Sumalatha : ಸುಮಲತಾ ಬಿಜೆಪಿ ಸೇರ್ಪಡೆ: ‘ಪ್ರಕ್ರಿಯೆ ಪ್ರಗತಿಯಲ್ಲಿದೆ, ಚರ್ಚೆ ನಡೆಯುತ್ತಿದೆ’ ಎಂದ ಸಿಎಂ ಬೊಮ್ಮಾಯಿ
ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರಬಹುದು ಎಂಬ ಊಹಾಪೋಹಗಳು ಜೋರಾಗಿ ಕೇಳಿಬರುತ್ತಿವೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಬೊಮ್ಮಾಯಿ ಅವರು ಸುಮಲತಾ ಅಂಬರೀಷ್ ಅವರೊಂದಿಗೆ ಮಾತುಗತೆಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.
ಬೆಂಗಳೂರು, ಮಾರ್ಚ್ 09: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಮಂಡ್ಯ ಲೋಕಸಭಾ ಸಂಸದೆ ಸುಮಲತಾ ಅಂಬರೀಶ್ ಅವರು ಆಡಳಿತಾರೂಢ ಬಿಜೆಪಿ ಸೇರಬಹುದು ಎಂಬ ಊಹಾಪೋಹಗಳು ಜೋರಾಗಿ ಕೇಳಿಬರುತ್ತಿವೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುಮಲತಾ ಅಂಬರೀಷ್ ಅವರೊಂದಿಗೆ ಮಾತುಗತೆಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.
ಸಂಸದೆ ಸುಮಲತಾ ಅವರು ನಾಳೆ (ಶುಕ್ರವಾರ) ಮಂಡ್ಯದಲ್ಲಿ ನಡೆಯಲಿರುವ ಮಾಧ್ಯಮಗೋಷ್ಠಿಯಲ್ಲಿ ಬಿಜೆಪಿ ಸೇರುವ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆಯಿದೆ. ಮಾರ್ಚ್ 12 ರಂದು ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಹಾಗೂ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರ ಮೋದಿಯವರು ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯದಲ್ಲಿ ನಡೆಯಲಿರುವ 1.5 ಕಿ.ಮೀ ಉದ್ದದ ರೋಡ್‌ಶೋನಲ್ಲಿ ಅವರು ಭಾಗವಹಿಸುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಸುಮಲತಾ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಉಹಾಪೋಹಗಳು ದಟ್ಟವಾಗಿವೆ.

ಸುಮಲತಾ ಬಿಜೆಪಿಗೆ ಸೇರ್ಪಡೆಗೊಳ್ಳುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, 'ಪ್ರಕ್ರಿಯೆ ಪ್ರಗತಿಯಲ್ಲಿದೆ, ಚರ್ಚೆ ನಡೆಯುತ್ತಿದೆ' ಎಂದು ವಿಜಯಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಮೇ ತಿಂಗಳ ವೇಳೆಗೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅವರು ಮಂಡ್ಯ ಜಿಲ್ಲೆಯ ಯಾವುದಾದರೂ ಒಂದು ಕ್ಷೇತ್ರದಿಂದ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಸುಮಲತಾ ಬಿಜೆಪಿ ಸೇರುವ ಬಗ್ಗೆ ಯಾವುದೇ ವಿವರಗಳನ್ನು ಬಹಿರಂಗಪಡಿಸಲು ಬಯಸದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. 'ನೀವು ಇಷ್ಟು ದಿನ ಕಾಯುತ್ತಿದ್ದೀರಿ, ಇನ್ನೂ 24 ಗಂಟೆಗಳ ಕಾಲ ಕಾಯಿರಿ. ನಾನು ದೃಢೀಕರಿಸಲು ಅಥವಾ ನಿರಾಕರಿಸಲು ಸಾಧ್ಯವಿಲ್ಲ. ನನಗೆ ಈ ಬಗ್ಗೆ ತಿಳಿದಿಲ್ಲ' ಎಂದು ಹೇಳಿದ್ದಾರೆ.

'ಪ್ರತಿಯೊಬ್ಬ ವ್ಯಕ್ತಿಯು ತನ್ನದೇ ಆದ ಶಕ್ತಿಯನ್ನು ಹೊಂದಿದ್ದಾನೆ. ಯಾರಾದರೂ ಪಕ್ಷಕ್ಕೆ ಸೇರುವ ಮೂಲಕ, ಅದು ಖಂಡಿತವಾಗಿಯೂ ಆಯಾ ಕ್ಷೇತ್ರಗಳಲ್ಲಿ ಪಕ್ಷವನ್ನು ಬಲಪಡಿಸುತ್ತದೆ' ಎಂದು ಅವರು ತಿಳಿಸಿದರು.
ಇತ್ತೀಚೆಗಷ್ಟೇ ಅಂಬರೀಶ್ ಅವರ ಅಭಿಮಾನಿಗಳು ಎಂದು ಹೇಳಿಕೊಳ್ಳುವ ಸಮಾನ ಮನಸ್ಕ ಜನರ ಗುಂಪು ಮಂಡ್ಯದಲ್ಲಿ ಸಭೆ ನಡೆಸಿ, ರಾಜ್ಯ ರಾಜಕಾರಣಕ್ಕೆ ಬರುವಂತೆ ಸುಮಲತಾ ಅವರಿಗೆ ಒತ್ತಾಯಿಸಿದೆ.
ತೀವ್ರ ಪೈಪೋಟಿಯಿಂದ ಕೂಡಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ 2019ರಲ್ಲಿ 1,25,876 ಮತಗಳಿ ಅಂತರದಿಂದ ಗೆದ್ದಿದ್ದರು. ಅವರು ಅಂದಿನ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ಜೆಡಿಎಸ್‌ನ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ನಡೆದಿದ್ದ ಹಣಾಹಣಿಯು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿತ್ತು.
ಸುಮಲತಾ ಅವರು ಆರಂಭದಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್ ಬಯಸಿದ್ದರು. ಆದರೆ, ಸಮ್ಮಿಶ್ರ ಸರ್ಕಾರದ ನಿರ್ಧಾರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸುಮಲತಾ ಸ್ಪರ್ಧಿಸಿದ್ದರು.
ವಿಧಾನಸಭೆಯಲ್ಲಿ ಸಂಪೂರ್ಣ ಬಹುಮತ ಗಳಿಸಲು ಮಂಡ್ಯ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಗರಿಷ್ಠ ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಬಿಜೆಪಿ ಸುಮಲತಾ ಅವರನ್ನು ಪಕ್ಷಕ್ಕೆ ಸೆಳೆಯಲು ಪ್ರಯತ್ನಗಳನ್ನು ನಡೆಸುತ್ತಿದೆ. ಅದರ ಕೆಲವು ಮುಖಂಡರು ಮತ್ತು ಸಚಿವರು ಬಹಿರಂಗವಾಗಿ ಪಕ್ಷಕ್ಕೆ ಆಹ್ವಾನಿಸಿದ್ದಾರೆ ಮತ್ತು ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಅವರ ಬೆಂಬಲಿಗರು ಬಿಜೆಪಿ ಸೇರಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications