• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನಾಯಕತ್ವ ಬದಲಾವಣೆ ಗಾಳಿ ಸುದ್ದಿ ಬೆನ್ನಲ್ಲೇ, ಬಿಜೆಪಿ ಶಾಸಕರ ಸಭೆ ಕರೆದ ಸಿಎಂ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಮೇ 26:ರಾಜ್ಯದಲ್ಲಿ ಎಲ್ಲೆಲ್ಲೂ ನಾಯಕತ್ವ ಬದಲಾವಣೆಯ ಗಾಳಿ ಸುದ್ದಿ ಹರಡಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶಾಸಕರ ಸಭೆ ಕರೆದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿ ಹೈಕಮಾಂಡ್ ಶಾಸಕರ ಸಭೆ ಕರೆಯುವಂತೆ ಯಡಿಯೂರಪ್ಪ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಜೂನ್ 7 ರಂದು ಯಡಿಯೂರಪ್ಪ ಶಾಸಕರ ಸಭೆ ಕರೆದಿದ್ದಾರೆ.

ಕರ್ನಾಟಕದಲ್ಲಿ ಲಾಕ್‌ಡೌನ್ ಜೂನ್ 7ರವರೆಗೆ ವಿಸ್ತರಣೆಕರ್ನಾಟಕದಲ್ಲಿ ಲಾಕ್‌ಡೌನ್ ಜೂನ್ 7ರವರೆಗೆ ವಿಸ್ತರಣೆ

ಕೊರೊನಾ ಅಬ್ಬರ ನಡುವೆ ಬಿಜೆಪಿಯಲ್ಲಿ ದಿಢೀರ್ ಆಗಿ ರಾಜಕೀಯ ಬೆಳವಣಿಗೆ ಗರಿಗೆದರಿದೆ. ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡುತ್ತಾ ಎಂಬ ಪ್ರಶ್ನೆಯೊಂದು ಮೂಡಿದೆ, ಈ ಮೂಲಕ ಬಿಜೆಪಿಯಲ್ಲಿನ ಬೆಳವಣಿಗೆಗಳು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ರಾಜ್ಯದ ಸದ್ಯ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಸಮಾಲೋಚನೆ ನಡೆದಿದೆ ಎನ್ನಲಾಗಿದ್ದು, ಈ ಭೇಟಿಯ ಬಳಿಕ ಈಗ ಶಾಸಕರ ಸಭೆಗೆ ಸಿಎಂಗೆ ಹೈಕಮಾಂಡ್ ಸೂಚನೆ ನೀಡಿದೆ ಎಂಬುದಾಗಿ ತಿಳಿದುಬಂದಿದೆ.

   Corona ನಿಯಂತ್ರಣಕ್ಕೆ ಹೊಸ ಮಾರ್ಗ ಕಂಡುಹಿಡಿದ Sriramulu | Oneindia Kannada
    ಶಾಸಕರ ಸಭೆಗೆ ಸೂಚನೆ

   ಶಾಸಕರ ಸಭೆಗೆ ಸೂಚನೆ

   ಬಿಜೆಪಿ ಶಾಸಕರ ಸಭೆ ನಡೆಸುವಂತೆ ಸಿಎಂ ಯಡಿಯೂರಪ್ಪಗೆ ಪಕ್ಷದ ಹೈಕಮಾಂಡ್ ಫರ್ಮಾನು ಹೊರಡಿಸಿದೆ. ಈ ಬಗ್ಗೆ ನಿನ್ನೆ ನಡೆದಿದ್ದ ಸಂಪುಟ ಸಭೆಯಲ್ಲೂ ಸಿಎಂ ಸುಳಿವು ನೀಡಿದ್ದಾರೆ. ಜೂನ್ ಮೊದಲ ವಾರದಲ್ಲಿ ಶಾಸಕರ ಸಭೆಗೆ ಹೈಕಮಾಂಡ್ ಆದೇಶ ನೀಡಿರುವುದಾಗಿ ತಿಳಿಸಿದ್ದಾರೆ.

    ಶಾಸಕರ ಸಭೆ ಕರೆದ ಸಿಎಂ

   ಶಾಸಕರ ಸಭೆ ಕರೆದ ಸಿಎಂ

   ಜೂನ್ 7ರಂದು ಪಕ್ಷದ ಶಾಸಕರ ಸಭೆಗೆ ಸಿಎಂ ಬಿಎಸ್‍ವೈ ನಿರ್ಧರಿಸಿದ್ದಾರೆ. ಹೈಕಮಾಂಡ್ ಆದೇಶ ಬಳಿಕ ಬಿಜೆಪಿ ಶಾಸಕರ ಸಭೆಗೆ ಸಿಎಂ ತೀರ್ಮಾನ ಮಾಡುತ್ತಾರೆ. ಹಾಗಾದ್ರೆ ಶಾಸಕರ ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ.

    ಸಿಎಂ ಬದಲಾವಣೆ ಬಗ್ಗೆ ವಿರೋಧಿ ಬಣದ ಮಾತು

   ಸಿಎಂ ಬದಲಾವಣೆ ಬಗ್ಗೆ ವಿರೋಧಿ ಬಣದ ಮಾತು

   ಸಿಎಂ ಬದಲಾವಣೆ ಬಗ್ಗೆ ಚರ್ಚೆ ಆಗುತ್ತೆ ಅಂತ ಬಿಎಸ್‍ವೈ ವಿರೋಧಿ ಬಣ ಹೇಳುತ್ತಿದೆ. ಆದರೆ ಬಿಎಸ್‍ವೈ ಬಣ ಮಾತ್ರ ಕೋವಿಡ್ ನಿರ್ವಹಣೆ ಬಗ್ಗೆಯಷ್ಟೇ ಚರ್ಚೆ ಆಗುತ್ತೆ ಎನ್ನುತ್ತಿದೆ.

    ಯಡಿಯೂರಪ್ಪ ಮನೆಯಲ್ಲಿ ಈಗಾಗಲೇ ಸಭೆ ನಡೆದಿತ್ತು

   ಯಡಿಯೂರಪ್ಪ ಮನೆಯಲ್ಲಿ ಈಗಾಗಲೇ ಸಭೆ ನಡೆದಿತ್ತು

   ಶನಿವಾರ ಸಿಎಂ ಯಡಿಯೂರಪ್ಪ ಮನೆಯಲ್ಲಿ ಸಭೆಯೊಂದು ನಡೆದಿತ್ತು. ಕಾವೇರಿ ನಿವಾಸದಲ್ಲಿ 1 ಗಂಟೆಗೂ ಅಧಿಕ ಹೊತ್ತು ನಡೆದ ಮಾತುಕತೆಯಲ್ಲಿ ಆರ್‍ಎಸ್‍ಎಸ್ ನಾಯಕರು ಸಿಎಂ ಭೇಟಿ ಮಾಡಿದ್ದರು. ಆರ್‍ಎಸ್‍ಎಸ್ ಮುಖಂಡ ಮುಕುಂದ್ ಸಿಎಂ ಭೇಟಿ ಮಾಡಿ ದೀರ್ಘ ಸಮಾಲೋಚನೆ ನಡೆಸಿದ್ದರು.

   English summary
   Speculation on leadership change continues to haunt BS Yediyurappa; calls for Party MLAs meeting.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X