• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದಲಿತ ದೌರ್ಜನ್ಯ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ - ಸಿಎಂ

By Sachhidananda Acharya
|

ಬೆಂಗಳೂರು, ಏಪ್ರಿಲ್ 25: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ನಿಯಂತ್ರಣ ಸಂಬಂಧ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮತನಾಡುತ್ತಾ ಮುಖ್ಯಮಂತ್ರಿಯವರು ಈ ಸೂಚನೆ ನೀಡಿದರು.[ತನ್ನ ಸಾಧಕ ಪುತ್ರನನ್ನು ನೋಡಲು ಆ ತಂದೆ ಬದುಕಿರಲಿಲ್ಲ!]

ಗಂಭೀರವಾಗಿ ಪರಿಗಣಿಸಿ

ನ್ಯಾಯಾಲಯಗಳ ಸ್ಥಾಪನೆ ಸಂಬಂಧ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿಯಾಗಿ ಮಾತುಕತೆ ನಡೆಸುವಂತೆ ಸಮಾಜ ಕಲ್ಯಾಣ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

ದೌರ್ಜನ್ಯ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು. ಇದಕ್ಕೆ ಪೂರವಾದ ಕ್ರಮಗಳನ್ನು ಪ್ರಾಸಿಕ್ಯುಷನ್, ಪೊಲೀಸರು ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕೈಗೊಳ್ಳಬೇಕು. ಎಲ್ಲ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಸೂಚನೆ ನೀಡಿದರು.[ಬಿಟಿ ಹತ್ತಿ ಬೆಳೆ ಉಳಿಸೋಕೆ ಕೃಷಿ ಇಲಾಖೆಯಿಂದ ಮಾರ್ಗಸೂಚಿ]

ಮೇಲ್ಮನವಿ ಪ್ರಕ್ರಿಯೆ ಚುರುಕು

ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ದೌರ್ಜನ್ಯ ಪ್ರಕರಣಗಳಲ್ಲಿ ಹಿನ್ನೆಡೆಯಾಗುತ್ತಿದ್ದು, ತಪ್ಪಿತಸ್ಥರು ಶಿಕ್ಷೆಯಿಂದ ಬಚಾವಾಗುತ್ತಿದ್ದಾರೆ. ಅದಕ್ಕೆ ಅವಕಾಶ ಕೊಡದೆ ಸಾಕ್ಷ್ಯಾಧಾರ ಮತ್ತು ಸಾಕ್ಷಿಗಳನ್ನು ಒದಗಿಸುವ ಕೆಲಸ ಆಗಬೇಕು ಎಂದು ಹೇಳಿದರು.

ವಜಾಗೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆ ಚುರುಕಾಗಬೇಕು. ಮೇಲ್ಮನವಿ ಸಲ್ಲಿಕೆಗೆ ಅರ್ಹವಾದ ಪ್ರಕರಣಗಳ ಕುರಿತು ಅಧಿಕಾರಿಗಳು ಆಗಿಂದಾಗ್ಗೆ ಪರಿಶೀಲನೆ ನಡೆಸಬೇಕು. ಅಪೀಲು ಸಲ್ಲಿಸಲು ಅವಕಾಶವಿದ್ದರೂ ಆ ರೀತಿ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದರೆ ಶಿಕ್ಷೆ

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕೈಗೊಂಡಿರುವ ಕ್ರಮ ಕುರಿತು ಪರಿಶೀಲನೆ ನಡೆಸಿದ ಮುಖ್ಯಮಂತ್ರಿಯವರು, ಸುಳ್ಳು ಮಾಹಿತಿ ನೀಡಿ ಜಾತಿ ಪ್ರಮಾಣ ಪಡೆದವರ ಜೊತೆಗೆ ಅವರಿಗೆ ಸಹಕರಿಸುವ ಅಧಿಕಾರಿಗಳನ್ನೂ ಶಿಕ್ಷೆಗೆ ಗುರಿಪಡಿಸಬೇಕು ಎಂದು ಸೂಚಿಸಿದರು.

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವವರು, ಅರ್ಜಿ ಸಲ್ಲಿಸುವವರ ಮೇಲೆ ಪೊಲೀಸ್ ಅಧಿಕಾರಿಗಳು ನಿಗಾ ಇರಿಸಬೇಕು. ಸುಳ್ಳು ಮಾಹಿತಿ ನೀಡಿರುವುದು ಸಾಬೀತಾದ ಕೂಡಲೇ ಕ್ರಮ ಜರುಗಿಸಬೇಕು ಎಂದರು.

3ತಿಂಗಳಿಗೊಮ್ಮೆ ಕಡ್ಡಾಯ ಸಭೆ

ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ನಡೆಸಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡಗಳವರಿಗೆ ಕ್ಷೌರ ಮಾಡಲು ಮತ್ತು ದೇಗುಲಗಳಿಗೆ ಪ್ರವೇಶ ನಿರಾಕರಿಸುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಆದರೂ ಆಗಾಗ ಮಾಧ್ಯಮಗಳಲ್ಲಿ ವರದಿಯಾಗುತ್ತಿರುತ್ತದೆ. ಈ ಕುರಿತೂ ಜಿಲ್ಲಾಧಿಕಾರಿಗಳು ಸಭೆ ನಡೆಸುವ ಮೂಲಕ ಗಮನ ಹರಿಸಬೇಕು ಎಂದು ತಿಳಿಸಿದರು.

ಗೃಹ ಸಚಿವ ಡಾ. ಜಿ. ಪರಮೇಶ್ವರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ಸಮಾಜ ಕಲ್ಯಾಣ ಸಚಿವ ಆಂಜನೇಯ, ಸಣ್ಣ ಕೈಗಾರಿಕೆಗಳ ಸಚಿವ ರಮೇಶ್ ಜಾರಕಿಹೊಳಿ, ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕರು, ಇಲಾಖೆಯ ಕಾರ್ಯದರ್ಶಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.

ಅಲ್ಪ ಸಂಖ್ಯಾತರ ಅರಿವು ತಂತ್ರಾಂಶ ಮತ್ತು ಯೋಜನೆಗೆ ಸಿಎಂ ಚಾಲನೆ

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರಿವು (ವಿದ್ಯಾಭ್ಯಾಸ ಸಾಲ) ಯೋಜನೆಯಡಿ ಆಯ್ಕೆಯಾದ ಅಲ್ಪ ಸಂಖ್ಯಾತರ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕವಾಗಿ ರೂ. 20 ಕೋಟಿ ಮೊತ್ತದ ಚೆಕ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹಸ್ತಾಂತರಿಸಿದರು.

ಇದೇ ಸಂದರ್ಭದಲ್ಲಿ "ಅರಿವು ನೂತನ ತಂತ್ರಾಂಶ"ಕ್ಕೆ ಮುಖ್ಯಮಂತ್ರಿ ಗಳು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಜತೆ ಸಚಿವರಾದ ತನ್ವೀರ್ ಸೇಠ್, ಯು ಟಿ ಖಾದರ್ ಮತ್ತು ಬಸವರಾಜ ರಾಯರೆಡ್ಡಿ ಉಪಸ್ಥಿತರಿದ್ದರು. ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಕಾರ್ಯಕ್ರಮ ನಡೆಯಿತು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Chief minister Siddarmaiah given direction to Social Welfare and Law & Parliament Affairs minister to start special courts to deal Atrocity cases on Dalits.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more