Tirain Tiimings: ತಾಳಗುಪ್ಪ, ಮೈಸೂರು, ಬೆಂಗಳೂರು, ವಿಜಯಪುರ, ಬೆಳಗಾವಿ ಮಾರ್ಗದಲ್ಲಿ ರೈಲು ಪ್ರಯಾಣ ಮಾಡುವವರಿಗೆ ಭರ್ಜರಿ ಸುದ್ದಿ!
ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಹೆಚ್ಚುವರಿ ದಟ್ಟಣೆ ನಿವಾರಣೆಗೆ ಯಶವಂತಪುರ ಟು ಬೆಳಗಾವಿ & ಬೆಂಗಳೂರಿನ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಟು ವಿಜಯಪುರ ರೈಲು ನಿಲ್ದಾಣಗಳ ಮಧ್ಯೆ ವಿಶೇಷ ರೈಲು ಸಂಚಾರ ಮಾಡಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ಈ ಬಗ್ಗೆ ನೈರುತ್ಯ ರೈಲ್ವೆ ವಿಭಾಗದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ ಮಾಹಿತಿ ನೀಡಿದ್ಧಾರೆ. ಹಾಗಾದ್ರೆ ಯಾವೆಲ್ಲ ವಿಶೇಷ ರೈಲುಗಳು ಯಾವಗ ಸಂಚಾರ ಮಾಡಲಿವೆ? ಬನ್ನಿ ತಿಳಿಯೋಣ.
ರೈಲು ಸಂಖ್ಯೆ 06555 / 06556 ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ಮಾಡಲಿದೆ. ಸೆಪ್ಟೆಂಬರ್ 5 ಕ್ಕೆ ರೈಲು ಸಂಖ್ಯೆ 06555 ಯಶವಂತಪುರ ಮೂಲಕ ಸಂಜೆ 7.30 ಕ್ಕೆ ಹೊರಟು, ಮರುದಿನ ಬೆಳಗ್ಗೆ 7.15ಕ್ಕೆ ಬೆಳಗಾವಿ ತಲುಪಲಿದೆ. ಹಿಂದಿರುಗುವ ಪ್ರಯಾಣದಲ್ಲಿ, ಸೆಪ್ಟೆಂಬರ್ 6 ರಂದು ರೈಲು ಸಂಖ್ಯೆ 06556 ಬೆಳಗಾವಿಯಿಂದ ಬೆಳಗ್ಗೆ 8:45ಕ್ಕೆ ಹೊರಟು, ಅದೇ ದಿನ ರಾತ್ರಿ 8.00ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ. ಈ ರೈಲು ಎರಡು ದಿಕ್ಕಿನಲ್ಲಿ ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ ಸೇರಿದಂತೆ ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ & ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಇರಲಿವೆ. ಹಾಗಾದರೆ ತಾಳಗುಪ್ಪ ಟು ಮೈಸೂರು ಎಕ್ಸ್‌ಪ್ರೆಸ್ ವಿಶೇಷ ರೈಲು ಸಂಚಾರ ನಡೆಸುವುದು ಯಾವಾಗ?

ಬೆಂಗಳೂರು-ವಿಜಯಪುರ-ಎಸ್ಎಂವಿಟಿ
ರೈಲು ಸಂಖ್ಯೆಯಾದ 06577 / 06578 ಎಸ್ಎಂವಿಟಿ ಬೆಂಗಳೂರು-ವಿಜಯಪುರ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಸೆಪ್ಟೆಂಬರ್ 5 & 7 ರಂದು ರೈಲು ಸಂಖ್ಯೆ 06577 ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 9:00 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 2:05 ಗಂಟೆಗೆ ವಿಜಯಪುರ ತಲುಪಲಿದೆ. ಹಿಂದಿರುಗುವ ಪ್ರಯಾಣದಲ್ಲಿ, ಸೆಪ್ಟೆಂಬರ್ 6 & 8 ರಂದು ರೈಲು ಸಂಖ್ಯೆ 06578 ವಿಜಯಪುರದಿಂದ ಸಂಜೆ 7 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 11:15 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.
