ಲೋಕಾಯುಕ್ತ ಪೊಲೀಸ್, ಸಿಬ್ಬಂದಿ ವಿಶೇಷ ಭತ್ಯೆ ಹೆಚ್ಚಳ, ವಿವರ
ಬೆಂಗಳೂರು, ಜನವರಿ 24: ಕರ್ನಾಟಕ ಸರ್ಕಾರ ಲೋಕಾಯುಕ್ತದಲ್ಲಿ ಕಾರ್ಯ ನಿರ್ವಹಣೆ ಮಾಡುವ ಪೊಲೀಸ್ ಅಧಿಕಾರಿ/ ಸಿಬ್ಬಂದಿಗಳಿಗೆ ಸಿಹಿಸುದ್ದಿಯನ್ನು ನೀಡಿದೆ. ನೀಡಲಾಗುತ್ತಿದ್ದ ವಿಶೇಷ ಭತ್ಯೆಯನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಕೆ. ಎಸ್. ವನಜ ಸರ್ಕಾರದ ಅಧೀನ ಕಾರ್ಯದರ್ಶಿ, ಒಳಾಡಳಿತ ಇಲಾಖೆ (ಪೊಲೀಸ್ ವೆಚ್ಚ) ಈ ಕುರಿತು ಆದೇಶ ಹೊರಡಿಸಿದ್ದಾರೆ. ಈ ಆದೇಶ ಲೋಕಾಯುಕ್ತ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ವಿಶೇಷ ಭತ್ಯೆಯನ್ನು ಹೆಚ್ಚಿಸುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ. ಸರ್ಕಾರದ ವಿವಿಧ ಆದೇಶಗಳನ್ನು ಉಲ್ಲೇಖಿಸಲಾಗಿದೆ.

ಆರ್ಥಿಕ ಇಲಾಖೆಯ ಆದೇಶದಲ್ಲಿ, ಲೋಕಾಯುಕ್ತ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ವಿಭಾಗದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ವಿಶೇಷ ಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಲಾಗಿದೆ ಎಂದು ಹೇಳಿದೆ. ಪ್ರಸ್ತುತ ಪಾವತಿಸುತ್ತಿರುವ ವಿಶೇಷ ಭತ್ಯೆ ಪೊಲೀಸ್ ಅಧೀಕ್ಷಕರು (ನಾನ್ ಐಪಿಎಸ್) 4,800. ಉಪ ಪೊಲೀಸ್ ಅಧೀಕ್ಷಕರು 4,200. ಪೊಲೀಸ್ ನಿರೀಕ್ಷಕರು 3,300. ಉಪ ಪೊಲೀಸ್ ನಿರೀಕ್ಷಕರು 3000. ಪೊಲೀಸ್ ಮುಖ್ಯ ಪೇದೆ 2000. ಪೊಲೀಸ್ ಪೇದೆ 1,700 ರೂ.ಗಳು.
ಪ್ರಸ್ತಾವನೆಯಲ್ಲಿ ರಾಜ್ಯ ಗುಪ್ತವಾರ್ತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ ಸಿಬ್ಬಂದಿಗಳ ವಿಶೇಷ ಭತ್ಯೆಯನ್ನು ಆಂತರಿಕ ಭದ್ರತಾ ವಿಭಾಗದ ಸಿಬ್ಬಂದಿಗಳಿಗೆ ನೀಡಲಾಗುತ್ತಿರುವ ದರದಂತೆಯೇ ಭತ್ಯೆ ಪರಿಷ್ಕರಿಸಲು ಮಂಜೂರಾತಿ ನೀಡಿ ಆದೇಶಿಸಲಾಗಿದೆ. ಪೊಲೀಸ್ ಮಹಾ ನಿರ್ದೇಶಕರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಇವರ ಪತ್ರವನ್ನು ಉಲ್ಲೇಖಿಸಿ ಲೋಕಾಯುಕ್ತ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ/ ಸಿಬ್ಬಂದಿಯವರಿಗೆ ವಿಶೇಷ ಭತ್ಯೆಯನ್ನು ಹೆಚ್ಚಿಸಲು ಕೋರಿದ್ದರು.
ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ವಿಭಾಗದ ಪೊಲೀಸ್ ಅಧಿಕಾರಿ/ ಸಿಬ್ಬಂದಿಯವರು ಭ್ರಷ್ಟಾಚಾರ ನಿರ್ಮೂಲನಾ ಅಧಿನಿಯಮ ಮತ್ತು ಕರ್ನಾಟಕ ಲೋಕಾಯುಕ್ತ ಅಧಿನಿಯಮಗಳ ಅಡಿಯಲ್ಲಿ ಸಾರ್ವಜನಿಕ/ ಸರ್ಕಾರಿ ಅಧಿಕಾರಿ ನೌಕರರ ವಿರುದ್ಧ ನ್ಯಾಯಾಲಯದಿಂದ/ ಸರ್ಕಾರದಿಂದ ವಹಿಸಿದ ಹಲವಾರು ದೂರು/ ಪ್ರಕರಣಗಳಲ್ಲಿ ದುರಾಡಳಿತ, ಕರ್ತವ್ಯ ಲೋಪ, ಹಣ ದುರುಪಯೋಗ ಮತ್ತು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಸಂಬಂಧ ಸ್ವೀಕೃತವಾದ ದೂರುಗಳಲ್ಲಿ ಮಾಹಿತಿ/ ದಾಖಲೆ ಸಂಗ್ರಹಿಸಿ ತನಿಖೆ ಕೈಗೊಳ್ಳಬೇಕಾದಂತಹ ವಿವಿಧ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದಾರೆ.
ಕರ್ನಾಟಕ ಹೈಕೋರ್ಟ್ ಲೋಕಾಯುಕ್ತ ಸಂಸ್ಥೆಯ ಪೊಲೀಸ್ ವಿಭಾಗಕ್ಕೆ ಸಮಗ್ರತೆ ಮತ್ತು ನ್ಯಾಯೋಚಿತವಾದ ದಾಖಲೆಗಳನ್ನು ಹೊಂದಿರುವ ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಕ/ ನಿಯೋಜನೆ ಮಾಡಿಕೊಳ್ಳುವ ಮುಖಾಂತರ ಸಂಸ್ಥೆಯ ಪೊಲೀಸ್ ವಿಭಾಗವನ್ನು ಬಲಪಡಿಸಬೇಕು ಎನ್ನುವ ಆದೇಶದ ಮೇರೆಗೆ ಸಂಸ್ಥೆಯ ಸುಗಮ ಕರ್ತವ್ಯ ನಿರ್ವಹಣೆಗೆ ಎಲ್ಲಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕಾಗಿರುತ್ತದೆ ಎಂದು ತಿಳಿಸಿರುತ್ತಾರೆ.
ಪೊಲೀಸ್ ಇಲಾಖೆಯ ಸಿಬ್ಬಂದಿಯವರಿಗೆ ಸರ್ಕಾರದ ಆದೇಶದಂತೆ ಕಷ್ಟ ಪರಿಹಾರ ಭತ್ಯೆಯನ್ನು ನೀಡುವ ರೀತಿಯಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ವಿಭಾಗದ ಪೊಲೀಸ್ ಸಿಬ್ಬಂದಿಯವರಿಗೆ ಪಾವತಿಸದೇ ಇರುವುದರಿಂದ ಹಾಗೂ ಇತರ ಘಟಕಗಳಾದ ರಾಜ್ಯ ಗುಪ್ತವಾರ್ತೆ/ ಆಂತರಿಕ ಭದ್ರತಾ ವಿಭಾಗ ಕಛೇರಿಗಳಿಗೆ ನೀಡುವ ವಿಶೇಷ ಭತ್ಯೆಗಳೊಂದಿಗೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ವಿಶೇಷ ಭತ್ಯೆಯಲ್ಲಿ ವ್ಯತ್ಯಾಸವಿರುವುದರಿಂದ ದಕ್ಷ ಅಧಿಕಾರಿ/ ಸಿಬ್ಬಂದಿಗಳನ್ನು ಲೋಕಾಯುಕ್ತ ಸಂಸ್ಥೆಯ ಕಡೆಗೆ ಆಕರ್ಷಿಸಲು ಅಡಚಣೆಯಾಗಿದ್ದು, ಇದರಿಂದ ಪೊಲೀಸ್ ವಿಭಾಗದ ಕಾರ್ಯನಿರ್ವಹಣೆಯಲ್ಲಿ ಸಮಸ್ಯೆಯಾಗುತ್ತಿದೆ.
ರಾಜ್ಯ ಗುಪ್ತವಾರ್ತೆ ಘಟಕಗಳಲ್ಲಿರುವ ಪೊಲೀಸ್ ಅಧಿಕಾರಿ/ ಸಿಬ್ಬಂದಿಯವರಿಗೆ ನೀಡುವ ವಿಶೇಷ ಭತ್ಯೆಯು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಪೊಲೀಸ್ ಅಧಿಕಾರಿ/ ಸಿಬ್ಬಂದಿಯವರು ಪಡೆಯುತ್ತಿರುವ ವಿಶೇಷ ಭತ್ಯೆಯೊಡನೆ ಹೋಲಿಕೆ ಮಾಡಿದಾಗ ಕಡಿಮೆ ಇರುವ ಪರಿಣಾಮ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಲು ಪೊಲೀಸ್ ಅಧಿಕಾರಿ/ ಸಿಬ್ಬಂದಿಗಳು ಆಸಕ್ತಿ ತೋರುತ್ತಿಲ್ಲ. ಆದ್ದರಿಂದ ಸುಗಮ ಆಡಳಿತಕ್ಕೆ ತೊಂದರೆಯಾಗುತ್ತಿದೆ.
