ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲ್ಯಾಣ ಕರ್ನಾಟಕಕ್ಕೆ ಮಹತ್ವದ ಸುದ್ದಿ ಕೊಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!

|
Google Oneindia Kannada News

ಬೆಂಗಳೂರು, ಆ. 31 ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಕ್ಕಳು, ಹೆಣ್ಣುಮಕ್ಕಳ ಅಪೌಷ್ಟಿಕತೆ ನಿವಾರಣೆ, ಆರೋಗ್ಯ ಮತ್ತು ಶಿಕ್ಷಣದಲ್ಲಿ ಇತರ ಜಿಲ್ಲೆಗಳಿಗೆ ಸಮಾನವಾಗಿಸಲು ಮತ್ತು ರಾಷ್ಟ್ರೀಯ ಸರಾಸರಿಯ ಮಟ್ಟಕ್ಕೆ ತರಲು, ವಿಶೇಷ ಯೋಜನೆ ರೂಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಮುಖ್ಯ ಕಾರ್ಯದರ್ಶಿಗಳ ಆಹ್ವಾನದ ಮೇರೆಗೆ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಕೆಡಿಪಿ ಸಭೆ ನಡೆಸಿದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. "ಮಹಿಳಾ ಮತ್ತು ಮಕ್ಕಳ ವಿಚಾರದಲ್ಲಿ ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿದ್ದು ಹಾಗೂ ಶಿಕ್ಷಣದಲ್ಲಿಯೂ ಹಿಂದುಳಿದಿದ್ದಾರೆ. ಈ ಮೂರು ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಹೆಣ್ಣುಮಕ್ಕಳು ಮತ್ತು ಮಕ್ಕಳ ಆರೋಗ್ಯ ಮತ್ತು ಶಿಕ್ಷಣದಲ್ಲಿ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿನ ಮಟ್ಟಕ್ಕೆ ಒಯ್ಯಲು ವಿಶೇಷ ಯೋಜನೆ ರೂಪಿಸಲಾಗುವುದು" ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ದಿವ್ಯಾಂಗರಿಗೆ ಅನುಕಂಪವಲ್ಲ; ಅವಕಾಶ ನೀಡಬೇಕು: ಸಿಎಂ ಬೊಮ್ಮಾಯಿದಿವ್ಯಾಂಗರಿಗೆ ಅನುಕಂಪವಲ್ಲ; ಅವಕಾಶ ನೀಡಬೇಕು: ಸಿಎಂ ಬೊಮ್ಮಾಯಿ

ನೀಡಲಾದ ಗುರಿ ಸಾಧನೆಯಾಗಬೇಕು

ನೀಡಲಾದ ಗುರಿ ಸಾಧನೆಯಾಗಬೇಕು

"ಮಂಗಳವಾರ ನಡೆದ ಸಭೆಯಲ್ಲಿ ಹಲವಾರು ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಗಿದೆ. ಎರಡನೇ ತ್ರೈಮಾಸಿಕ ಅಂತ್ಯವಾಗುತ್ತಿದೆ. ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು. ಬಿಡುಗಡೆಯಾದ ಅನುದಾನಕ್ಕೆ ಎದುರು ಆಗಿರುವ ವೆಚ್ಚಗಳ ಬಗ್ಗೆ ಪರಿಶೀಲಿಸಲಾಯಿತು. ಮುಂದಿನ ತ್ರೈಮಾಸಿಕದ ಒಳಗೆ, ನೀಡಲಾದ ಗುರಿ ಸಾಧನೆಯಾಗಬೇಕು" ಎಂದು ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.

ರಾಜ್ಯದ ಪಾಲು ಬಿಡುಗಡೆ ಮಾಡಿ

ರಾಜ್ಯದ ಪಾಲು ಬಿಡುಗಡೆ ಮಾಡಿ

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದ ಪಾಲು ಬಿಡುಗಡೆಯಾದ ಕೂಡಲೇ ರಾಜ್ಯದ ಪಾಲನ್ನೂ ಬಿಡುಗಡೆ ಮಾಡಿ, ಜನರಿಗೆ ಅಗತ್ಯವಿರುವ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು. ಕೇಂದ್ರ ಅನುದಾನ ಸದ್ಬಳಕೆಗೆ ಹೆಚ್ಚಿನ ಒತ್ತು ಕೊಡಬೇಕೆಂದು ಸೂಚಿಸಲಾಯಿತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಾಡುತ್ತಿದೆ ಕಡತ ಸಮಸ್ಯೆ!

ಕಾಡುತ್ತಿದೆ ಕಡತ ಸಮಸ್ಯೆ!

ಅನುದಾನ ಬಿಡುಗಡೆಯಾಗಿದ್ದಲ್ಲಿ ಅಭಿವೃದ್ಧಿ ಮತ್ತು ಇತರ ವೆಚ್ಚಗಳಿಗೆ ಬಳಕೆಯಾಗುವ ಮೊತ್ತದ ವಿವರ ಮುಂದಿನ ಸಭೆಯಲ್ಲಿ ಒದಗಿಸುವಂತೆ ಸೂಚಿಸಲಾಗಿದೆ. ಕಡತಗಳು ನಗರಾಭಿವೃದ್ಧಿ, ಕಂದಾಯ, ಶಿಕ್ಷಣ ಮೊದಲಾದ ಇಲಾಖೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿಲೇವಾರಿಗೆ ಬಾಕಿ ಇದ್ದು, ಇವುಗಳನ್ನು ಆದ್ಯತೆಯ ಮೇರೆಗೆ ವಿಲೇವಾರಿ ಮಾಡುವಂತೆ ಸಿಎಂ ಬಾವರಾಜ ಬೊಮ್ಮಾಯಿನ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಡತ ವಿಲೇವಾರಿ ವಿಳಂಬದಿಂದ ಬಹಳಷ್ಟು ಅಭಿವೃದ್ಧಿಗೆ ಹಿನ್ನೆಡೆ ಆಗುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ನೋಡಲ್ ಅಧಿಕಾರಿ ನೇಮಕಕ್ಕೆ ಸಿಎಂ ಸೂಚನೆ!

ನೋಡಲ್ ಅಧಿಕಾರಿ ನೇಮಕಕ್ಕೆ ಸಿಎಂ ಸೂಚನೆ!

ನ್ಯಾಯಾಲಯ ಪ್ರಕರಣಗಳು ಹೆಚ್ಚಿರುವ ಇಲಾಖೆಗಳಲ್ಲಿ ಇಲಾಖೆಯ ಉಪ ಕಾರ್ಯದರ್ಶಿ ಅಥವಾ ಅಧೀನ ಕಾರ್ಯದರ್ಶಿಯವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿ, ಕಾನೂನು ಇಲಾಖೆ ಮತ್ತು ವಕೀಲರ ತಂಡದೊಂದಿಗೆ ಸಮನ್ವಯ ವಹಿಸಿ, ಪ್ರಕರಣಗಳ ಇತ್ಯರ್ಥಕ್ಕೆ ಕ್ರಮ ವಹಿಸಬೇಕು. ನ್ಯಾಯಾಲಯದ ಪ್ರಕರಣಗಳು ವಿಳಂಬವಾಗುವುದರಿಂದ ಜನ ಸಮಾನ್ಯರಿಗೆ ಬಹಳಷ್ಟು ಸಮಸ್ಯೆಗಳಾಗುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವರಿಸಿದ್ದಾರೆ.


ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜುಲೈ 2021 ರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

Recommended Video

ತಾಲಿಬಾನ್ ಕೈಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳು: ಕಾಶ್ಮೀರದಲ್ಲಿರೋ ಪಾಕ್ ಉಗ್ರರಿಗೂ ರವಾನೆಯಾದ ವೆಪನ್ಸ್ | Oneindia

English summary
Chief Minister Basavaraj Bommai has said that a special scheme will be implemented for the education of children in Raichur, Yadagiri and Kalaburagi districts. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X