Operation Sindoor: ಭಾರತೀಯ ಸೈನಿಕರ ಶ್ರೇಯಸ್ಸಿಗಾಗಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ: ಜಮೀರ್ ಅಹಮದ್ ಖಾನ್
ಬೆಂಗಳೂರು, ಮೇ 08: ಪೆಹಲ್ಗಮ್ ದಾಳಿ ಹಿನ್ನೆಲೆಯಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಸೈನಿಕರ ಪರವಾಗಿ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ವಖ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿದಂತೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ದೇಶದ ಹೆಮ್ಮಯ ಸೈನಿಕರ ಶ್ರೇಯಸ್ಸಿ ಗಾಗಿ ಹಾಗೂ ಶಕ್ತಿ ತುಂಬಲು ಶುಕ್ರವಾರದ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.ಈ ಕುರಿತು ವಖ್ಫ್ ಬೋರ್ಡ್ ಮುಖ್ಯ ಕಾರ್ಯನಿರ್ವಹಾಧಿಕಾರಿ ಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಪತ್ರ ಬರೆದು ಸೂಚನೆ ನೀಡಿದ್ದಾರೆ.

ಪೆಹಲ್ಗಮ್ ದಾಳಿಯಲ್ಲಿ ಅಮಾಯಕರ ಜೀವ ಪಡೆದ ಪಾಕಿಸ್ತಾನ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ 'ಆಪರೇಷನ್ ಸಿಂಧೂರ್ ' ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ. ಭಾರತೀಯ ಸೇನೆಯ ಕಾರ್ಯ ಶ್ಲಾಘನೀಯ. ಉಗ್ರರಿಗೆ ಆಶ್ರಯ ನೀಡುವ ಪಾಕಿಸ್ತಾನ ಕ್ಕೆ ತಕ್ಕ ಪಾಠ. ನಮ್ಮ ತಂಟೆಗೆ ಬಂದರೆ ಉಗ್ರರಿಗೆ ಹಾಗೂ ಪಾಕಿಸ್ತಾನ ಕ್ಕೆ ಉಳಿಗಾಲ ಇಲ್ಲ ಎಂಬ ಸಂದೇಶ ರವಾನೆ ಯಾಗಿದೆ. 'ನಮ್ಮ ಸೇನೆ ನಮ್ಮ ಹೆಮ್ಮೆ' ಎಂದು ಹೇಳಿದ್ದಾರೆ. ಭಾರತದಲ್ಲಿ ಅಶಾಂತಿ ಸೃಷ್ಟಿಸುವ ಹಾಗೂ ಭಯೋತ್ಪಾದಕ ಕೃತ್ಯ ಎಸಗುವ ಉಗ್ರಗಾಮಿ ಸಂಘಟನೆಗಳ ಹುಟ್ಟಡಗಿಸುವ ಹೋರಾಟದಲ್ಲಿ ನಾವೆಲ್ಲರೂ ಕೇಂದ್ರ ಸರ್ಕಾರದ ಜತೆ ಇದ್ದೇವೆ ಎಂದು ಜಮೀರ್ ಅವರು ತಿಳಿಸಿದ್ದಾರೆ.
ಆಪರೇಷನ್ ಸಿಂಧೂರ್ ಯಶಸ್ಸಿಗೆ ವಿಜಯೇಂದ್ರ ಪ್ರಾರ್ಥನೆ
ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ದಿಟ್ಟ ನಿರ್ಧಾರದಿಂದ ಭಯೋತ್ಪಾದಕರನ್ನು ಮಟ್ಟ ಹಾಕುವ ಆಪರೇಷನ್ ಸಿಂಧೂರ್ ಪ್ರಾರಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.ನಾವು, ನಮ್ಮ ಪಕ್ಷದ ಮುಖಂಡರು ಮಲ್ಲೇಶ್ವರದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯಲ್ಲಿ ಬಹಳ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದ್ದೇವೆ. ಭಯೋತ್ಪಾದಕರ ನೆಲೆಯನ್ನು ಬುಡಸಮೇತ ಕಿತ್ತು ಹಾಕುವ ದೃಢಸಂಕಲ್ಪದೊಂದಿಗೆ ಮೋದಿಜೀ ಇದನ್ನು ಆರಂಭಿಸಿದ್ದಾರೆ. ಭಾರತಕ್ಕೆ ಯಶಸ್ಸು ಸಿಗಲಿ; ಯೋಧರಿಗೆ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ತಿಳಿಸಿದರು.
ಜಗತ್ತು ಇವತ್ತು ಭಾರತದ ಕಡೆ ನೋಡುತ್ತಿದೆ. ಭಯೋತ್ಪಾದನೆಯು ಕೇವಲ ಭಾರತಕ್ಕೆ ಸೀಮಿತವಾಗಿಲ್ಲ; ಜಗತ್ತಿನ ಬೇರೆಬೇರೆ ದೇಶಗಳಲ್ಲೂ ಭಯೋತ್ಪಾದನೆಯು ದುಸ್ವಪ್ನದಂತೆ ಕಾಡುತ್ತಿದೆ. ಇದು ಅಂತ್ಯಗೊಳ್ಳಲಿ ಎಂದು ಪ್ರಾರ್ಥಿಸಿದ್ದಾಗಿ ತಿಳಿಸಿದರು. ಇಂದು ಮತ್ತು ನಾಳೆ ರಾಜ್ಯದ ಎಲ್ಲ ಜಿಲ್ಲೆಗಳು, ತಾಲ್ಲೂಕುಗಳು, ಮಂಡಲಗಳಲ್ಲೂ ಕಾರ್ಯಕರ್ತರು ಪೂಜೆ ನೆರವೇರಿಸಲಿದ್ದಾರೆ ಎಂದು ಹೇಳಿದರು.
ಈ ಕುರಿತು ಶಾಸಕ ಮಹೇಶ ಟೆಂಗಿನಕಾಯಿ ಅವರು ಮಾತನಾಡಿ, ಭಾರತ ಮಾತೆಯ ಸಿಂಧೂರ ಎಷ್ಟು ಮಹತ್ವದ್ದು ಎಂದು ಪಾಕಿಸ್ತಾನ ಉಗ್ರರಿಗೆ ಭಾರತ ಸರ್ಕಾರ ಮನವರಿಕೆ ಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ.
ಪಹಲ್ಲಾಮ್‌ನಲ್ಲಿ ಪಾಕಿಸ್ತಾನದ ಉಗ್ರಗಾಮಿ ಸಂಘಟನೆಯವರು ಅಮಾಯಕ ಪ್ರವಾಸಿಗರನ್ನು ಧರ್ಮ ಕೇಳಿ ಕೊಂದು ಹಾಕಿ ಪೈಶಾಚಿಕ ಕೃತ್ಯ ನಡೆಸಿದ್ದರು. ಇದನ್ನು ದೇಶ ಅಲ್ಲದೆ ಅಂತಾರಾಷ್ಟ್ರೀಯ ಸಮುದಾಯಗಳೂ ತೀವ್ರವಾಗಿ ಖಂಡಿಸಿದ್ದವು.
ಪಾಕಿಸ್ತಾನದಲ್ಲಿರುವ ಸುಮಾರು 11 ಉಗ್ರರ ಅಡಗು ತಾಣಗಳನ್ನು ಗುರಿಯಾಗಿಸಿಕೊಂಡು ಭಾರತ ಏರ್‌ಸ್ಟೆಕ್ ಮುಖಾಂತರ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದೆ. ದೇಶದ ಭದ್ರತೆ ವಿಷಯದಲ್ಲಿ ಇನ್ನಾದರೂ ರಾಜಕೀಯ ಮಾಡುವುದನ್ನು ಪ್ರತಿಯೊಬ್ಬರೂ ನಿಲ್ಲಿಸಬೇಕು ಎಂದು ಹೇಳಿದ್ದಾರೆ. ದೇಶದ ವಿಚಾರದಲ್ಲಿ 140 ಕೋಟಿ ಜನರ ಹಿತದೃಷ್ಟಿ ಇಟ್ಟುಕೊಂಡು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಹಲ್ಲಾಮ್ ನಲ್ಲಿ ದಾಳಿ ನಡೆಯುವ ಎರಡು ದಿನಗಳ ಮುನ್ನ ಪ್ರಧಾನಿ ಮೋದಿ ಅವರಿಗೆ ಮಾಹಿತಿ ಇತ್ತು.
ಹೀಗಾಗಿ ಅವರು ಕಾಶ್ಮೀರ ಪ್ರವಾಸ ರದ್ದುಗೊಳಿಸಿದ್ದರು ಎಂದಿರುವುದು ಸರಿಯಲ್ಲ ಎಂದು ಶಾಸಕರು ಟೀಕಿಸಿದ್ದಾರೆ. ಉಗ್ರರ ಅಡಗು ತಾಣಗಳ ಮೇಲೆ ಸಮಯೋಚಿತ ದಾಳಿ ಮಾಡಿದ ನಮ್ಮ ಸೈನಿಕರು ಹಾಗೂ ಅವರಿಗೆ ಪ್ರೇರಣೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.ಇನ್ನು ಕಾಂಗ್ರೆಸ್ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಇಂದು ಶಾಂತಿ ಮಂತ್ರ ಮಹತ್ವದ್ದಾಗಿದೆ ಎಂಬ ಪೋಸ್ಟ್ ಮಾಡಿ ಡಿಲಿಟ್ ಮಾಡಿದ್ದನ್ನ ಖಂಡಿಸಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಪರಿಷತ್ ಮಾಜಿ ಸದಸ್ಯ ವೈ.ಎ. ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ನಿಕಟಪೂರ್ವ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.
-
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications