ವಿವಾಹ ವಾರ್ಷಿಕೋತ್ಸವದ ಹೊಸ್ತಿಲಲ್ಲೇ ಅಗಲಿದ ಸ್ಪಂದನಾ : ನಾಳೆ ಬೆಂಗಳೂರಿಗೆ ಮೃತದೇಹ
ಬೆಂಗಳೂರು, ಆಗಸ್ಟ್ 07: ಕನ್ನಡ ಚಿತ್ರರಂಗದ ಖ್ಯಾತ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ರಾಘವೇಂದ್ರ ನಿನ್ನೆ( ಆಗಸ್ಟ್ 06) ರಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಕನ್ನಡದ ಖ್ಯಾತ ನಟ ಶ್ರೀ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಶ್ರೀಮತಿ ಸ್ಪಂದನಾ ರಾಘವೇಂದ್ರ ಅವರು ಬ್ಯಾಂಕಾಕ್ ನಲ್ಲಿ ದಿಢೀರ್ ಸಾವಿಗೀಡಾಗಿರುವ ಸಂಗತಿ ತಿಳಿದು ಅಪಾರ ನೋವುಂಟಾಯಿತು. ಇತ್ತೀಚೆಗಷ್ಟೇ ಅವರು ನನ್ನನ್ನು ಭೇಟಿಯಾಗಿ ಶುಭ ಹಾರೈಸಿದ್ದರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ವರ್ಗದವರು… pic.twitter.com/V75n6YPcGK
— DK Shivakumar (@DKShivakumar) August 7, 2023
ನಟ ವಿಜಯ ರಾಘವೇಂದ್ರ ಹಾಗೂ ಸ್ಪಂದನಾ 2007ರ ಆಗಸ್ಟ್ 26ರಂದು ಗುರು ಹಿರಿಯರ ಸಮ್ಮುಖದಲ್ಲಿ ಹಸಮಣೆ ಏರಿದ್ದರು. ಇನ್ನೇನು 19 ದಿನ ಕಳೆದಿದ್ದರೆ ಈ ದಂಪತಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವುದರಲ್ಲಿದ್ದರು. ಆದರೆ ಇದೀಗ ಸ್ಪಂದನಾ ಅವರ ಅಗಲಿಕೆ ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ.

ಸ್ಪಂದನಾ ತಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರ ಜೊತೆ ಬ್ಯಾಂಕಾಕ್ಗೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಸ್ಪಂದನಾ ಅವರಿಗೆ ಏಕಾಏಕಿ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಬ್ಯಾಂಕಾಕ್ನಲ್ಲೇ ನಡೆಯಲಿದ್ದು, ನಾಳೆ (ಆಗಸ್ಟ್ 8)ಕ್ಕೆ ಮೃತದೇಹ ಬೆಂಗಳೂರಿಗೆ ಬರಲಿದೆ.
ವಿಜಯ ರಾಘವೇಂದ್ರ ಪತ್ನಿ ನಿಧನ: ಡಿ.ಕೆ ಶಿವಕುಮಾರ್ ಸಂತಾಪ
ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನಾ ರಾಘವೇಂದ್ರ ಅವರು ಬ್ಯಾಂಕಾಕ್‌ನಲ್ಲಿ ದಿಢೀರ್ ಸಾವಿಗೀಡಾಗಿರುವ ಸಂಗತಿ ತಿಳಿದು ಅಪಾರ ನೋವುಂಟಾಯಿತು. ಇತ್ತೀಚೆಗಷ್ಟೇ ಅವರು ನನ್ನನ್ನು ಭೇಟಿಯಾಗಿ ಶುಭ ಹಾರೈಸಿದ್ದರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ವರ್ಗದವರು ಹಾಗೂ ಸ್ನೇಹಿತ ವರ್ಗಕ್ಕೆ ನನ್ನ ಸಾಂತ್ವನಗಳು ಎಂದು ಡಿ.ಕೆ ಶಿವಕುಮಾರ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.












Click it and Unblock the Notifications