ಚಂದ್ರಯಾನ-3 ಯಶಸ್ವಿಗಾಗಿ ಕರ್ನಾಟಕದ ದೇವಾಲಯಗಳಲ್ಲಿ ವಿಶೇಷ ಪೂಜೆ

ಬೆಂಗಳೂರು, ಆಗಸ್ಟ್ 22: ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ-3 ರ ಸಾಫ್ಟ್ ಲ್ಯಾಂಡಿಂಗ್‌ಗೆ ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್ 23 ರಂದು 18:04 ಗಂಟೆಗೆ ಲ್ಯಾಂಡರ್ ಮಾಡ್ಯೂಲ್-ವಿಕ್ರಮ್ ಚಂದ್ರನನ್ನು ಸ್ಪರ್ಶಿಸುವ ನಿರೀಕ್ಷೆಯಿದೆ. ಈ ನಿಟ್ಟಿನಲ್ಲಿ ಮಿಷನ್‌ನ ಯಶಸ್ಸಿಗಾಗಿ ಮಂಗಳವಾರ ನಗರದ ಹಲವಾರು ಜನರು ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು.

ಬೆಂಗಳೂರಿನ ಬಸವನಗುಡಿಯ ವಿನಾಯಕ ದೇವಸ್ಥಾನದಲ್ಲಿ ಭಾರತೀಯ ಧ್ವಜ ಹಾಗೂ ಉಡಾವಣಾ ವಾಹನದ ಭಿತ್ತಿಪತ್ರಗಳನ್ನಿಟ್ಟು ವಿಶೇಷ ಪೂಜೆ ಸಲ್ಲಿಸಲಾಯಿತು. 100 ರಷ್ಟು ಯಶಸ್ವಿಯಾಗಲಿ ಎಂದು ಭಕ್ತರು ಪ್ರಾರ್ಥಿಸಿದರು. ಮೈಸೂರಿನಲ್ಲಿ ಆಂಜನೇಯ ದೇವಸ್ಥಾನದಲ್ಲಿ ಭಕ್ತರು 'ಸರ್ವಾರ್ಥ ಸಿದ್ಧಿ ಯಾಗ' ನೆರವೇರಿಸಿ ಚಂದ್ರಯಾನ ಯಶಸ್ವಿಯಾಗಲಿ ಎಂದು ಪೂಜೆ ಸಲ್ಲಿಸಿದರು.

special-pooja-in-temples-for-success-of-chandrayaan-3

ದಕ್ಷಿಣ ಕನ್ನಡದ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಸಮಿತಿಯು ಚಂದ್ರಯಾನ-3 ಮಿಷನ್‌ನ ಯಶಸ್ಸಿಗೆ ವಿಶೇಷ ಪೂಜೆ ಸಲ್ಲಿಸಿತು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪ್ರಕಾರ, ಚಂದ್ರನ ಮಾಡ್ಯೂಲ್ ಬುಧವಾರ ಸಂಜೆ 18:04 ಗಂಟೆಗೆ ಸ್ಪರ್ಶಿಸಲಿದೆ. ಲ್ಯಾಂಡಿಂಗ್ ಕಾರ್ಯಕ್ರಮದ ನೇರ ಪ್ರಸಾರವು 17:20 ಗಂಟೆಗೆ (5:20 PM IST) ಪ್ರಾರಂಭವಾಗುತ್ತದೆ ಎಂದು ISRO ಹೇಳಿದೆ.

ಸೋಮವಾರ, ಇಸ್ರೋ ಲ್ಯಾಂಡರ್ ಹಜಾರ್ಡ್ ಡಿಟೆಕ್ಷನ್ ಮತ್ತು ಅವಾಯಿಡೆನ್ಸ್ ಕ್ಯಾಮೆರಾದಿಂದ ಸೆರೆಹಿಡಿಯಲಾದ ಚಂದ್ರನ ಹಲವಾರು ಚಿತ್ರಗಳನ್ನು ಬಿಡುಗಡೆ ಮಾಡಿದೆ. ಚಂದ್ರಯಾನ-3 ಇಳಿಯುವ 2 ದಿನಗಳ ಮೊದಲು ಸೋಮವಾರ (ಆಗಸ್ಟ್ 21) ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರನ ವಿಶೇಷ ಚಿತ್ರಗಳನ್ನು ಹಂಚಿಕೊಂಡಿದೆ. ವಿಕ್ರಮ್ ಲ್ಯಾಂಡರ್ ಚಂದ್ರನ ದೂರದ ಭಾಗದ ಚಿತ್ರಗಳನ್ನು ತೆಗೆದುಕೊಂಡಿದೆ ಎಂದು ಇಸ್ರೋ ತಿಳಿಸಿದೆ. ಚಂದ್ರಯಾನ-3 ಆಗಸ್ಟ್ 23 ರಂದು ಸಂಜೆ 6.04 ಕ್ಕೆ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಲಿದೆ.

ಚಂದ್ರಯಾನ-3 ಮಿಷನ್ ಕುರಿತು ನವೀಕರಣವನ್ನು ನೀಡುತ್ತಾ ಇಸ್ರೋ ಚಂದ್ರನ ಮೇಲ್ಮೈ ಭಾಗದ ಚಿತ್ರಗಳನ್ನು ಟ್ವೀಟ್ ಮೂಲಕ ಹಂಚಿಕೊಂಡಿದೆ. ವಿಕ್ರಮ್ ಲ್ಯಾಂಡರ್ ಹಜಾರ್ಡ್ ಡಿಟೆಕ್ಷನ್ ಮತ್ತು ಅವಾಯಿಡೆನ್ಸ್ ಕ್ಯಾಮೆರಾದಿಂದ ಚಂದ್ರನ ದೂರದ ಭಾಗದ ಚಿತ್ರಗಳನ್ನು ಸೆರೆಹಿಡಿದಿದೆ ಎಂದು ಇಸ್ರೋ ಹೇಳಿದೆ.

ಇಸ್ರೋ ಟ್ವಿಟ್ಟರ್‌ನಲ್ಲಿ ನಾಲ್ಕು ಫೋಟೋಗಳನ್ನು ಹಂಚಿಕೊಂಡಿದೆ. ಹೀಗೆ ಬರೆದಿದೆ, "ಇವು ಲ್ಯಾಂಡರ್ ಹಜಾರ್ಡ್ ಡಿಟೆಕ್ಷನ್ ಮತ್ತು ಅವಾಯಿಡೆನ್ಸ್ ಕ್ಯಾಮೆರಾ (ಎಲ್‌ಎಚ್‌ಡಿಎಸಿ) ತೆಗೆದ ಚಂದ್ರನ ಚಿತ್ರಗಳಾಗಿವೆ. ಬಂಡೆಗಳು ಅಥವಾ ಆಳವಾದ ಕಂದಕಗಳಿಲ್ಲದೆ ಸುರಕ್ಷಿತ ಲ್ಯಾಂಡಿಂಗ್ ಪ್ರದೇಶವನ್ನು ಪತ್ತೆಹಚ್ಚಲು ಈ ಕ್ಯಾಮೆರಾ ಸಹಾಯ ಮಾಡುತ್ತದೆ'' ಎಂದು ಇಸ್ರೋ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+