ಸ್ಪೀಕರ್ ಖಾದರ್ ಗೆ ಬಂತು ಐಶಾರಾಮಿ ಕಾರು! ಬೆಲೆ ಎಷ್ಟು ಗೊತ್ತಾ?
ಬೆಂಗಳೂರು, ಫೆಬ್ರವರಿ 12: ಬರಗಾಲದಲ್ಲೂ ರಾಜ್ಯ ಸರ್ಕಾರ ಸಂಪುಟದ 33 ಸಚಿವರಿಗಾಗಿ ಬರೋಬ್ಬರಿ 9 ಕೋಟಿ 90 ಲಕ್ಷ ರೂ ವೆಚ್ಚದಲ್ಲಿ ಇನೋವಾ ಹೈಬ್ರೀಡ್ ಕಾರುಗಳನ್ನು ರಾಜ್ಯ ಸರ್ಕಾರ ಖರೀದಿಸಿದ್ದ ಕುರಿತು ರಾಜ್ಯ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಆದರೆ, ಇದೀಗ ಸ್ಪೀಕರ್ ಯು.ಟಿ ಖಾದರ್ ಅವರ ಪ್ರಯಾಣಕ್ಕೆ ಇದೀಗ ಐಶಾರಾಮಿ ಕಾರು ಬಂದಿದೆ.
ಹೌದು, ಸ್ಪೀಕರ್ ಯು.ಟಿ ಖಾದರ್ ಅವರ ಪ್ರಯಾಣಕ್ಕೆ ಸಚಿವಾಲಯದಿಂದ ವಿಶೇಷ ಕಾರಿನ ಸೌಲಭ್ಯವನ್ನು ಕಲ್ಪಿಸಲಾಗಿದೆ. ಈ ಐಶಾರಾಮಿ ಫಾರ್ಚೂನರ್ ಕಾರು ಹಲವು ವಿಶೇಷತೆಗಳನ್ನು ಕೂಡಾ ಹೊಂದಿದೆ. ಕಪ್ಪು ಬಣ್ಣದ ಫಾರ್ಚೂನರ್( ಇ ) ಕಾರಿನ ದರ 33.43 ಲಕ್ಷ ( ಪೆಟ್ರೋಲ್) ಹಾಗೂ ಡೀಸಿಲ್ ಕಾರಿನ ದರ 35.93 ರಿಂದ 51.44 ಲಕ್ಷ ಆಗುತ್ತದೆ. ಆದರೆ ಈ ಫಾರ್ಚೂನರ್ ಗೆ ವಿಶೇಷ ವಿನ್ಯಾಸ ಮಾಡಿರುವುದರಿಂದ ಒಟ್ಟು 41 ಲಕ್ಷ ವೆಚ್ಚದ್ದು ಎನ್ನಲಾಗಿದೆ.

ಸಚಿವಾಲಯದಿಂದ ನೀಡಲಾದ ವಿಶೇಷ ಐಶಾರಾಮಿ ಕಾರು, 360 ಡಿಗ್ರಿ ಕ್ಯಾಮೆರಾ ಹಾಗೂ ಪ್ರಯಾಣದ ಸಂದರ್ಭದಲ್ಲಿ ಸ್ಪೀಕರ್ ಖಾದರ್ ಮುಖಕ್ಕೆ ಬೆಳಕು ನೀಡುವ ವಿಶೇಷ ಎಲ್ ಇ ಡಿ ಲೈಟ್ ಸೌಲಭ್ಯ ಹೊಂದಿದೆ. ಕಾರಿನ ಮುಂಭಾಗ ಹಾಗೂ ಹಿಂಭಾಗದಲ್ಲಿ ಗಂಡಭೇರುಂಡ ಲಾಂಛನ ಹೊಂದಿದೆ. ರಾಜ್ಯಪಾಲರಿಗೆ ಹೊರತಾಗಿ ಸ್ಪೀಕರ್ ಗೆ ಮಾತ್ರ ಇದನ್ನು ಹಾಕಲು ಅವಕಾಶ ಇದೆ.












Click it and Unblock the Notifications