ಆದ್ದರಿಂದ, ವಿಶೇಷ ಘಟಕಗಳಾದ ರಾಜ್ಯ ಗುಪ್ತವಾರ್ತೆ ಮತ್ತು ಆಂತರಿಕ ಭದ್ರತಾ ಘಟಕಗಳಿಗೆ ಮಂಜೂರಾದ ರೀತಿಯಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿರುವ ಪೊಲೀಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಪೇದೆ ಹುದ್ದೆಯಿಂದ ಪೊಲೀಸ್ ಅಧೀಕ್ಷಕರ (ನಾನ್ ಐಪಿಎಸ್) ಹುದ್ದೆಯಲ್ಲಿರುವ ಅಧಿಕಾರಿ/ ಸಿಬ್ಬಂದಿಯವರಿಗೆ ವಿಶೇಷ ಭತ್ಯೆಯನ್ನು ಮಂಜೂರು ಮಾಡುವಂತೆ ಕೋರಿರುತ್ತಾರೆ.
ಪ್ರಸ್ತಾವನೆಯನ್ನು ಪರಿಶೀಲಿಸಿದ್ದು, ಪೊಲೀಸ್ ಇಲಾಖೆಯ ರಾಜ್ಯ ಗುಪ್ತವಾರ್ತೆ ಹಾಗೂ ಆಂತರಿಕ ಭದ್ರತಾ ವಿಭಾಗಗಳಲ್ಲಿನ ಕಾರ್ಯನಿರತ ಸಿಬ್ಬಂದಿಗಳಿಗೆ ಮಂಜೂರು ಮಾಡಿರುವ ವಿಶೇಷ ಭತ್ಯೆಯ ದರಗಳಂತೆ ಲೋಕಾಯುಕ್ತ ಸಂಸ್ಥೆಯ ತತ್ಸಮಾನ ಹುದ್ದೆಯ ಸಿಬ್ಬಂದಿಗಳಿಗೆ ವಿಸ್ತರಿಸಲು, ವಿಶೇಷ ಪ್ರಕರಣವೆಂದು ಪರಿಗಣಿಸಿ ಸಹಮತಿ ನೀಡಿ ಆದೇಶಿಸಲಾಗಿದೆ.
ಭತ್ಯೆ ಎಷ್ಟು ಹೆಚ್ಚಳ?; ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಸಿಬ್ಬಂದಿಗಳ ನಿರ್ದಿಷ್ಟ ಕಾರ್ಯವೈಖರಿ ಮತ್ತು ಹುದ್ದೆಯ ಕಾರ್ಯದ ನಿರ್ವಹಣೆಯಲ್ಲಿನ ಗುರುತರ ಹೊಣೆಗಾರಿಕೆಯನ್ನು ಗಮನದಲ್ಲಿರಿಸಿಕೊಂಡು ವಿಶೇಷ ಭತ್ಯೆಯನ್ನು ಪರಿಷ್ಕರಿಸಿ ಆದೇಶಿಸಲಾಗಿದೆ.
ಪರಿಷ್ಕೃತ ಆದೇಶದಂತೆ ವಿಶೇಷ ಭತ್ಯೆ ಪೊಲೀಸ್ ಅಧೀಕ್ಷಕರು (ನಾನ್ ಐಪಿಎಸ್) 4,800 ರಿಂದ 8000, ಡಿವೈಎಸ್‌ಪಿ 4,200 ರಿಂದ 7000. ಪಿಐ 3,300 ರಿಂದ 6000. ಪಿಎಸ್‌ಐ 3000 ದಿಂದ 5 ಸಾವಿರ. ಎಎಸ್‌ಐ 2,200 ರಿಂದ 4 ಸಾವಿರ. ಹೆಚ್‌ಸಿ 2 ಸಾವಿರದಿಂದ 4 ಸಾವಿರ ಮತ್ತು ಪಿಸಿ 1700 ದಿಂದ 4 ಸಾವಿರ ರೂ. ಗೆ ಏರಿಕೆ ಮಾಡಲಾಗಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications