ಮತದಾರರ ಪಟ್ಟಿ ಪರಿಷ್ಕರಣೆ; ಹೆಸರು ಸೇರಿಸಲು ಅವಕಾಶ

ಬೆಂಗಳೂರು, ನವೆಂಬರ್ 19: ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯನ್ನು ಆರಂಭಿಸಲಾಗಿದೆ.

ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಆರಂಭಿಸಲಾಗಿದ್ದು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ತೆಗೆದು ಹಾಕುವುದಕ್ಕೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಮತದಾರರ ಪಟ್ಟಿಗೆ ಹೆಸರು ಸೇರಿಸುವುದು, ತಿದ್ದುಪಡಿ, ಪಟ್ಟಿಯಿಂದ ಹೆಸರು ತೆಗೆದು ಹಾಕುವುದಕ್ಕೆ ಡಿಸೆಂಬರ್ 17ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Special Voter Registration Drive New Name Can Add To List

ನವೆಂಬರ್ 22, 29 ಮತ್ತು ಡಿಸೆಂಬರ್ 6 ಮತ್ತು 16ರಂದು ವಿಶೇಷ ಪ್ರಚಾರ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಹೊಸದಾಗಿ ಸಲ್ಲಿಕೆಯಾಗಿ ಅರ್ಜಿಗಳನ್ನು ಇತ್ಯರ್ಥಗೊಳಿಸಲು ಜನವರಿ 7 ಕೊನೆಯ ದಿನ.

ಹೊಸ ಕರಡು ಮತದಾರರ ಪಟ್ಟಿಯನ್ನು ಜನವರಿ 14ರೊಳಗೆ ಪ್ರಕಟಿಸಲಾಗುತ್ತದೆ. ಭಾವಚಿತ್ರ ಇರುವ ಅಂತಿಮ ಮತದಾರರ ಪಟ್ಟಿ ಜನವರಿ 18ರಂದು ಪ್ರಕಟವಾಗಲಿದೆ.

ಜನರು ನವೆಂಬರ್ 22 ರಿಂದ ಪ್ರತಿ ಭಾನುವಾರಗಳಂದು ತಮ್ಮ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ, ನಿಗಧಿತ ನಮೂನೆ ಅರ್ಜಿಗಳನ್ನು ಸಲ್ಲಿಸುವಂತೆ ಮನವಿ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+