Government Employee: ಫೆ. 20ರಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ, ಆದೇಶ

ಬೆಂಗಳೂರು, ಫೆಬ್ರವರಿ 18: ಕರ್ನಾಟಕದ ಸರ್ಕಾರಿ ನೌಕರರಿಗೆ ಮುಖ್ಯವಾದ ಮಾಹಿತಿಯೊಂದಿದೆ. ರಾಜ್ಯ ಸರ್ಕಾರ ಮಂಗಳವಾರ ಸರ್ಕಾರಿ ನೌಕರರಿಗೆ ಫೆಬ್ರವರಿ 20ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶವನ್ನು ಹೊರಡಿಸಿದೆ. ಅಂದು ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಬೃಹತ್ ಸಮಾವೇಶ ನಡೆಯಲಿದ್ದು, 10 ಸಾವಿರಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಈ ಕುರಿತು ವಿಮಲಾಕ್ಷಿ .ಬಿ ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಆಸು-ತಪಾಸಣೆ-ಸ್ವೀಮರ) ಸುತ್ತೋಲೆಯನ್ನು ಹೊರಡಿಸಿದ್ದಾರೆ. ದಿನಾಂಕ 20/02/2025ರಂದು ಬೆಂಗಳೂರಿನಲ್ಲಿ ನಡೆಯುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಮಾವೇಶದಲ್ಲಿ ಭಾಗವಹಿಸುವ ಪ್ರತಿನಿಧಿಗಳಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ.

Special Occasion Leave For Karnataka Government Employees On February 20

ಆದೇಶದ ವಿವರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ 20.02.2025 ರಂದು ಬೆಂಗಳೂರು ನಗರದ ಅರಮನೆ ಮೈದಾನ ಆವರಣದಲ್ಲಿ 'ಸಮ್ಮಿಲನ ಸಮಾವೇಶ, ಕಾರ್ಯಾಗಾರ ಹಾಗೂ ಉಪನ್ಯಾಸ' ಕಾರ್ಯಕ್ರಮವನ್ನು ಆಯೋಜಿಸಿದೆ.

ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂಘದ ಚುನಾಯಿತ ನಿರ್ದೇಶಕರು, ಬೆಂಗಳೂರು ನಗರ ರಾಜ್ಯ ಪರಿಷತ್‌ ಸದಸ್ಯರು ಹಾಗೂ ಪದಾಧಿಕಾರಿಗಳಿಗೆ ದಿನಾಂಕ 20.02.2025 ರಂದು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಷರತ್ತಿಗೊಳಪಟ್ಟು ಮಂಜೂರು ಮಾಡಲಾಗಿದೆ ಎಂದು ಹೇಳಿದೆ.

2024-29ನೇ ಅವಧಿಗೆ ಆಯ್ಕೆಯಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು ಹಾಗೂ ಪದಾಧಿಕಾರಿಗಳು ಪೂರ್ವಾನುಮತಿಯನ್ನು ಪಡೆಯಬೇಕು. ಈ ಆಧಾರದ ಮೇಲೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಕಾರವುಳ್ಳ ಅಧಿಕಾರಿಗಳು ಮಂಜೂರು ಮಾಡತಕ್ಕದ್ದು ಎಂದು ಸ್ಪಷ್ಟಪಡಿಸಲಾಗಿದೆ.

ಬೃಹತ್ ಸಮಾವೇಶ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ಹಾಗೂ ಎಲ್ಲಾ ಜಿಲ್ಲಾ-ತಾಲ್ಲೂಕು ಶಾಖೆಗಳ ನಿರ್ದೇಶಕರು-ಪದಾಧಿಕಾರಿಗಳ ಸಮಾವೇಶವನ್ನು ಫೆಬ್ರವರಿ 20ರಂದು ಆಯೋಜನೆ ಮಾಡಲಾಗಿದೆ. ಡಿಸೆಂಬರ್ 2024ರಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಮುಗಿದಿದ್ದು, ಹೊಸ ಪದಾಧಿಕಾರಿಗಳ ಆಯ್ಕೆಯಾಗಿದೆ. ಬಳಿಕ ಮೊದಲ ಬಾರಿಗೆ ಈ ಸಮಾವೇಶ ನಡೆಯುತ್ತಿದೆ.

ಈ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಸಮಾವೇಶದಲ್ಲಿ ರಾಜ್ಯದ ಎಲ್ಲಾ ಜಿಲ್ಲೆ, ತಾಲ್ಲೂಕು ಶಾಖೆಗಳಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಸಂಘದ ಚುನಾಯಿತ ನಿರ್ದೇಶಕರು ಮತ್ತು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಸಮಾವೇಶಕ್ಕೆ ಆಗಮಿಸುವವರಿಗೆ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ.

ಸಮಾವೇಶದ ದಿನ 'ಪ್ರಜಾಸ್ನೇಹಿ ಆಡಳಿತ ಕಾರ್ಯಾಗಾರವನ್ನು ಸಹ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಪಾಲ್ಗೊಳ್ಳಲು ಸಹಾಯಕವಾಗುವಂತೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗುತ್ತದೆ ಎಂದು ಸರ್ಕಾರಿ ನೌಕರರ ಸಂಘ ಕಳೆದ ವಾರ ಹೇಳಿತ್ತು.

ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಈ ಸಮಾವೇಶದಲ್ಲಿ ಸರ್ಕಾರದ ಮುಂದೆ ಸರ್ಕಾರಿ ನೌಕರರು ಎರಡು ಬೇಡಿಕೆಗಳನ್ನು ಇಡಲಿದ್ದಾರೆ. ಹಳೆ ಪಿಂಚಣಿ ಯೋಜನೆ ಮರು ಜಾರಿ, ಆರೋಗ್ಯ ಸಂಜೀವಿನಿ ಯೋಜನೆ ಲೋಕಾರ್ಪಣೆಯ ಬೇಡಿಕೆಯನ್ನು ಮಂಡಿಸಲಿದ್ದು, ಸರ್ಕಾರ ಯಾವ ಘೋಷಣೆ ಮಾಡಲಿದೆ? ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+