ಬೆಂಗಳೂರಿನಲ್ಲಿ ಇಂದಿನಿಂದ ಜಯಲಲಿತಾ ಮೇಲ್ಮನವಿ ವಿಚಾರಣೆ

ಬೆಂಗಳೂರು, ಜ. 2 : ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪಿನ ವಿಚಾರಣೆಯ ಮೇಲ್ಮನವಿ ಶುಕ್ರವಾರದಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಜಯಲಲಿತಾ ಹಾಗೂ ಇತರ ಮೂವರ ವಿರುದ್ಧದ ಪ್ರಕರಣದ ಮೇಲ್ಮನವಿ ವಿಚಾರಣೆಗೆ ಕರ್ನಾಟಕ ಹೈಕೋರ್ಟ್‌ ಏಕಸದಸ್ಯ ವಿಶೇಷ ನ್ಯಾಯಪೀಠವನ್ನು ರಚನೆ ಮಾಡಿದೆ.

ಸುಪ್ರೀಂಕೋರ್ಟ್ ಆದೇಶದ ಅನ್ವಯ ಗುರುವಾರ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರ ಏಕಸದಸ್ಯ ಪೀಠವನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ಈ ವಿಶೇಷ ಪೀಠವು, ಶುಕ್ರವಾರದಿಂದ ರಜಾ ದಿನಗಳನ್ನು ಹೊರತುಪಡಿಸಿ ನಿತ್ಯವೂ ಜಯಲಲಿತಾ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ನಡೆಸಲಿದೆ. [ಜಯಲಲಿತಾ ಜಾಮೀನು ಅವಧಿ 4 ತಿಂಗಳು ವಿಸ್ತರಣೆ]

justice kumaraswamy

2014ರ ಸೆ. 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣ ತೀರ್ಪು ನೀಡಿದ್ದ ವಿಶೇಷ ನ್ಯಾಯಾಲ­ಯದ ನ್ಯಾಯಾಧೀಶ ಡಿ.ಕುನ್ಹ ಅವರು, ಜಯಲಲಿತಾ, ವಿ.ಕೆ.ಶಶಿಕಲಾ, ಜೆ.ಇಳವರಸಿ ಮತ್ತು ವಿ.ಎನ್.ಸುಧಾಕರನ್ ತಪ್ಪಿತಸ್ಥರು ಎಂದು ಘೋಷಿಸಿದ್ದರು. ಜಯಲಲಿತಾ ಅವರಿಗೆ 100 ಕೋಟಿ ಹಾಗೂ ಇತರರಿಗೆ ತಲಾ 10 ಕೋಟಿ ದಂಡ ಮತ್ತು ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. [ಅಕ್ರಮ ಆಸ್ತಿಗಳಿಕೆ ಪ್ರಕರಣದ ವಿವರ]

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಜಯಲಲಿತಾ ಮತ್ತು ಇತರ ಮೂವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿ ವಿಶೇಷ ಕೋರ್ಟ್ ತೀರ್ಪನ್ನು ಪ್ರಶ್ನಿಸಿದ್ದರು ಮತ್ತು ಜಾಮೀನು ನೀಡುವಂತೆ ಮನವಿ ಸಲ್ಲಿಸಿದ್ದರು. ಕೋರ್ಟ್ ಎಲ್ಲಾ ಆರೋಪಿಗಳಿಗೂ ಜಾಮೀನು ನೀಡಿತ್ತು. [ಜಯಾ ಕೇಸಿನಲ್ಲಿ ಎದುರಿಸಿದ ಸಂಕಷ್ಟಗಳು ಅಷ್ಟಿಷ್ಟಲ್ಲ]

ಜಾಮೀನು ನೀಡುವ ಸಮಯದಲ್ಲಿ ಪ್ರಕರಣದ ವಿಚಾರಣೆ­ಯ ಮೇಲ್ಮನವಿಯನ್ನು ತ್ವರಿತವಾಗಿ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಸೂಚಿಸಿತ್ತು ಮತ್ತು ಇದಕ್ಕಾಗಿ ವಿಶೇಷ ಪೀಠ ರಚನೆ ಮಾಡುವಂತೆ ಆದೇಶಿಸಿತ್ತು. ಸದ್ಯ, ವಿಶೇಷ ಪೀಠ ರಚನೆಯಾಗಿದ್ದು, ಇಂದಿನಿಂದ ವಿಚಾರಣೆ ಆರಂಭವಾಗಲಿದೆ. ಮೂರು ತಿಂಗಳಿನಲ್ಲಿ ವಿಚಾರಣೆ ಪೂರ್ಣಗೊಳ್ಳಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+