ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರ, ಮುಂಬೈನಿಂದ ಬರುವವರಿಗೆ ಹೊಸ ಮಾರ್ಗಸೂಚಿ

|
Google Oneindia Kannada News

ಬೆಂಗಳೂರು, ನವೆಂಬರ್ 09; ಕರ್ನಾಟಕ ಸರ್ಕಾರ ಮುಂಬೈ, ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸೋಮವಾರದ ಮಾಹಿತಿಯಂತೆ ಮಹಾರಾಷ್ಟ್ರದಲ್ಲಿ 11,451 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ.

ಸೋಮವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮಹಾರಾಷ್ಟ್ರ, ಮುಂಬೈ ನಗರದಿಂದ ಕಡಿಮೆ ಅವಧಿಯ ಭೇಟಿಯಾಗಿ ರಾಜ್ಯಕ್ಕೆ ಆಗಮಿಸುವವರಿಗೂ ಈ ಮಾರ್ಗಸೂಚಿ ಅನ್ವಯವಾಗಲಿದೆ.

ಬೆಂಗಳೂರು; ಕೋವಿಡ್ ಮರೆತ ಜನ, ಮಾಸ್ಕ್ ಹಾಕೋದೆ ಇಲ್ಲ! ಬೆಂಗಳೂರು; ಕೋವಿಡ್ ಮರೆತ ಜನ, ಮಾಸ್ಕ್ ಹಾಕೋದೆ ಇಲ್ಲ!

ರಸ್ತೆ,ರೈಲು, ವಿಮಾನದ ಮೂಲಕ ರಾಜ್ಯಕ್ಕೆ ಆಗಮಿಸುವ ಎಲ್ಲರೂ ಈ ಮಾರ್ಗಸೂಚಿ ಪಾಲನೆ ಮಾಡಬೇಕು. ಗಡಿಭಾಗದ ಜಿಲ್ಲೆಗಳಲ್ಲಿ ಕಣ್ಗಾವಲು ಇಡುವ ಕುರಿತು ಸಹ ಸೂಚನೆಗಳನ್ನು ಇಲಾಖೆ ನೀಡಿದೆ.

 ಕೋವಿಡ್ ಲಸಿಕೆ ಬಗ್ಗೆ ಜರ್ಮನಿಗರ ಆತಂಕ: ಅಡ್ಡಪರಿಣಾಮದ ಬಗ್ಗೆ Fact-Check ಕೋವಿಡ್ ಲಸಿಕೆ ಬಗ್ಗೆ ಜರ್ಮನಿಗರ ಆತಂಕ: ಅಡ್ಡಪರಿಣಾಮದ ಬಗ್ಗೆ Fact-Check

Special Surveillance Measures For Arrivals From Mumbai And Maharashtra

ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್ ಪರಿಸ್ಥಿತಿ ಹತೋಟಿಗೆ ಬಂದಿದೆ. ಆದರೆ ರಾಜ್ಯಕ್ಕೆ ಹೋಲಿಕೆ ಮಾಡಿದರೆ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಅಧಿಕವಾಗಿದೆ. ಆದ್ದರಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ.

 ಯುರೋಪ್‌ನಲ್ಲಿ ಕೊರೊನಾ ಪ್ರಕರಣಗಳ ಏರಿಕೆ ಬಗ್ಗೆ WHO ಕಳವಳ ಯುರೋಪ್‌ನಲ್ಲಿ ಕೊರೊನಾ ಪ್ರಕರಣಗಳ ಏರಿಕೆ ಬಗ್ಗೆ WHO ಕಳವಳ

ಕೋವಿಡ್ ಮಾರ್ಗಸೂಚಿಗಳ ಅನ್ವಯ ರಾಜ್ಯಕ್ಕೆ ಬರುವ ಪ್ರವಾಸಿಗರು ಕೋವಿಡ್ ನೆಗೆಟಿವ್ ಪ್ರಮಾಣ ಪತ್ರಗಳನ್ನು ತಂದರೆ ಯಾವುದೇ ಪರೀಕ್ಷೆಗಳನ್ನು ಮಾಡುವುದಿಲ್ಲ ಎಂದು ಕರ್ನಾಟಕ ಸ್ಪಷ್ಟಪಡಿಸಿದೆ.

ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಶೀತ, ಕೆಮ್ಮು, ಜ್ವರದ ಲಕ್ಷಣಗಳನ್ನು ಹೊಂದಿರಬಾರದು. ಗಡಿಗಳಲ್ಲಿ ಕಡ್ಡಾಯವಾಗಿ ಥರ್ಮಲ್ ಸ್ಕ್ಯಾನ್‌ಗೆ ಒಳಗಾಗಬೇಕು ಎಂದು ಸೂಚಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರವಿದ್ದರೆ ಅದನ್ನು ತೋರಿಸಬೇಕು.

ರಾಜ್ಯದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಕಡಿಮೆ ಅವಧಿಯ ಪ್ರವಾಕ್ಕೆ ಆಗಮಿಸಿದವರು ವಾಪಸ್ ಹೋಗುವ ದಿನಾಂಕದ ಟಿಕೆಟ್ ತೋರಿಸಬೇಕು.

ಕೋವಿಡ್ ಪ್ರಕರಣಗಳು ಇಳಿಕೆ; ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳಲ್ಲಿ ಭಾರೀ ಇಳಿಕೆಯಾಗಿದೆ. ಸೋಮವಾರದ ಹೆಲ್ತ್ ಬುಲೆಟಿನ್ ಪ್ರಕಾರ ಕಳೆದ 24 ಗಂಟೆಯಲ್ಲಿ 283 ಹೊಸ ಪ್ರಕರಣ ದಾಖಲಾಗಿದೆ.

24 ಗಂಟೆಯಲ್ಲಿ ರಾಜ್ಯದಲ್ಲಿ 6 ಜನರು ಮೃತಪಟ್ಟಿದ್ದು, 290 ಜನರು ಗುಣಮುಖಗೊಂಡಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 7989 ಆಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 2990235.

ಸೋಮವಾರ ಮಹಾರಾಷ್ಟ್ರದಲ್ಲಿ 11,451 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದ ಪ್ರತಿದಿನದ ಪಾಸಿಟಿವಿಟಿ ದರ ಶೇ 1.35 ಆಗಿದೆ. ರಾಜ್ಯದ ಒಟ್ಟು ಪ್ರಕರಣಗಳ ಸಂಖ್ಯೆ 6,617,654.

ರಾಜ್ಯದಲ್ಲಿ ಕೋವಿಡ್ ಮಾದರಿಗಳ ಪರೀಕ್ಷೆ, ಹೊಸ ಪ್ರಕರಣಗಳ ಸಂಖ್ಯೆ ಎರಡೂ ಇಳಿಕೆಯಾಗಿದೆ. ಈ ವಾರ ಪ್ರತಿದಿನ ಸುಮಾರು 81 ಸಾವಿರ ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಕಳೆದ ವಾರ ಇದು 1,10,502 ಆಗಿತ್ತು.

ನವೆಂಬರ್ ಮೊದಲ ವಾರದಲ್ಲಿ ರಾಜ್ಯದಲ್ಲಿ 6576 ಹೊಸ ಪ್ರಕರಣಗಳು ದಾಖಲಾಗಿದ್ದವು. ಪ್ರತಿದಿನ ಸರಾಸರಿ 939 ಪ್ರಕರಣ ಪತ್ತೆಯಾಗಿತ್ತು. ಈ ವಾರ ದೀಪಾವಳಿ ಹಬ್ಬದ ಪ್ರಯುಕ್ತ ಕೋವಿಡ್ ಮಾದರಿಗಳ ಪರೀಕ್ಷೆಗಳನ್ನು ಕಡಿಮೆ ಮಾಡಲಾಗಿದೆ.

ಅಕ್ಟೋಬರ್ 25 ರಿಂದ 31ರ ತನಕ 7,73,516 ಮಾದರಿಗಳ ಪರೀಕ್ಷೆ ಮಾಡಲಾಗಿತ್ತು. ಅಕ್ಟೋಬರ್ ಮೊದಲ ವಾರದಲ್ಲಿ ಪ್ರತಿದಿನ ಸರಾಸರಿ 1233 ಹೊಸ ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿತ್ತು.

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಹತೋಟಿಗೆ ಬಂದಿದೆ. ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 1.8 ರಿಂದ 1.53ರಷ್ಟಿತ್ತು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಮುಂಬೈ, ಪುಣೆ, ಅಹಮದ್ ನಗರ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಗುಣಮುಖ ಪ್ರಮಾಣ ಹೆಚ್ಚಾಗುತ್ತಿದೆ. ಆದರೆ ಕಣ್ಗಾವಲು ಕ್ರಮಗಳನ್ನು ನಾವು ಸಡಿಲಗೊಳಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

English summary
Karnataka issued a fresh circular on putting in place special surveillance measures for arrivals from Maharashtra and Mumbai city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X