ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಷತ್ ಚುನಾವಣೆಗಾಗಿ ಶುಕ್ರವಾರ ರಜೆ

|
Google Oneindia Kannada News

ಬೆಂಗಳೂರು, ಜೂನ್ 11 : ವಿಧಾನ ಪರಿಷತ್ತಿನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಜೂನ್‌ 20ರ ಶುಕ್ರವಾರ ಚುನಾವಣೆ ನಡೆಯಲಿದ್ದು, ಮತದಾನ ಮಾಡಲು ಅರ್ಹ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ.

ಜೂನ್ 20ರ ಶುಕ್ರವಾರ ಪಶ್ಚಿಮ ಮತ್ತು ಆಗ್ನೇಯ ಪದವೀ­ಧರ ಕ್ಷೇತ್ರ ಹಾಗೂ ಈಶಾನ್ಯ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಗಳ ಚುನಾವಣೆ ನಡೆಯಲಿದ್ದು, ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಮತದಾರರಿಗೆ ಮಾತ್ರ ವಿಶೇಷ ಸಾಂದರ್ಭಿಕ ರಜೆ ನೀಡಲಾಗಿದೆ. [2014ರ ಸರ್ಕಾರಿ ರಜಾ ಪಟ್ಟಿ, ಮೂರು ರಜೆ ನಷ್ಟ]

Legislative Council

ವಿಶೇಷ ರಜೆ ಯಾರಿಗೆ ಅನ್ವಯ : ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್ ಗಳಿಗೆ ರಜೆ ಅನ್ವಯವಾಗುತ್ತದೆ. [ಪರಿಷತ್ ಚುನಾವಣೆ ಕಣಕ್ಕಿಳಿದ ಡಾ.ಗುರುರಾಜ ಕರ್ಜಗಿ]

ರಾಜ್ಯ ಸರ್ಕಾರದ ಕಾರ್ಖಾನೆಗಳು, ಕೇಂದ್ರ ಸರ್ಕಾರದ ಕಾರ್ಖಾನೆಗಳು ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರು ಈ ರಜೆಯ ವ್ಯಾಪ್ತಿಗೆ ಒಳಪಡಲಿದ್ದಾರೆ. ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಘಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಅರ್ಹ ಮತದಾರರಿಗೆ ಈ ರಜೆ ಸೀಮಿತವಾಗಿದೆ.

ಜೂನ್ 24ರಂದು ಫಲಿತಾಂಶ : ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 20ರಂದು ಚುನಾವಣೆ ನಡೆಯಲಿದ್ದು, 24ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದ್ದು ಅಂದು ಫಲಿತಾಂಶ ಪ್ರಕಟಗೊಳ್ಳಲಿದೆ.

English summary
Karnataka government Department of Personnel and Administrative Reform issued leave for Teachers and Graduates constituency election of the member of legislative council, the voting will takes place on June 20.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X