ವಿಶೇಷ ರೈಲು ಎರಡೂ ದಿಕ್ಕುಗಳಲ್ಲಿ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ತೋರಣಗಲ್ಲು & ಹೊಸಪೇಟೆ, ಕೊಪ್ಪಳ, ಗದಗ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲ್ಲಲಿದೆ. ಈ ರೈಲು ಒಂದು ಎಸಿ ಟು ಟೈಯರ್, ಒಂದು ಎಸಿ ತ್ರೀ-ಟೈಯರ್, ಹತ್ತು ಸ್ಲೀಪರ್ ಕ್ಲಾಸ್, ನಾಲ್ಕು ಜನರಲ್ ಸೆಕೆಂಡ್ ಕ್ಲಾಸ್ ಮತ್ತು ಎರಡು ಎಸ್‌ಎಲ್‌ಆರ್/ಡಿ ಸೇರಿ ಒಟ್ಟಾರೆ 18 ಬೋಗಿಗಳು ಒಳಗೊಂಡಿರುತ್ತವೆ. ಮುಂಗಡ ಬುಕಿಂಗ್ & ವೇಳಾಪಟ್ಟಿ ಮಾಹಿತಿಗೆ ಪ್ರಯಾಣಿಕರು www.enquiry.indianrail.gov.in ಜಾಲತಾಣಕ್ಕೆ ಭೇಟಿ ನೀಡಿ ಅಥವಾ 139 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಲು ತಿಳಿಸಲಾಗಿದೆ.
ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್
ಪ್ರಾಯೋಗಿಕ ಆಧಾರದ ಮೇಲೆ ಮಲ್ಲೇಶ್ವರಂ ನಿಲ್ದಾಣದಲ್ಲಿ ರೈಲು ಸಂಖ್ಯೆ 16228 ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ ಮೂರು ತಿಂಗಳ ಕಾಲ ಅಕ್ಟೋಬರ್ 22, 2024 ರಿಂದ ಜನವರಿ 21, 2025 ರವರೆಗೆ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಈ ರೈಲು ಮಲ್ಲೇಶ್ವರಂ ನಿಲ್ದಾಣಕ್ಕೆ ಬೆಳಿಗ್ಗೆ 4:34 ಗಂಟೆಗೆ ಆಗಮಿಸಿ 4:35 ಗಂಟೆಗೆ ನಿರ್ಗಮಿಸಲಿದೆ ಎಂದು ತಿಳಿಸಿದ್ದಾರೆ.
ಯಶವಂತಪುರ ಟು ಬೆಳಗಾವಿ ವಿಶೇಷ ರೈಲು
ಮತ್ತೊಂದು ಕಡೆ ರೈಲು ಸಂಖ್ಯೆ 06557 / 06558 ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ವ್ಯವಸ್ಥೆ ಕೂಡ ಮಾಡಲಾಗಿದೆ. ಸೆಪ್ಟೆಂಬರ್ 6 ರಂದು ರೈಲು ಸಂಖ್ಯೆ 06557 ಯಶವಂತಪುರದಿಂದ ರಾತ್ರಿ 10:15 ಗಂಟೆಗೆ ಹೊರಟು, ಮರುದಿನವೇ ಬೆಳಗ್ಗೆ 10:15 ಗಂಟೆಗೆ ಬೆಳಗಾವಿ ತಲುಪಲಿದೆ. ಮತ್ತೊಂದು ಕಡೆ ಹಿಂದಿರುಗುವ ಪ್ರಯಾಣದಲ್ಲಿ, ಸೆಪ್ಟೆಂಬರ್ 8 ರಂದು ರೈಲು ಸಂಖ್ಯೆ 06558 ಬೆಳಗಾವಿಯಿಂದ ಸಂಜೆ 5.30 ಕ್ಕೆ ಹೊರಟು, ಮರುದಿನವೇ ಬೆಳಗ್ಗೆ 4.30 ಕ್ಕೆ ಯಶವಂತಪುರ ತಲುಪಲಿದೆ.
ಈ ರೈಲು ಎರಡು ದಿಕ್ಕುಗಳಲ್ಲಿ ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಇರಲಿವೆ. ಈ ರೈಲುಗಳು (06555/56 & 06557/58) ಒಂದು ಎಸಿ ಟು ಟೈಯರ್, ನಾಲ್ಕು ಎಸಿ ತ್ರೀ-ಟೈಯರ್, ಹದಿಮೂರು ಸ್ಲೀಪರ್ ಕ್ಲಾಸ್, ಎರಡು ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್‌ಎಲ್‌ಆರ್/ಡಿ ಸೇರಿ ಒಟ್ಟು 22 ಬೋಗಿಗಳು ಒಳಗೊಂಡಿರುತ್ತವೆ.
-
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್‌ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ












Click it and Unblock the Notifications