ಹುಬ್ಬಳ್ಳಿ ಬೆಂಗಳೂರು ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ, ವಿವರ
ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮಾರ್ಚ್ 20 ರಿಂದ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ಮಾಡಲಾಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಬೆಂಗಳೂರು, ಮಾರ್ಚ್ 4: ಹುಬ್ಬಳ್ಳಿ ಬೆಂಗಳೂರು ನಡುವೆ ಸಂಚರಿಸುವ ಜನರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಮಾರ್ಚ್ 20ರಿಂದ ಹುಬ್ಬಳ್ಳಿ ಬೆಂಗಳೂರು ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲಿದೆ.
ಹುಬ್ಬಳ್ಳಿ ಬೆಂಗಳೂರು ಮಧ್ಯೆ ವಿಶೇಷ ರೈಲು ಅತೀ ಅವಶ್ಯಕ ವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವಾರು ಮಂದಿ ಜನಪ್ರತಿನಧಿಗಳು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದರು. ಈಗ ಕೇಂದ್ರ ರೈಲ್ವೆ ಸಚಿವರು ಈ ವಿಶೇಷ ರೈಲುಗಳಿಗೆ ಅನುಮೋದನೆ ನೀಡಿದ್ದಾರೆ.

ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮಾರ್ಚ್ 20 ರಿಂದ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ಮಾಡಲಾಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ಈ ರೈಲು ಪ್ರಯಾಣಿಕರ ಬೇಡಿಕೆ ಹಿನ್ನಲೆಯಲ್ಲಿ ಕಾಯ್ದಿರಿಸಿದ ವಿಶೇಷ ಸೇವೆಯ ಈ ರೈಲುಗಳು ಇತ್ತು. ಮಾರ್ಚ್ 20 ರಿಂದ ತಮ್ಮ ಸಂಚಾರ ಆರಂಭಿಸಲಿವೆ. ರಾತ್ರಿ 11:15ಕ್ಕೆ ಹುಬ್ಬಳ್ಳಿಯಿಂದ ( ರೈಲು ಸಂ : 07339) ಹೊರಡುವ ರೈಲು ಬೆಳಗ್ಗೆ 6:50ಕ್ಕೆ ಬೆಂಗಳೂರು ತಲುಪಲಿದೆ ಎಂದು ಅವರು ತಿಳಿಸಿದ್ದಾರೆ.
ಅಲ್ಲದೆ ಬೆಂಗಳೂರಿನಿಂದ ರಾತ್ರಿ 11:15ಕ್ಕೆ ಹೊರಡುವ ರೈಲು ಬೆಳಗ್ಗೆ 7:30ಕ್ಕೆ ಹುಬ್ಬಳ್ಳಿ ತಲುಪಲಿದೆ. ಮತ್ತೊಂದು ರೈಲು ಬೆಳಗ್ಗೆ 7:45ಕ್ಕೆ ಬೆಂಗಳೂರಿನಿಂದ(ರೈಲು ಸಂ : 07353) ಹೊರಟು ಮಧ್ಯಾಹ್ನ 2:30ಕ್ಕೆ ಹುಬ್ಬಳ್ಳಿ ತಲುಪಲಿದೆ ಹಾಗೂ ಹುಬ್ಬಳ್ಳಿಯಿಂದ(ರೈಲು ಸಂ : 07354) 3:15ಕ್ಕೆ ಹೊರಡುವ ರೈಲು ರಾತ್ರಿ 11:10ಕ್ಕೆ ಬೆಂಗಳೂರು ತಲುಪಲಿದೆ ಎಂದು ಅವರು ತಿಳಿಸಿದ್ದಾರೆ.
ಈ ಎರಡು ರೈಲುಗಳು ಕರ್ಜಗಿ, ದಾವಣಗೆರೆ, ಬೀರೂರು, ತುಮಕೂರು ಹಾಗೂ ಯಶವಂತಪುರ ಮಾರ್ಗವಾಗಿ ಸಂಚರಿಸಲಿವೆ. ನಮ್ಮ ಕೋರಿಕೆಗೆ ಸ್ಪಂದಿಸಿ ರೈಲು ಸಂಚಾರ ಆರಂಭಿಸಲು ಆದೇಶ ನೀಡಿದ ಕೇಂದ್ರ ರೈಲು ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಸಚಿವ ಪ್ರಹ್ಲಾದ್ ಜೋಶಿ ಅವರು ಧನ್ಯವಾದ ತಿಳಿಸಿದ್ದಾರೆ.












Click it and Unblock the Notifications