ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೌಜನ್ಯ ಕೊಲೆ ಪ್ರಕರಣ ಸಿಬಿಐ ತನಿಖೆಗೆ : ಜಾರ್ಜ್

|
Google Oneindia Kannada News

ದಾವಣಗೆರೆ, ನ.6 : ಸಾರ್ವಜನಿಕರ ಒತ್ತಡಕ್ಕೆ ಮಣಿದಿರುವ ಕರ್ನಾಟಕ ಸರ್ಕಾರ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರ್ಧರಿಸಿದೆ. ಗೃಹ ಸಚಿವ ಕೆ.ಜೆ.ಜಾರ್ಜ್ ಈ ಕುರಿತು ಮಾಹಿತಿ ನೀಡಿದ್ದು, ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗುವುದು ಎಂದು ಹೇಳಿದ್ದಾರೆ.

ದಾವಣಗೆರೆಯಲ್ಲಿ ಬುಧವಾರ ಮಾತನಾಡಿದ ಗೃಹ ಸಚಿವ ಕೆ.ಜೆ.ಜಾರ್ಜ್ ಸರ್ಕಾರ ಸೌಜನ್ಯ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರ್ಧರಿಸಿದೆ. ಎರಡು ದಿನದಲ್ಲಿ ಈ ಕುರಿತು ಅಧಿಕೃತ ಆದೇಶ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.

Sowjanya

ಅ.31ರಂದು ಉಜಿರೆಯ ಎಸ್ ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ತನಿಖಾ ವರದಿಯನ್ನು ಸಲ್ಲಿಸಿದ್ದರು.

12 ಪುಟಗಳ ತನಿಖಾ ವರದಿಯಲ್ಲಿ ಸೌಜನ್ಯ ಮೇಲೆ ಅತ್ಯಾಚಾರ ಯತ್ನ ಹಾಗೂ ಹತ್ಯೆ ಮಾಡಿರೋದು ಆರೋಪಿ ಸಂತೋಷ್ ರಾವ್ ಎಂದು ನಮೂದಿಸಿದ್ದ ಸಿಐಡಿ ಅಧಿಕಾರಿಗಳು ವರದಿಯನ್ನು ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರಿಗೆ ನೀಡಿ, ಪ್ರಕರಣದ ಬಗ್ಗೆ ಅಗತ್ಯವಿದ್ದರೆ ಸಿಬಿಐ ತನಿಖೆ ನಡೆಸಬಹುದು ಎಂದು ಶಿಫಾರಸು ಮಾಡಿದ್ದರು.

ಸಿಐಡಿ ಅಧಿಕಾರಿಗಳು ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿನ 12 ಸಾಕ್ಷ್ಯಗಳ ವಿಚಾರಣೆ ಬಳಿಕ ಆರೋಪಿಗಳಾಗಿದ್ದ ನಿಶ್ಚಲ್ ಜೈನ್, ಧೀರಜ್ ಜೈನ್, ಉದಯ್ ಜೈನ್, ಮಲ್ಲಿಕ್ ಅವರಿಗೆ ಕ್ಲೀನ್ ಚಿಟ್ ನೀಡಿದ್ದರು ಮತ್ತು ಪೊಲೀಸರು ಬಂಧಿಸಿರುವ ಆರೋಪಿ ಸಂತೋಷ್ ರಾವ್ ಕೊಲೆ ಮಾಡಿರುವುದು ಎಂದು ವರದಿಯಲ್ಲಿ ಉಲ್ಲೇಖಿಸಿದ್ದರು.

ಸಿಐಡಿ ವರದಿಗೆ ಅಸಮಾಧಾನ : ಸಿಐಡಿ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದ್ದಂತೆ ವಿವಿಧ ಸಂಘಟನೆಗಳು ಮತ್ತು ಸೌಜನ್ಯ ಪೋಷಕರು ವರದಿಗೆ ವಿರೋಧ ವ್ಯಕ್ತಪಡಿಸಿದ್ದರು. ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸದೆ ಮುಚ್ಚಿ ಹಾಕುವ ಹುನ್ನಾರ ನಡೆದಿದೆ ಎಂದು ಆರೋಪಿಸಿದ್ದರು. (ಸಿಐಡಿ ವರದಿಯಲ್ಲೇನಿದೆ)

ನ.3ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ, ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಸಿಐಡಿ ತನಿಖೆ ಮತ್ತು ತನಿಖಾ ವರದಿ ಕುರಿತು ಸ್ಥಳೀಯರ ಮನಸ್ಸಿನಲ್ಲಿ ಇನ್ನೂ ಗೊಂದಲವಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ತನಿಖೆ ಆಗಬೇಕೆಂದು ಅಪೇಕ್ಷಿಸುತ್ತಿದ್ದಾರೆ.

ಆದ್ದರಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕೆಂದು ಪತ್ರ ಬರೆದಿದ್ದರು. ವಿವಿಧ ಸಂಘಟನೆ, ಸೌಜನ್ಯ ಪೋಷಕರ ಒತ್ತಾಯಕ್ಕೆ ಮಣಿದಿರುವ ಸರ್ಕಾರ ಅಂತಿಮವಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ತೀರ್ಮಾನಿಸಿದೆ. (ಸೌಜನ್ಯ ಕೊಲೆ : ಕೇಮಾರು ಶ್ರೀಗಳ ವಿಶೇಷ ಸಂದರ್ಶನ)

English summary
Home minister K.J.George said, governament decided to handover Sowjanya Murder Case for CBI investigation. On Wednesday, November 6 he addressed media at Davanagere and said, we have decided to handover case for CBI. in two days will announced it officially. few days back Dharmadhikari Veerendra Heggade writes letter to CM Siddaramaih and urges CBI probe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X