ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್

|
Google Oneindia Kannada News

ಬೆಂಗಳೂರು, ಮೇ 23: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಹಿತ 29 ಮಂದಿಗೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಕೋವಿಡ್ ಮೂರನೇ ಅಲೆಯ ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆ ನಡೆಸುವ ಮೂಲಕ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಹಿತ 29 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಸಂಬಂಧ ಮೇ 24ರಂದು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಬೇಕು ಎಂದು 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್‌ನಿಂದ ಸಮನ್ಸ್‌ ನೀಡಲಾಗಿದೆ.

Special Court summons issued to Siddaramiah, DK Shivakumar

ಕಳೆದ ಜನವರಿಯಲ್ಲಿ ಮೇಕೆದಾಟು ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದರಿಂದ ಕೋವಿಡ್ ನಿಯಮಾವಳಿಗಳನ್ನು ಜಾರಿ ಮಾಡಲಾಗಿತ್ತು. ಇದನ್ನು ಉಲ್ಲಂಘಿಸಿ ಸಾವಿರಾರು ಜನರನ್ನು ಒಂದೆಡೆ ಸೇರಿಸಿ ಪಾದಯಾತ್ರೆ ಮಾಡಿದ ಕಾಂಗ್ರೆಸ್ ಮುಖಂಡರ ವಿರುದ್ಧ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ವಿಪತ್ತು ನಿರ್ವಹಣಾ ಕಾಯ್ದೆ 2005ರ ಐಪಿಸಿ ಸೆಕ್ಷನ್ 141, 143, 290 336ರ ಅಡಿಯಲ್ಲಿ ದೂರು ದಾಖಲಾಗಿದೆ.

Recommended Video

Zameer Ahmed ಏಕತೆಯನ್ನು ಮೆರೆದಿದ್ದು ಹೀಗೆ | Oneindia Kannada

English summary
Special court summons for 29 persons including Assembly opposition leader Siddaramaiah and KPCC president DK Shivkumar Sivakumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X