ಮಂತ್ರಿಗಳೇ ಸರ್ಕಾರದ ಮರ್ಯಾದೆ ತೆಗಿತಿದ್ದಾರೆ: ಯು ಟಿ ಖಾದರ್ ಹೀಗೆ ಹೇಳಿದ್ಯಾಕೆ?
ಬೆಂಗಳೂರು, ಫೆಬ್ರವರಿ 20: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರೇ ನಿಮ್ಮ ಆಡಳಿತದಲ್ಲಿ ಉತ್ತಮ ಆಡಳಿತ ನಡೆಯುತ್ತಿದೆ. ಕೆಲ ಮಂತ್ರಿಗಳಿಂದ ಸರ್ಕಾರದ ಮರ್ಯಾದೆ ತೆಗೆಯುತ್ತಿದ್ದಾರೆ ಎಂದು ಸದನದಲ್ಲಿ ಸಭಾಧ್ಯಕ್ಷರಾದ ಯು ಟಿ ಖಾದರ್ ಅಸಮಾಧಾನ ವ್ಯಕ್ತಪಡಿಸಿದರು.
ಸೋಮವಾರ ವಿಧಾನಸಭೆಯಲ್ಲಿ ಗಮನಸೆಳೆಯುವ ಸೂಚನೆ ವೇಳೆ ಸಚಿವರ ಗೈರು ಹಾಜರಿ ಕುರಿತು ಸ್ಪೀಕರ್ ಯು ಟಿ ಖಾದರ್ ಮಾತನಾಡಿ, ಗಮನ ಸೆಳೆಯುವ ಸೂಚನೆ ವೇಳೆ ಸಚಿವರು ಇಲ್ಲವೆಂದರೆ ಹೇಗೆ ? ಉತ್ತರ ನೀಡಲು ಸಚಿವರು ಇರಬೇಕಲ್ಲವಾ ?ಈ ವೇಳೆ ಸಾರಿಗೆ, ತೋಟಗಾರಿಕೆ, ಕಂದಾಯ, ಲೋಕೋಪಯೋಗಿ ಸಚಿವರ್ಯಾರೂ ಇಲ್ಲ. ಆಗ ಮಂತ್ರಿಗಳನ್ನ ಕರೆಸಿ, ಇಲ್ಲವೆಂದರೆ ಗಮನ ಸೆಳೆಯುವ ಸೂಚನೆ ಬೇಡ. ಶಾಸಕರ ಪ್ರಶ್ನೆಗೆ ಮಂತ್ರಿಗಳು ಉತ್ತರಿಸಬೇಕು. ಮಂತ್ರಿಗಳು ಉತ್ತರಿಸಿದಾಗ ಮಾತ್ರ ಸದನದಲ್ಲಿ ಶಾಸಕರು ಕೂರುತ್ತಾರೆ ಎಂದು ಅಸಮಾಧಾನವನ್ನ ವ್ಯಕ್ತಪಡಿಸಿದರು.

ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ರಾಜ್ಯ ಪೊಲೀಸ್ ವ್ಯವಸ್ಥೆ ಸಮರ್ಥ: ಜಿ.ಪರಮೇಶ್ವರ್
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯ ಸಚೇತಕರಾದ ಎನ್. ರವಿಕುಮಾರ್ ಹಾಗೂ ಇತರ ಸದಸ್ಯರು ನಿಯಮ 72 ರಡಿ ನೀಡಿದ್ದ ಸೂಚನೆಗೆ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ , ರಾಜ್ಯದಲ್ಲಿ ಅಪರಾಧಗಳನ್ನು ತಡೆಗಟ್ಟಲು ಹಲವಾರು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ರಾತ್ರಿ ಗಸ್ತಿಗಾಗಿ ಇ- ಬೀಟ್, ಜೈಲಿನಿಂದ ಹೊರ ಬರುತ್ತಿರುವ ಆರೋಪಿಗಳ ಮೇಲೆ ನಿಗಾ, ನಿಯಮಿತವಾಗಿ ರೌಡಿ ಪೆರೇಡ್, ಮಟ್ಕಾ, ಜೂಜಾಟ, ಅಕ್ರಮ ಮದ್ಯ ಮಾರಾಟ ವಿರುದ್ಧ ನಿರಂತರ ದಾಳಿ ನಡೆಸುವಿಕೆ, ಘೋರ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ಸಿಗದಂತೆ ಮಾಡುವ ನಿಟ್ಟಿನಲ್ಲಿ ನ್ಯಾಯಾಲಯಕ್ಕೆ ಶೀಘ್ರವಾಗಿ ಅಂತಿಮ ವರದಿ ಸಲ್ಲಿಸುವುದು, ಸಿಸಿ ಟಿವಿ ಕ್ಯಾಮೆರಾಗಳ ಅಳವಡಿಕೆ, ಮಹಿಳಾ ಸುರಕ್ಷತೆಗೆ ರಾಣಿ ಚೆನ್ನಮ್ಮ ಪಡೆ ಸ್ಥಾಪನೆ, ಸುಳ್ಳು ಸುದ್ದಿ ದ್ವೇಷದ ಪೋಸ್ಟ್‌ಗಳನ್ನು ಹಾಕುವವರ ವಿರುದ್ಧ ಪ್ರಕರಣ ದಾಖಲು ಸೇರಿದಂತೆ ರಾಜ್ಯದಲ್ಲಿ ಸೈಬರ್, ಆರ್ಥಿಕ, ಮಾದಕ ದ್ರವ್ಯಗಳ ಅಪರಾಧವನ್ನು ತಡೆಗಟ್ಟಲು ರಾಜ್ಯಾದ್ಯಂತ 45 CEN ಪೊಲೀಸ್ ಠಾಣೆಗಳನ್ನು ಪ್ರಾರಂಭಿಸಲಾಗಿದೆ ಎಂದರು.
ಬೆಂಗಳೂರು ನಗರದಲ್ಲಿ ಸೇಫ್ ಸಿಟಿ ಘಾರ್ ಸೇಫ್ಟಿ ಆಫ್ ವುಮೆನ್ ಯೋಜನೆಯಡಿ ಮಹಿಳೆಯರ ಸುರಕ್ಷತೆಗಾಗಿ ನಗರದ 1640 ಸ್ಥಳಗಳಲ್ಲಿ 4100 ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಹಾಗೂ 96 ವೀಕ್ಷಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸ್ಪಂದನ ಸಹಾವಾಣಿ ಜೊತೆಗೆ ಮಹಿಳಾ ಸಹಾಯವಾಣಿ- 1091 ಸಹ ಕಾರ್ಯನಿರ್ವಹಿಸುತ್ತಿದೆ. ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗಾಗಿ ಪಿಂಕ್ ಹೊಯ್ಸಳ ಮತ್ತು 112 ಗಸ್ತು ವಾಹನಗಳು ದಿನದ 24 ಗಂಟೆಗಳೂ ಕೆಲಸ ನಿರ್ವಹಿಸುತ್ತವೆ ಎಂದರು.
ಸರ್ಕಾರದ ಗ್ಯಾರೆಂಟಿ ಯೋಜನೆಗಳು ರಾಜ್ಯದ ಪ್ರಗತಿಗೆ ಪೂರಕ : ಉಮಾಶ್ರೀ
ಸರ್ಕಾರದ ಪಂಚ ಗ್ಯಾರೆಂಟಿಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಯುವನಿಧಿ ಯೋಜನೆಗಳಿಂದ ರಾಜ್ಯದ ಸುಮಾರು ನಾಲ್ಕೂವರೆ ಕೋಟಿ ಜನ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ತಿಳಿಸಿದರು.
ದಿನಬಳಕೆ ವಸ್ತು , ವಿದ್ಯುತ್ ದರ ಬೆಲೆ ಏರಿಕೆ, ನಿರುದ್ಯೋಗ, ಬಡತನ ನಿವಾರಣೆ, ಮಹಿಳಾ ಸಬಲೀಕರಣ ಮುಂತಾದವುಗಳನ್ನು ಗಮನದಲ್ಲಿಟ್ಟುಕೊಂಡು ಈ 5 ಗ್ಯಾರೆಂಟಿಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಯಾವುದೇ ಕಾರಣಕ್ಕೂ ನೀಡಿರುವ ಗ್ಯಾರೆಂಟಿಗಳನ್ನು ಹಿಂಪಡೆಯುವ ಪ್ರಶ್ನೆಯೇ ಸರ್ಕಾರಕ್ಕಿಲ್ಲ ಎಂದರು.
ಅನ್ನಭಾಗ್ಯ ಯೋಜನೆಯಡಿ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯನ್ವಯ ಪ್ರತಿ ಫಲಾನುಭವಿಗೆ 10 ಕೆಜಿ ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಆಹಾರ ಧಾನ್ಯ ಲಭ್ಯವಾಗುವವ ರೆಗೆ 5 ಕೆಜಿ ಆಹಾರ ಧಾನ್ಯದ ಬದಲಿಗೆ ಪ್ರತಿ ಕೆಜಿಗೆ ರೂ 34 ಅನ್ನು ಕುಟುಂಬದ ಸದಸ್ಯರ ಖಾತೆಗೆ ನೇರ ನಗದು ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಜುಲೈ 2024ರ ಅಂತ್ಯಕ್ಕೆ 4595 ಕೋಟಿ ರೂಗಳನ್ನು ಅರ್ಹ ಫಲಾನುಭವಿಗಳಿಗೆ ವರ್ಗಾಯಿಸಲಾಗಿದೆ.
ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ವರೆಗೆ ಗರಿಷ್ಠ ಬಳಕೆ ಮಿತಿಗೆ ಒಳಪಟ್ಟು ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದರಿಂದ ರಾಜ್ಯದ 1.60 ಕೋಟಿ ಗ್ರಾಹಕರು ಪ್ರಯೋಜನ ಪಡೆದಿದ್ದಾರೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಅರ್ಹ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂ ಗಳನ್ನು ನೀಡಲಾಗುತ್ತಿದೆ. ಈ ಯೋಜನೆಗೆ 17500 ಕೋಟಿ ರೂ ನಿಗದಿಪಡಿಸಲಾಗಿದ್ದು, ನೋಂದಾಯಿತ 1.17 ಕೋಟಿ ಮಹಿಳಾ ಫಲಾನುಭವಿಗಳಿಗೆ ಇದೇ ಜನವರಿ ವರೆಗೆ ಒಟ್ಟು 11037 ಕೋಟಿ ರೂಗಳನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ.
ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಗೊಳಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ರಾಜ್ಯದ 3.5 ಕೋಟಿ ಮಹಿಳೆಯರು ಇದರ ಲಾಭ ಪಡೆದುಕೊಂಡಿದ್ದಾರೆ. ಧಾರ್ಮಿಕ ಕೇಂದ್ರಗಳಿಗೂ ಈ ಯೋಜನೆಗೆ ಯಿಂದ ಪುಷ್ಠಿ ದೊರೆತಂತಾಗಿದೆ. ಅಲ್ಲದೆ ಇದರಿಂದ ಉದ್ಯೋಗ ಸೃಷ್ಠಿಯಾಗಿದೆ ಎಂದರು. ಯುವನಿಧಿ ಯೋಜನೆಯಡಿ 2022-23 ನೇ ಸಾಲಿನಲ್ಲಿ ಉತ್ತೀರ್ಣರಾದ ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ಕ್ರಮವಾಗಿ ಮಾಸಿಕ 3000ರೂ ಮತ್ತು 1,500 ರೂ ಗಳ ನಿರುದ್ಯೋಗ ಭತ್ಯೆಯನ್ನು ಎರಡು ವರ್ಷಗಳವರೆಗೆ ಅಥವಾ ಎರಡು ವರ್ಷದೊಳಗೆ ಉದ್ಯೋಗ ಪಡೆಯುವರೆಗೆ ಸರ್ಕಾರ ಪಾವತಿಸುತ್ತಿದೆ. ಒಟ್ಟಾರೆಯಾಗಿ ಈ ಯೋಜನೆಗಳು ರಾಜ್ಯದ 7 ಕೋಟಿ ಜನರ ಬದುಕಿನಲ್ಲಿ ಬದಲಾವಣೆ ತಂದಿದೆ ಎಂದು ಹೇಳಿದರು.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications