ಜಿಎಸ್‌ಟಿ ಬಗ್ಗೆ ಚರ್ಚಿಸಲು ಸೆ.14ರಂದು ವಿಶೇಷ ಅಧಿವೇಶನ
ಬೆಂಗಳೂರು, ಸೆಪ್ಟೆಂಬರ್ 01 : ಮಹತ್ವದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧೇಯಕದ ಬಗ್ಗೆ ಚರ್ಚೆ ನಡೆಸಲು ಕರ್ನಾಟಕ ವಿಧಾನಸಭೆ ವಿಶೇಷ ಅಧಿವೇಶನ ನಡೆಯಲಿದೆ. ಈಗಾಗಲೇ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಹತ್ವದ ಜಿಎಸ್‌ಟಿ ವಿಧೇಯಕ ಅಂಗೀಕಾರವಾಗಿದೆ.
'ಸರಕು ಮತ್ತು ಸೇವಾ ತೆರಿಗೆ ವಿಧೇಯಕ ಮಂಡಿಸಲು ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಒಂದು ದಿನದ ವಿಶೇಷ ಅಧಿವೇಶನ ಸೆಪ್ಟೆಂಬರ್ 14 ರಂದು ನಡೆಯಲಿದೆ' ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.[ಕರ್ನಾಟಕದ ಆದಾಯದ ಮೇಲೆ ಜಿಎಸ್ಟಿ ಪರಿಣಾಮವೇನು?]

ಬೆಂಗಳೂರಿನ ವಿಧಾನಸೌಧದಲ್ಲಿ ಸೆ.14ರ ಬುಧವಾರ ಬೆಳಗ್ಗೆ 11 ಗಂಟೆಗೆ ವಿಶೇಷ ಅಧಿವೇಶನ ಆರಂಭವಾಗಲಿದೆ. ಸರಕು ಮತ್ತು ಸೇವಾ ತೆರಿಗೆ ವಿಧೇಯಕವನ್ನು ಮಂಡಿಸಿ, ಚರ್ಚೆ ನಡೆಸಿ ಉಭಯ ಸದನಗಳಲ್ಲೂ ಅಂಗೀಕಾರ ಪಡೆಯಲಾಗುತ್ತದೆ.[ಜಿಎಸ್ಟಿ ಎಂದರೇನು? ಇದರಿಂದ ಯಾರಿಗೆ ಪ್ರಯೋಜನ?]
ರಾಷ್ಟ್ರದಾದ್ಯಂತ ಏಕರೂಪ ತೆರಿಗೆಯನ್ನು ಜಾರಿಗೆ ತರುವ, ಸರಕು ಮತ್ತು ಸೇವಾ ತೆರಿಗೆ ವಿಧೇಯಕ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ. ರಾಜ್ಯದಲ್ಲಿಯೂ ವಿಧೇಯಕಕ್ಕೆ ಒಪ್ಪಿಗೆ ಸಿಕ್ಕಿದರೆ ವ್ಯಾಟ್ ಅಥವಾ ಮೌಲ್ಯವರ್ಧಿತ ತೆರಿಗೆಯಲ್ಲಿ ಅರ್ಧದಷ್ಟು ಆದಾಯವನ್ನು ಕೇಂದ್ರ ಸರ್ಕಾರದೊಂದಿಗೆ ರಾಜ್ಯ ಹಂಚಿಕೊಳ್ಳಬೇಕು.[ಜಿಎಸ್ಟಿ ಪರಿಣಾಮ, ಯಾವುದು ಏರಿಕೆ? ಯಾವುದು ಇಳಿಕೆ?]
ತೆರಿಗೆ ಹಂಚಿಕೆಯಿಂದ ರಾಜ್ಯಕ್ಕೆ ಆಗುವ ನಷ್ಟವನ್ನು 5 ವರ್ಷಗಳವರೆಗೆ ಕೇಂದ್ರ ಸರ್ಕಾರ ಭರಿಸುತ್ತದೆ. ಬೇರೆ ರಾಜ್ಯದಿಂದ ವಸ್ತುಗಳು ರಾಜ್ಯ ಪ್ರವೇಶ ಮಾಡುವ ಮುನ್ನ ಸಲ್ಲಿಕೆಯಾಗುತ್ತಿದ್ದ ಶೇ. 2 ತೆರಿಗೆ ಜಿಎಸ್‌ಟಿ ನಿಯಮದ ಅನ್ವಯ ಕೇಂದ್ರದ ಪಾಲಾಗಲಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications