ದೀಪಾವಳಿ ಹಬ್ಬದ ಸಮಯದಲ್ಲಿ ಕಾಲೇಜು ಉಪನ್ಯಾಸಕರಿಗೆ ಬಂಪರ್ ಕೊಡುಗೆ
ಬೆಂಗಳೂರು, ಅಕ್ಟೋಬರ್ 29: ದೀಪಾವಳಿ ಹಬ್ಬದ ಸಂದರ್ಭದಲ್ಲಿಯೇ ಕರ್ನಾಟಕ ಸರ್ಕಾರ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಬಂಪರ್ ಕೊಡುಗೆಯನ್ನು ನೀಡಿದೆ. ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ಕುರಿತು ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರಿಗೆ ಪತ್ರದ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಅಧ್ಯಕ್ಷರು, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ(ರಿ) ಬೆಂಗಳೂರು ಇವರ ಪತ್ರವನ್ನು ಉಲ್ಲೇಖಿಸಿದ್ದಾರೆ.
ಈ ಪತ್ರವು 2007-08 ಸಾಲಿನ ಅಧಿಸೂಚನೆ ಅನ್ವಯ ದಿನಾಂಕ 01-08- 2008ರ ನಂತರ ಕಾರ್ಯವರದಿ ಮಾಡಿಕೊಂಡಿರುವ ಉಪನ್ಯಾಸಕರುಗಳಿಗೆ ವಿಶೇಷ ಭತ್ಯೆಯನ್ನು ನೀಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ. ಸರ್ಕಾರದ ಆದೇಶ ಸಂಖ್ಯೆ ಆಇ 18 ಎಸ್‌ಆರ್‌ಪಿ 2023 5/8/2023 ಉಲ್ಲೇಖ ಮಾಡಲಾಗಿದೆ. ಅಧ್ಯಕ್ಷರು, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ(ರಿ), ಬೆಂಗಳೂರು ಇವರ ಮನವಿ ದಿನಾಂಕ 10.06.2024 ಸಹ ಉಲ್ಲೇಖಿಸಲಾಗಿದೆ.

ವಿವರಗಳು: ಪದ್ಮನಿ ಎಸ್. ಎನ್. ಸರ್ಕಾರದ ಅಧೀನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ) ಇವರ ಹೆಸರಿನಲ್ಲಿ ಹೊರಡಿಸಿರುವ ಆದೇಶದಲ್ಲಿ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಅಧ್ಯಕ್ಷರು, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ(ರಿ) ಬೆಂಗಳೂರು ಇವರ ದಿನಾಂಕ 10.06.2024ರ ಪತ್ರವನ್ನು ಪರಿಶೀಲಿಸಲಾಯಿತು.
ಮಾನ್ಯ ಕರ್ನಾಟಕ ಆಡಳಿತ ನ್ಯಾಯಮಂಡಳಿಯು ಅರ್ಜಿ ಸಂಖ್ಯೆ:4412-4428 ರಲ್ಲಿ ದಿನಾಂಕ 05.05.2021ರ ತೀರ್ಪಿನಲ್ಲಿ ನೀಡಿದ ನಿರ್ದೇಶನ ಮತ್ತು ಮಾನ್ಯ ಕರ್ನಾಟಕ ಹೈಕೋರ್ಟ್ W. P. No:6902/2022 ರಲ್ಲಿ ದಿನಾಂಕ 20.06.2023ರಂದು ನೀಡಿದ ತೀರ್ಪಿನಲ್ಲಿನ ಅಭಿಪ್ರಾಯದ ಬೆಳಕಿನಲ್ಲಿ, 2007-08ರ ಶಿಕ್ಷಕರುಗಳ ನೇರ ನೇಮಕಾತಿ ಅಧಿಸೂಚನೆಯನ್ವಯ ನೇಮಕಾತಿ ಪ್ರಕ್ರಿಯೆ ಕೈಗೊಂಡು ಪ್ರಕಟಿಸಲಾದ ಅಂತಿಮ ಆಯ್ಕೆ ಪಟ್ಟಿಯಲ್ಲಿನ ಶಿಕ್ಷಕರುಗಳಿಗೆ ಸೀಮಿತಗೊಂಡಂತೆ ವಿಶೇಷ ಭತ್ಯೆಯನ್ನು ಮಂಜೂರು ಮಾಡಿ, ವಿಸ್ತತವಾದ ಅದೇಶಗಳನ್ನು ಹೊರಡಿಸಲಾಗಿರುತ್ತದೆ. ಸದರಿ ಆದೇಶವು ಸ್ವಯಂ ವೇದ್ಯವಾಗಿದ್ದು ಸ್ಪಷ್ಟವಾಗಿರುತ್ತದೆ.
ಮಾನ್ಯ ಕರ್ನಾಟಕ ಆಡಳಿತ ನ್ಯಾಯಮಂಡಳಿಯ ನಿರ್ದೇಶನದಂತೆ ರಾಜ್ಯ ಸರ್ಕಾರವು ಹೊರಡಿಸಿದ ಈ ಮೇಲೆ ತಿಳಿಸಿರುವ ದಿನಾಂಕ 05.12.2023ರ ಆದೇಶವನ್ನು ಪರಿಗಣಿಸಿದ ಮಾನ್ಯ ಆಡಳಿತ ನ್ಯಾಯಮಂಡಳಿಯು CTA 533-134/2021 ಪ್ರಕರಣದಲ್ಲಿ ದಿನಾಂಕ 08.12.2023ರಂದು ನೀಡಿದ ತೀರ್ಪಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನಾ ಪ್ರಕರಣವನ್ನು ಕೈಬಿಟ್ಟಿರುತ್ತದೆ.
ಆದುದರಿಂದ, ಈ ಮೇಲೆ ತಿಳಿಸಿದ ದಿನಾಂಕ 05.12.2023ರ ಆದೇಶದ ಕಂಡಿಕೆ 1(i) ಮತ್ತು (ii) ರ ಅವಕಾಶಗಳ ಕಡೆಗೆ ಗಮನ ಸೆಳೆಯುತ್ತಾ ಅದರನ್ವಯ ಅರ್ಹ ಉಪನ್ಯಾಸಕರಿಗೆ ವಿಶೇಷ ಭತ್ಯೆಗಳನ್ನು ಮಂಜೂರು ಮಾಡಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ತಿಳಿಸಲು ಈ ಮೂಲಕ ನಿರ್ದೇಶಿತಳಾಗಿದ್ದೇನೆ ಎಂದು ಹೇಳಿದ್ದಾರೆ.
ಸರ್ಕಾರ ದಿನಾಂಕ 01-08- 2008ರ ನಂತರ ಕಾರ್ಯವರದಿ ಮಾಡಿಕೊಂಡಿರುವ ಉಪನ್ಯಾಸಕರುಗಳಿಗೆ ವಿಶೇಷ ಭತ್ಯೆಯನ್ನು ನೀಡಲು ಒಪ್ಪಿಗೆ ನೀಡಿದೆ. ಈ ವಿಶೇಷ ಭತ್ಯೆ ಅಕ್ಟೋಬರ್ ಸಂಬಳದೊಂದಿಗೆ ಸೇರಿಕೊಂಡು ಬಂದರೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಉಪನ್ಯಾಸಕರಿಗೆ ಸಿಹಿಸುದ್ದಿ ಸಿಗಲಿದೆ. ಆದರೆ ಯಾವಾಗ ಭತ್ಯೆ ಮಂಜೂರು ಆಗುತ್ತದೆ? ಎಂದು ಆದೇಶದಲ್ಲಿ ತಿಳಿಸಿಲ್ಲ.
-
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications