ಹೈದರಾಬಾದ್ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಮುತುವರ್ಜಿ: ಮುಖ್ಯಮಂತ್ರಿ ಭರವಸೆ
ಬೆಂಗಳೂರು, ಸೆಪ್ಟೆಂಬರ್ 6: 'ಹೈದರಾಬಾದ್ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸಿ, ಕ್ರಮ ಕೈಗೊಳ್ಳಲಾಗುವುದು. ಆ ಭಾಗದ ಸಮಸ್ಯೆಗಳ ಕುರಿತು ಚರ್ಚಿಸಲು ಕಲಬುರ್ಗಿಯಲ್ಲಿ ವಿಶೇಷ ಸಭೆ ಕರೆದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ಮಾಜಿ ಶಾಸಕ ವೈಜನಾಥ ಪಾಟೀಲ ಅವರ ನೇತೃತ್ವದ ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ನಿಯೋಗ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಹೈದರಾಬಾದ್ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ, ಹೈದರಾಬಾದ್ ಕರ್ನಾಟಕ ವಲಯದಲ್ಲಿ ಶಿಕ್ಷಣ, ಉದ್ಯೋಗ ಸೃಷ್ಟಿ, ಮತ್ತಿತರ ಅಭಿವೃದ್ಧಿ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸರ್ಕಾರ ಸಮಗ್ರವಾಗಿ ತೀರ್ಮಾನ ಕೈಗೊಳ್ಳಲಿದೆ. ಇದಕ್ಕೂ ಮುನ್ನ ಇನ್ನು ಕೆಲವೇ ದಿನಗಳಲ್ಲಿ ಆ ಭಾಗದ ಸಮಸ್ಯೆಗಳ ಕುರಿತು ಎಲ್ಲಾ ಜಿಲ್ಲೆಗಳಿಂದ ಪ್ರತಿನಿಧಿಗಳನ್ನು ಕರೆದು ಚರ್ಚೆ ನಡೆಸುವುದಾಗಿ ತಿಳಿಸಿದರು.

ಸರ್ಕಾರ ಈ ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡುತ್ತಿದೆ. ಕಲಬುರಗಿಯಲ್ಲಿ ಸೋಲಾರ್ ಉಪಕರಣ ತಯಾರಿಕೆ, ಬೀದರ್‌ನಲ್ಲಿ ಕೃಷಿ ಉಪಕರಣ ತಯಾರಿಕೆ, ಕೊಪ್ಪಳದಲ್ಲಿ ಎಲೆಕ್ಟ್ರಾನಿಕ್ ಆಟಿಕೆಗಳ ತಯಾರಿಕೆ, ಬಳ್ಳಾರಿಯಲ್ಲಿ ವಸ್ತ್ರೋದ್ಯಮದ ಕ್ಲಸ್ಟರ್ ಸ್ಥಾಪಿಸಲು ಉದ್ದೇಶಿಸಿದೆ. ಈ ಬಗ್ಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಿದೆ.
ಈ ಭಾಗಕ್ಕೆ ಸಾಕಷ್ಟು ಅನುದಾನ ನೀಡಿದರೂ, ಅದನ್ನು ಸಮರ್ಪಕವಾಗಿ ವೆಚ್ಚ ಮಾಡಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಕೊರತೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ವಹಿಸುವುದಾಗಿ ತಿಳಿಸಿದರು.
ಇದಲ್ಲದೆ ಸಂವಿಧಾನದ 371 (ಜೆ) ತಿದ್ದುಪಡಿ ಅನ್ವಯ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಹಿನ್ನೆಲೆಯಲ್ಲಿ ಜಾರಿಗೊಳಿಸಿರುವ ಕಾಯ್ದೆಗೆ ಹಲವಾರು ತಿದ್ದುಪಡಿ ಮಾಡಲಾಗಿದೆ. ಇದರಲ್ಲಿ ಹಲವು ಲೋಪದೋಷಗಳಿವೆ ಎಂದು ನಿಯೋಗದ ಸದಸ್ಯರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಈ ಕುರಿತು ವಿಶೇಷ ಮುತುವರ್ಜಿ ವಹಿಸಿ, ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಅಲ್ಲದೆ ಕಲಬುರಗಿಯಲ್ಲಿ ಹೈದರಾಬಾದ್ ಕರ್ನಾಟಕ ವಿಶೇಷ ಕೋಶ ಸ್ಥಾಪಿಸುವ ಕುರಿತು ಸಹ ಪರಿಶೀಲಿಸುವುದಾಗಿ ತಿಳಿಸಿದರು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications