ಕರ್ನಾಟಕದ ಮೂವರು ಸಂಸದರ ರಾಜೀನಾಮೆ ಅಂಗೀಕಾರ
ಬೆಂಗಳೂರು, ಮೇ 29 : ಕರ್ನಾಟಕದ ಮೂವರು ಸಂಸದರು ವಿಧಾನಸಭೆ ಆಯ್ಕೆಯಾಗಿದ್ದು, ಮೂವರು ಸಲ್ಲಿಸಿದ್ದ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಹೀಗಾಗಿ, ಈ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ.
ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸಂಸದರ ಪೈಕಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಸಚಿವ ಬಿ ಶ್ರೀರಾಮುಲು ಹಾಗೂ ಸಿಎಸ್ ಪುಟ್ಟರಾಜು ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಶಾಸಕರಾಗಿ ಆಯ್ಕೆಯಾದ ಬಳಿಕ ಈ ಮೂವರು ತಮ್ಮ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದು, ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.
ಶಿವಮೊಗ್ಗದಿಂದ ಬಿಜೆಪಿ ಸಂಸದರಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಶಿಕಾರಿಪುರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. ಬಳ್ಳಾರಿಯಿಂದ ಬಿಜೆಪಿ ಸಂಸದ ಶ್ರೀರಾಮುಲು ಅವರು ಮೊಳಕಾಲ್ಮು ಕ್ಷೇತ್ರದಿಂದ ಆಯ್ಕೆಯಾದರು ಹಾಗೂ ಮಂಡ್ಯ ಸಂಸದ ಪುಟ್ಟರಾಜು ಅವರು ಮೇಲುಕೋಟೆ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.












Click it and Unblock the Notifications