• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ತಗ್ಗಿದ ಮಳೆ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಕೆ

|
Google Oneindia Kannada News

ಬೆಂಗಳೂರು, ಜೂನ್ 24: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬಿಡುವುಕೊಟ್ಟಿದ್ದು, ಒಣಹವೆ ಮುಂದುವರೆದಿದೆ.

ಮುಂಗಾರು ಆರಂಭವಾಗಿ ಒಂದು ವಾರ ರಾಜ್ಯಾದ್ಯಂತ ಭಾರಿ ಮಳೆಯಾಗಿತ್ತು, ಇದೀಗ ಕಳೆದ ಐದು ದಿನಗಳಿಂದ ಬಿಸಿಲು ಕಂಡುಬರುತ್ತಿದೆ.

ಮುಂಗಾರು ದುರ್ಬಲ, ರಾಜ್ಯಾದ್ಯಂತ ತಗ್ಗಿದ ಮಳೆಮುಂಗಾರು ದುರ್ಬಲ, ರಾಜ್ಯಾದ್ಯಂತ ತಗ್ಗಿದ ಮಳೆ

ಮುಂದಿನ 24 ಗಂಟೆಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡಕವಿದ ವಾತಾರವಣವಿರಲಿದ್ದು, ಅಲ್ಲಲ್ಲಿ ಮಳೆಯಾಗಲಿದೆ, ಸಂಜೆಯವರೆಗೂ ಬಿಸಿಲಿರಲಿದ್ದು, ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ.

ಕೊಳ್ಳೇಗಾಲ, ಭಟ್ಕಳ, ಪುತ್ತೂರು, ಬೆಂಗಳೂರು ನಗರ, ಮಾಣಿ, ಮೂಡುಬಿದಿರೆ, ಸುಬ್ರಹ್ಮಣ್ಯ, ಕಾರ್ಕಳ, ಕೋಟ, ಹೊನ್ನಾವರ, ಆಗುಂಬೆ, ವಿರಾಜಪೇಟೆ, ಚನ್ನಗಿರಿಯಲ್ಲಿಮಳೆಯಾಗಿದೆ.

 ಎಲ್ಲೆಲ್ಲಿ ಮಳೆ

ಎಲ್ಲೆಲ್ಲಿ ಮಳೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಮಾರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

 ಬೆಂಗಳೂರು ಹವಾಮಾನ

ಬೆಂಗಳೂರು ಹವಾಮಾನ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಬಿಸಿಲು ಕೂಡ ಇದೆ, 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಎಲ್ಲೆಲ್ಲಿ ಮಳೆಯಾಗಿದೆ?

ಎಲ್ಲೆಲ್ಲಿ ಮಳೆಯಾಗಿದೆ?

ಕೊಳ್ಳೇಗಾಲ, ಭಟ್ಕಳ, ಪುತ್ತೂರು, ಬೆಂಗಳೂರು ನಗರ, ಮಾಣಿ, ಮೂಡುಬಿದಿರೆ, ಸುಬ್ರಹ್ಮಣ್ಯ, ಕಾರ್ಕಳ, ಕೋಟ, ಹೊನ್ನಾವರ, ಆಗುಂಬೆ, ವಿರಾಜಪೇಟೆ, ಚನ್ನಗಿರಿಯಲ್ಲಿಮಳೆಯಾಗಿದೆ.

 ಜೂನ್ 30ರವರೆಗೂ ಮಳೆ ಕಡಿಮೆ

ಜೂನ್ 30ರವರೆಗೂ ಮಳೆ ಕಡಿಮೆ

ಜೂನ್ 30ರವರೆಗೂ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದ್ದು ಮಳೆ ಕಡಿಮೆ ಇರಲಿದೆ, ಕರಾವಳಿ ಜಿಲ್ಲೆಗಳಲ್ಲಿ ಸ್ವಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

   ಜಮೀರ್ ಅಹಮದ್ ಗೆ ಎಚ್ಚರಿಕೆ ಕೊಟ್ಟ ಡಿಕೆ ಸುರೇಶ್ | Oneindia Kannada
   English summary
   Meteorological department said that Southwest Monsoon Weak Over Karnataka, Dry Weather Prevailed.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X